Mysore
18
overcast clouds

Social Media

ಭಾನುವಾರ, 07 ಡಿಸೆಂಬರ್ 2025
Light
Dark

ಶ್ರೀರಂಗಪಟ್ಟಣ| ಕಾವೇರಿ ನದಿ ಪ್ರವಾಹದಲ್ಲಿ ಸಿಲುಕಿದ್ದ ವ್ಯಕ್ತಿಯ ರಕ್ಷಣೆ

rescue

ಶ್ರೀರಂಗಪಟ್ಟಣ: ಕಾವೇರಿ ನದಿ ಪ್ರವಾಹದಲ್ಲಿ ಸಿಲುಕಿದ್ದ ವ್ಯಕ್ತಿಯನ್ನು ರಕ್ಷಣೆ ಮಾಡುವಲ್ಲಿ ಅಗ್ನಿಶಾಮಕ ಸಿಬ್ಬಂದಿ ಯಶಸ್ವಿಯಾಗಿದ್ದಾರೆ.

ಶ್ರೀರಂಗಪಟ್ಟಣ ಟೌನ್‌ನ ರೈಲ್ವೆ ನಿಲ್ದಾಣದ ಬಳಿ ಈ ಘಟನೆ ನಡೆದಿದ್ದು, ಬಳ್ಳಾರಿ ಮೂಲದ ಲಕ್ಷ್ಮಣ ಸಹನಿ ಎಂಬುವವರೇ ರಕ್ಷಣೆಗೊಳಗಾದ ವ್ಯಕ್ತಿಯಾಗಿದ್ದಾರೆ.

ಕಬ್ಬು ಕಡಿಯಲು ಬಳ್ಳಾರಿಯಿಂದ ಮಂಡ್ಯಕ್ಕೆ ಬಂದಿದ್ದ ಲಕ್ಷ್ಮಣ ಸಹನಿ ಅವರು, ಕೆಲಸ ಮುಗಿಸಿ ಸ್ನಾನ ಮಾಡಲೆಂದು ಕಾವೇರಿ ನದಿಗೆ ಇಳಿದಿದ್ದಾರೆ. ಈ ವೇಳೆ ಹೆಚ್ಚಿನ ನೀರು ಬಂದ ಪರಿಣಾಮ ನೀರಿನ ರಭಸಕ್ಕೆ ಕೊಚ್ಚಿಹೋಗಿ ನಡುಗಡ್ಡೆಯಲ್ಲಿ ಸಿಲುಕಿದ್ದರು. ಈ ವೇಳೆ ಸ್ಥಳೀಯರು ಅಗ್ನಿಶಾಮಕ ಠಾಣೆಗೆ ಮಾಹಿತಿ ನೀಡಿದ್ದರು.

ಸ್ಥಳಕ್ಕೆ ಬಂದ ಅಗ್ನಿಶಾಮಕ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಲಕ್ಷ್ಮಣ ಸಹನಿಯನ್ನು ರಕ್ಷಣೆ ಮಾಡಿದ್ದು, ಸಾರ್ವಜನಿಕರ ಪ್ರಶಂಸೆಗೆ ಪಾತ್ರರಾಗಿದ್ದಾರೆ.

Tags:
error: Content is protected !!