ಮಂಡ್ಯ: ತಾಲೂಕಿನ ಶ್ರೀರಂಗಪಟ್ಟಣದ ಪ್ರವಾಹ ಪೀಡಿತ ವೆಲ್ಲಿಸ್ಲಿ ಸೇತುವೆ ಮುಳುಗಡೆ ಪ್ರದೇಶಕ್ಕೆ ಶನಿವಾರ(ಜು.27) ಕಂದಾಯ ಸಚಿವ ಕೃಷ್ಣ ಭೈರೇಗೌಡ ಭೇಟಿ ನೀಡಿ ಪರೀಶಿಲನೆ ನಡೆಸಿದರು.
ಶಾಸಕ ರಮೇಶ್ ಬಂಡಿಸಿದ್ದೇಗೌಡ, ಜಿಲ್ಲಾಧಿಕಾರಿ ಡಾ.ಕುಮಾರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ ಸೇರಿದಂತೆ ಇತರೆ ಅಧಿಕಾರಿಗಳೊಂದಿಗೆ ಪ್ರವಾಹ ಪರಿಸ್ಥಿತಿ ಪರಿಶೀಲಿಸಿದ ಸಚಿವರು, ಕಳೆದ ಬಾರಿಯ ನೆರೆಯ ಪ್ರವಾಹಕ್ಕೆ ಹೋಲಿಸಿದರೆ ಈ ಬಾರಿಯ ಅನಾಹುತ ಕಡಿಮೆ ಇದೆ. ಸಂಬಂಧಪಟ್ಟ ಅಧಿಕಾರಿಗಳು ಇದುವರೆಗಿನ ಬೆಳೆ ನಷ್ಟದ ಬಗ್ಗೆ ಸೂಕ್ತ ವರದಿ ನೀಡಲಿದ್ದಾರೆ. ಸೂಕ್ತ ರೀತಿಯಲ್ಲಿ ಪರಿಹಾರ ನೀಡಲಾಗುವುದು ಎಂದು ತಿಳಿಸಿದರು.
ಕೆಲವು ರೈತರು ನದಿಯ ಜಾಗವನ್ನು ಒತ್ತುವರಿ ಮಾಡಿಕೊಂಡು ಕೃಷಿ ಚಟುವಟಿಕೆ ಮಾಡುತ್ತಿದ್ದಾರೆ. ಆ ಜಮೀನಿಗು ಪರಿಹಾರ ನೀಡಬೇಕು ಎಂದರೆ ಹೇಗೆ ಸಾಧ್ಯ ಎಂದು ಪ್ರಶ್ನಿಸಿದ ಸಚಿವರು, ನದಿಯ ಬದಿಗಳಲ್ಲಿ ಹಾಗೂ ಜಲಾಶಯದ ಹಿನ್ನೀರು ಬದಿಯಲ್ಲಿ ನೆರೆ ಇಲ್ಲದ ಸಂದರ್ಭದಲ್ಲಿ ರೈತರು ಬೆಳೆಯನ್ನು ಬೆಳೆಯುವುದು ಹಾಗೂ ನೆರೆ ಬಂದ ಸಂದರ್ಭದಲ್ಲಿ ಹಿಂದಕ್ಕೆ ಸರಿಯುವುದು ವಾಡಿಕೆಯಾಗಿದೆ. ಇದು ಕಾನೂನಾತ್ಮಕವಾಗಿ ತಪ್ಪು ನೆರೆ ಬಂದ ಸಂದರ್ಭದಲ್ಲಿ ಪ್ರಾಣ ಹಾನಿಯಾಗಬಹುದು ಹಾಗೂ ಇಲ್ಲಿ ಬೆಳೆಯುವ ಬೆಳೆಗಳಿಗೆ ಬೆಳೆ ಹಾನಿ ಪರಿಹಾರ ಒದಗಿಸುವುದು ಸಾಧ್ಯವಿಲ್ಲ ಎಂದು ಸ್ಪಷ್ಟಪಡಿಸಿದರು.
ಕೊಡಗು: ಕೊಡಗು ಜಿಲ್ಲೆ ಶನಿವಾರಸಂತೆ ಬಳಿಯ ಗುಡುಗಳಲೆಯಲ್ಲಿ ಸಿಮೆಂಟ್ ತುಂಬಿದ್ದ ಲಾರಿ ಉರುಳಿಬಿದ್ದಿದೆ. ಶನಿವಾರಸಂತೆ–ಅರಕಲಗೂಡು ರಸ್ತೆಯ ಗುಡುಗಳಲೆ ತಿರುವಿನಲ್ಲಿ ಘಟನೆ…
ಕುಶಾಲನಗರ: ದುಬಾರೆ ಆನೆ ಶಿಬಿರದಲ್ಲಿದ್ದ ಸುಮಾರು 19 ವರ್ಷ ಪ್ರಾಯದ ಗಂಡಾನೆಯೊಂದು ಐದು ತಿಂಗಳಿಗೂ ಹೆಚ್ಚು ಕಾಲ ನಿರಂತರ ಚಿಕಿತ್ಸೆ…
ಮೈಸೂರು: ಪ್ರೀತಿಗೆ ನಿರಾಕರಿಸಿದ ಪರಿಣಾಮ ಯುವಕನೋರ್ವ ಯುವತಿಯನ್ನು ತಬ್ಬಿಕೊಂಡು ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಮೈಸೂರಿನ ವಿಜಯನಗರದ ಬಳಿ…
ಮಂಡ್ಯ: ಮನ್ಮುಲ್ ಹಾಲಿನ ಪುಡಿ ಕಲಬೆರಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಮನ್ ಮುಲ್ ಅಧ್ಯಕ್ಷ ಶಿವಕುಮಾರ್(ಶಿವಪ್ಪ)…
ಹನೂರು: ಸೋಮವಾರ ತಡರಾತ್ರಿ ಸುರಿದ ಭಾರಿ ಮಳೆಗೆ ಕ್ಷೇತ್ರದ ಹಲವು ಜಮೀನುಗಳಲ್ಲಿ ಬೆಳೆದಿದ್ದ ಬೆಳೆಗಳು ಸಂಪೂರ್ಣ ಜಲಾವೃತಗೊಂಡು ಲಕ್ಷಾಂತರ ರೂಪಾಯಿ…
ಮೈಸೂರು: ಜಿಲ್ಲೆಯ ಹುಣಸೂರು ತಾಲೂಕಿನ ನಂಜಾಪುರ ಗ್ರಾಮದಲ್ಲಿ ಹೃದಯವಿದ್ರಾವಕ ಘಟನೆ ನಡೆದಿದೆ. ರಸ್ತೆ ಬದಿ ನಿಂತಿದ್ದ ಒಂದೂವರೆ ವರ್ಷದ ಪುಟ್ಟ…