Mysore
16
broken clouds

Social Media

ಬುಧವಾರ, 21 ಜನವರಿ 2026
Light
Dark

ಶ್ರೀರಂಗಪಟ್ಟಣ | ಎಚ್‌ಐವಿ,ಏಡ್ಸ್‌ ಜಾಗೃತಿಗೆ ರೆಡ್‌ ರನ್‌ ಮ್ಯಾರಥಾನ್‌

marathon

ಶ್ರೀರಂಗಪಟ್ಟಣ : ಯುವ ಜನತೆ ಎಚ್‌ಐವಿ, ಏಡ್ಸ್‌ನಂತಹ ಮಾರಕ ಕಾಯಿಲೆಗೆ ತುತ್ತಾಗದೇ ಸುಸ್ಥಿರ ಜೀವನ ರೂಪಿಸಿಕೊಳ್ಳಬೇಕಾದ ಅವಶ್ಯಕತೆ ಇದೆ. ಹಾಗಾಗಿ ಯುವಕರು ತಾವು ಜಾಗೃತರಾಗಿ ಇತರರಿಗೂ ಎಚ್‌ಐವಿ, ಏಡ್ಸ್ ಬಗ್ಗೆ ಅರಿವು ಮೂಡಿಸಬೇಕೆಂದು ಜಿಲ್ಲಾ ಏಡ್ಸ್ ಪ್ರತಿಬಂಧಕ ಹಾಗೂ ನಿಯಂತ್ರಣ ಅಧಿಕಾರಿ ಡಾ.ಎಂ.ಎನ್.ಆಶಾಲತಾ ಸಲಹೆ ನೀಡಿದರು.

ಪಟ್ಟಣದಲ್ಲಿ ದಸರಾ ಮಹೋತ್ಸವದ ಅಂಗವಾಗಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಏಡ್ಸ್ ಪ್ರತಿಬಂಧಕ ಹಾಗೂ ನಿಯಂತ್ರಣ ಘಟಕ, ಕ್ರೀಡಾ ಮತ್ತು ಯುವ ಸಬಲೀಕರಣ ಇಲಾಖೆ ಹಾಗೂ ವಿವಿಧ ಸಂಘ ಸಂಸ್ಥೆಗಳ ಆಶ್ರಯದಲ್ಲಿ ತೀವ್ರಗೊಳಿಸಿದ ಐಇಸಿ ಪ್ರಚಾರ ಆಂದೋಲನದ-೨೦೨೫ರ ಅಂಗವಾಗಿ ಏರ್ಪಡಿಸಿದ್ದ ರೆಡ್‌ರನ್ ಮ್ಯಾರಥಾನ್ ಸ್ಪರ್ಧ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಯುವಜನರು ಹಾಗೂ ಎಲ್ಲಾ ವಯೋಮಾನದವರಿಗೆ ಎಚ್‌ಐವಿ, ಏಡ್ಸ್ ಕುರಿತು ರೆಡ್ ರನ್ ಮ್ಯಾರಥಾನ್ ಮೂಲಕ ಜಾಗೃತಿ ಮೂಡಿಸಲಾಗುತ್ತಿದೆ ಎಂದರು.

ಇದನ್ನೂ ಓದಿ:-ಯೋಗವನ್ನು ಅಂತರಾಷ್ಟ್ರೀಯ ಮಟ್ಟಕ್ಕೆ ವಿಸ್ತಾರಗೊಳಿಸಿದ ಕೀರ್ತಿ ಮೈಸೂರಿಗೆ ಸಲ್ಲುತ್ತದೆ : ಶಾಸಕ ಶ್ರೀವತ್ಸ

ಮ್ಯಾರಥಾನ್ ಸ್ಪರ್ಧೆಗೆ ಪಾಂಡವಪುರ ಉಪ ವಿಭಾಗಾಧಿಕಾರಿ ಶ್ರೀನಿವಾಸ್ ಚಾಲನೆ ನೀಡಿದರು. ಕಾರ್ಯಕ್ರಮದಲ್ಲಿ ತಹಸಿಲ್ದಾರ್ ಚೇತನಯಾದವ್, ಟಿಎಚ್‌ಒ ಡಾ. ಗಣೇಶ್‌ಪ್ರಸಾದ್, ಕ್ರೀಡಾ ಮತ್ತು ಯುವ ಸಬಲೀಕರಣ ಇಲಾಖೆ ಸಹಾಯಕ ನಿರ್ದೇಶಕ ಓಂ ಪ್ರಕಾಶ್, ಜಿಲ್ಲಾ ಮೇಲ್ವಿಚಾರಕ ವಿನಾಯಕ್, ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಎಸ್.ಡಿ. ಬೆನ್ನೂರ, ಅಚೀವರ್ಸ್ ಅಕಾಡೆಮಿ ಅಧ್ಯಕ್ಷ ರಾಘವೇಂದ್ರ, ಆರೋಗ್ಯ ನಿರೀಕ್ಷಣಾಧಿಕಾರಿ ಜಿ.ಮೋಹನ್, ರಾಜು, ಹೇಮಣ್ಣ, ಕೃಷ್ಣೇಗೌಡ, ಫಣೀಂದ್ರ ಮತ್ತಿತರರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

Tags:
error: Content is protected !!