ಶ್ರೀರಂಗಪಟ್ಟಣ : ಕಾವೇರಿ ನದಿಯಲ್ಲಿ ಮುಳುಗಿ ಇಬ್ಬರು ಕಾಲೇಜು ವಿದ್ಯಾರ್ಥಿಗಳು ಸಾನ್ನಪ್ಪಿರುವ ಘಟನೆ ಶುಕ್ರವಾರ ಜರುಗಿದೆ.
ಸ್ಯಾಮ್(20) ವೆಂಕಟೇಶ್(20) ಸಾವನ್ನಪ್ಪಿರುವ ಯುವಕರು.
ಬೆಂಗಳೂರಿನ ಖಾಸಗಿ ಕಾಲೇಜಿನಲ್ಲಿ ಬಿಬಿಎ ವ್ಯಾಸಂಗ ಮಾಡುತ್ತಿದ್ದ ಇವರು, ಕಾಲೇಜಿಗೆ ರಜೆ ಇದ್ದ ಕಾರಣ ತಮ್ಮ ಏಳು ಮಂದಿ ಸ್ನೇಹಿತರೊಂದಿಗೆ ಶ್ರೀರಂಗಪಟ್ಟಣದ ಎಡಮುರಿ ಫಾಲ್ಸ್‌ನಲ್ಲಿ ಈಜಲು ತೆರಳಿದ್ದರು. ಈ ವೇಳೆ ದುರಂತ ಸಂಭವಿಸಿದೆ ಎಂದ ಮಾಹಿತಿ ಲಭ್ಯವಾಗಿದೆ.
ಸ್ಥಳಕ್ಕೆ ಡಿವೈಎಸ್‌ಪಿ ಶಾಂತ ಮಲ್ಲಪ್ಪ ಸೇರಿದಂತೆ ಕೆ.ಆರ್.ಎಸ್ ಠಾಣಾ ಪೊಲೀಸರು ತೆರಳಿ ಪರಿಶೀಲನೆ ನಡೆಸಿದ್ದಾರೆ. ಶವಗಳನ್ನು ನದಿಯಿಂದ ಹೊರತೆಗೆದು ಮುಂದಿನ ಕ್ರಮ ಕೈಗೊಂಡಿದ್ದಾರೆ ಎಂದು ತಿಳಿದು ಬಂದಿದೆ.





