Mysore
25
overcast clouds

Social Media

ಮಂಗಳವಾರ, 01 ಏಪ್ರಿಲ 2025
Light
Dark

ಶ್ರೀರಂಗಪಟ್ಟಣ: ಕಾವೇರಿ ನದಿ ತೀರ ಸ್ವಚ್ಛತೆಗಾಗಿ ಪುರಸಭೆ ಮುಖ್ಯಾಧಿಕಾರಿಗೆ ಮನವಿ

ಮಂಡ್ಯ:  ಕಾವೇರಿ ನದಿ ತೀರ ಪ್ರದೇಶಗಳಲ್ಲಿ ಎಲ್ಲೆಂದರಲ್ಲಿ ಅಸ್ಥಿ ವಿಸರ್ಜನೆ ಕಾರ್ಯ ನಡೆಸಿ ನದಿ ನೀರನ್ನು ಮಲೀನ ಗೊಳಿಸಲಾಗುತ್ತಿದೆ. ಕೂಡಲೇ ಸ್ವಚ್ಚತೆ ಕಾಪಾಡುವಂತೆ ಹಿಂದೂ ಜಾಗರಣ ವೇದಿಕೆ ಕಾರ್ಯಕರ್ತರು ಪುರಸಭೆ ಮುಖ್ಯಾಧಿಕಾರಿಗಳಿಗೆ ಮನವಿ ಸಲ್ಲಿಸಿದ್ದಾರೆ.

ಪಟ್ಟಣದ ಪುರಸಭೆ ಕಚೇರಿಗೆ ಹಿಂದೂ ಜಾಗರಣಾ ವೇದಿಕೆ ಸಂಚಾಲಕ ಚಂದನ್ ನೇತೃತ್ವದಲ್ಲಿ ಕಾರ್ಯಕರ್ತರು ಭೇಟಿ ನೀಡಿ, ಮುಖ್ಯಾಧಿಕಾರಿ ಎಂ.ರಾಜಣ್ಣ ಅವರಿಗೆ ಮನವಿ ಸಲ್ಲಿಸಿದರು.

ಪಟ್ಟಣದ ಪುರಸಭಾ ವ್ಯಾಪ್ತಿಯ ಕಾವೇರಿ ನದಿ ತೀರದಲ್ಲಿ ಎಲ್ಲೆಂದರಲ್ಲಿ ಅಸ್ಥಿ ವಿಸರ್ಜಿಸಿ, ನದಿ ನೀರು ಮಲಿನದ ಜೊತೆ ತ್ಯಾಜ್ಯ ವಸ್ತುಗಳ ನದಿಯಲ್ಲಿ ಬಿಟ್ಟು ಮಲಿನಗೊಳ್ಳುತ್ತಿದೆ. ಕಾವೇರಿ ನದಿ ತೀರದ ಜಮೀನುಗಳಲ್ಲಿ ಅಕ್ರಮವಾಗಿ ಅಸ್ಥಿ ಪೂಜಾ ಶೆಡ್‌ಗಳ ನಿರ್ಮಿಸಿ ಧಾರ್ಮಿಕ ಕಾರ್ಯಕ್ಕೆ ಬಂದವರಿಂದ ವಸೂಲಾತಿ ನಡೆಯುತ್ತಿದೆ. ಕೂಡಲೇ ಅವುಗಳ ತೆರವು ಮಾಡಿ ಧಾರ್ಮಿಕ ಕಾರ್ಯಕ್ಕೆ ಬರುವರಿಗೆ ಅನುಕೂಲಗಳ ಕಲ್ಪಿಸಬೇಕು ಎಂದು ಒತ್ತಾಯಿಸಿದರು.

ಮನವಿ ಸ್ವೀಕರಿಸಿ ಬಳಿಕ ಮುಖ್ಯಾಧಿಕಾರಿ ಎಂ. ರಾಜಣ್ಣ ಮಾತನಾಡಿ, ಕಾವೇರಿ ನದಿಗೆ ಅನುಪಯುಕ್ತ ವಸ್ತುಗಳು ಸೇರಿದಂತೆ ಅಸ್ಥಿ ವಿರ್ಜನೆ ಜೊತೆ ತ್ಯಾಜ್ಯಗಳ ಬಿಟ್ಟು ನದಿ ನೀರು ಮಲೀನ ಕುರಿತು ಅದರ ಸಂರಕ್ಷಣೆಗೆ ವಿಷಯವಾಗಿ ಹೈಕೋರ್ಟ್‌ನಲ್ಲಿ ಕುಶಾಲ್ ಕುಮಾರ್ ಕೌಶಿಕ್ ಮತ್ತಿತರರು ರಿಟ್ ಅರ್ಜಿ ಸಲ್ಲಿದ್ದಾರೆ.

ಹೈಕೋರ್ಟ್ ಆದೇಶದಂತೆ ಮಂಡ್ಯ ಅಭಿವೃದ್ಧಿ ಪ್ರಾಧಿಕಾರದ ಆಯುಕ್ತರ ಅಧ್ಯಕ್ಷತೆಯಲ್ಲಿ ಪಾಂಡವಪುರ ಉಪವಿಭಾಗಾಧಿಕಾರಿ ಮಾರ್ಗದರ್ಶನದಲ್ಲಿ ತಹಶಿಲ್ದಾರ್, ಪುರಸಭೆ ಅಧ್ಯಕ್ಷರು, ಸದಸ್ಯರ ಸಭೆ ಸಹ ನಡೆಸಲಾಗಿದೆ.

ಯಾವುದೇ ಸಮಸ್ಯೆಗಳು ಬಾರದಂತೆ ಬರುವ ಪ್ರವಾಸಿಗರು ಧಾರ್ಮಿಕ ಕಾರ್ಯ ನಡೆಸುವರಿಗೆ ಮೂಲಭೂತ ಸೌಕರ್ಯಗಳಿಗೆ ಒತ್ತು ನೀಡಲು ಡಿಪಿಆರ್ ಸಿದ್ದತೆ ಮಾಡಿ ಸರ್ಕಾರದ ಗಮನಕ್ಕೆ ತಂದ ನಂತರ ಕಾರ್ಯರೂಪಗೊಳಿಸಲಾಗುತ್ತದೆ ಎಂದರು.

ಈ ವೇಳೆ ವೇದಿಕೆ ಸದಸ್ಯರಾದ ಲಕ್ಷ್ಮಿನಾರಾಯಣ, ರಾಘು, ಚೇತನ್ ಸೇರಿದಂತೆ ಇತರರು ಮನವಿ ಸಲ್ಲಿಸಿದರು.

Tags: