ಮಂಡ್ಯ: ಕಾವೇರಿ ನದಿ ತೀರ ಪ್ರದೇಶಗಳಲ್ಲಿ ಎಲ್ಲೆಂದರಲ್ಲಿ ಅಸ್ಥಿ ವಿಸರ್ಜನೆ ಕಾರ್ಯ ನಡೆಸಿ ನದಿ ನೀರನ್ನು ಮಲೀನ ಗೊಳಿಸಲಾಗುತ್ತಿದೆ. ಕೂಡಲೇ ಸ್ವಚ್ಚತೆ ಕಾಪಾಡುವಂತೆ ಹಿಂದೂ ಜಾಗರಣ ವೇದಿಕೆ ಕಾರ್ಯಕರ್ತರು ಪುರಸಭೆ ಮುಖ್ಯಾಧಿಕಾರಿಗಳಿಗೆ ಮನವಿ ಸಲ್ಲಿಸಿದ್ದಾರೆ.
ಪಟ್ಟಣದ ಪುರಸಭೆ ಕಚೇರಿಗೆ ಹಿಂದೂ ಜಾಗರಣಾ ವೇದಿಕೆ ಸಂಚಾಲಕ ಚಂದನ್ ನೇತೃತ್ವದಲ್ಲಿ ಕಾರ್ಯಕರ್ತರು ಭೇಟಿ ನೀಡಿ, ಮುಖ್ಯಾಧಿಕಾರಿ ಎಂ.ರಾಜಣ್ಣ ಅವರಿಗೆ ಮನವಿ ಸಲ್ಲಿಸಿದರು.
ಪಟ್ಟಣದ ಪುರಸಭಾ ವ್ಯಾಪ್ತಿಯ ಕಾವೇರಿ ನದಿ ತೀರದಲ್ಲಿ ಎಲ್ಲೆಂದರಲ್ಲಿ ಅಸ್ಥಿ ವಿಸರ್ಜಿಸಿ, ನದಿ ನೀರು ಮಲಿನದ ಜೊತೆ ತ್ಯಾಜ್ಯ ವಸ್ತುಗಳ ನದಿಯಲ್ಲಿ ಬಿಟ್ಟು ಮಲಿನಗೊಳ್ಳುತ್ತಿದೆ. ಕಾವೇರಿ ನದಿ ತೀರದ ಜಮೀನುಗಳಲ್ಲಿ ಅಕ್ರಮವಾಗಿ ಅಸ್ಥಿ ಪೂಜಾ ಶೆಡ್‌ಗಳ ನಿರ್ಮಿಸಿ ಧಾರ್ಮಿಕ ಕಾರ್ಯಕ್ಕೆ ಬಂದವರಿಂದ ವಸೂಲಾತಿ ನಡೆಯುತ್ತಿದೆ. ಕೂಡಲೇ ಅವುಗಳ ತೆರವು ಮಾಡಿ ಧಾರ್ಮಿಕ ಕಾರ್ಯಕ್ಕೆ ಬರುವರಿಗೆ ಅನುಕೂಲಗಳ ಕಲ್ಪಿಸಬೇಕು ಎಂದು ಒತ್ತಾಯಿಸಿದರು.
ಮನವಿ ಸ್ವೀಕರಿಸಿ ಬಳಿಕ ಮುಖ್ಯಾಧಿಕಾರಿ ಎಂ. ರಾಜಣ್ಣ ಮಾತನಾಡಿ, ಕಾವೇರಿ ನದಿಗೆ ಅನುಪಯುಕ್ತ ವಸ್ತುಗಳು ಸೇರಿದಂತೆ ಅಸ್ಥಿ ವಿರ್ಜನೆ ಜೊತೆ ತ್ಯಾಜ್ಯಗಳ ಬಿಟ್ಟು ನದಿ ನೀರು ಮಲೀನ ಕುರಿತು ಅದರ ಸಂರಕ್ಷಣೆಗೆ ವಿಷಯವಾಗಿ ಹೈಕೋರ್ಟ್‌ನಲ್ಲಿ ಕುಶಾಲ್ ಕುಮಾರ್ ಕೌಶಿಕ್ ಮತ್ತಿತರರು ರಿಟ್ ಅರ್ಜಿ ಸಲ್ಲಿದ್ದಾರೆ.
ಹೈಕೋರ್ಟ್ ಆದೇಶದಂತೆ ಮಂಡ್ಯ ಅಭಿವೃದ್ಧಿ ಪ್ರಾಧಿಕಾರದ ಆಯುಕ್ತರ ಅಧ್ಯಕ್ಷತೆಯಲ್ಲಿ ಪಾಂಡವಪುರ ಉಪವಿಭಾಗಾಧಿಕಾರಿ ಮಾರ್ಗದರ್ಶನದಲ್ಲಿ ತಹಶಿಲ್ದಾರ್, ಪುರಸಭೆ ಅಧ್ಯಕ್ಷರು, ಸದಸ್ಯರ ಸಭೆ ಸಹ ನಡೆಸಲಾಗಿದೆ.
ಯಾವುದೇ ಸಮಸ್ಯೆಗಳು ಬಾರದಂತೆ ಬರುವ ಪ್ರವಾಸಿಗರು ಧಾರ್ಮಿಕ ಕಾರ್ಯ ನಡೆಸುವರಿಗೆ ಮೂಲಭೂತ ಸೌಕರ್ಯಗಳಿಗೆ ಒತ್ತು ನೀಡಲು ಡಿಪಿಆರ್ ಸಿದ್ದತೆ ಮಾಡಿ ಸರ್ಕಾರದ ಗಮನಕ್ಕೆ ತಂದ ನಂತರ ಕಾರ್ಯರೂಪಗೊಳಿಸಲಾಗುತ್ತದೆ ಎಂದರು.
ಈ ವೇಳೆ ವೇದಿಕೆ ಸದಸ್ಯರಾದ ಲಕ್ಷ್ಮಿನಾರಾಯಣ, ರಾಘು, ಚೇತನ್ ಸೇರಿದಂತೆ ಇತರರು ಮನವಿ ಸಲ್ಲಿಸಿದರು.
ಗುಂಡ್ಲುಪೇಟೆ : ಜಾನುವಾರು ಹಾಗೂ ಜಾನುವಾರು ಮೇಯಿಸುತ್ತಿದ್ದ ರೈತರೊಬ್ಬರ ಮೇಲೆ ಹುಲಿ ದಾಳಿ ನಡೆಸಿದೆ. ಪರಿಣಾಮ ರೈತ ಗಾಯಗೊಂಡಿದ್ದಾನೆ. ಘಟನೆ…
ಮೈಸೂರು : ರಾಜ್ಯದ ಪ್ರತಿಯೊಂದೂ ಜಿಲ್ಲೆಗಳ ವಿಶೇಷ ಉತ್ಪನ್ನಗಳ ಪರಿಚಯ, ಮಾರಾಟಕ್ಕೆ ಅವಕಾಶ ಕಲ್ಪಿಸಿಕೊಡುವ ಉದ್ದೇಶದಿಂದ ಕೇಂದ್ರ ಸರ್ಕಾರ ನಿರ್ಮಿಸುತ್ತಿರುವ…
ಬೆಳಗಾವಿ : ದ್ವೇಷ ಭಾಷಣಕ್ಕೆ ಕಡಿವಾಣ ಹಾಕುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಕಟ್ಟು ನಿಟ್ಟಿನ ಕ್ರಮಗಳನ್ನು ಕೈಗೊಳ್ಳಲು ಮುಂದಾಗಿದ್ದು, ಈ…
ಮೈಸೂರು : ಮೈಸೂರು ವಿಶ್ವವಿದ್ಯಾನಿಲಯಕ್ಕೆ ಫ್ರಾನ್ಸ್ ದೇಶದ ರಾಯಭಾರಿಗಳ ನಿಯೋಗ ಭೇಟಿ ನೀಡಿ ಫ್ರೆಂಚ್ ಭಾಷೆ ವಿಭಾಗವನ್ನು ಮರು ಆರಂಭಿಸುವ…
ಬೆಳಗಾವಿ(ಸುವರ್ಣ ವಿಧಾನ ಸೌಧ) : ಗ್ಯಾರಂಟಿ ಯೋಜನೆಗಳ ಮೂಲಕ ನಾಗರಿಕರಿಗೆ ನೇರವಾಗಿ ಹಣ ವರ್ಗಾವಣೆಯಿಂದ ಅವರ ಆರ್ಥಿಕ ಬದುಕು ಬಹಳಷ್ಟು…
ಮೈಸೂರು : ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ವತಿಯಿಂದ 2025-26ನೇ ಸಾಲಿನ ಎಸ್.ಸಿ.ಎಸ್.ಪಿ ಮತ್ತು ಟಿ.ಎಸ್.ಪಿ ಯೋಜನೆಯಡಿ ಪರಿಶಿಷ್ಟ…