ಮಂಡ್ಯ: ಕೆಆರ್‌ಎಸ್ ಜಲಾಶಯದಿಂದ ಕಾವೇರಿ ನದಿಗೆ ಅಪಾರ ಪ್ರಮಾಣದ ನೀರನ್ನು ಹೊರಬಿಟ್ಟಿರುವ ಹಿನ್ನೆಲೆಯಲ್ಲಿ ಶ್ರೀರಂಗಪಟ್ಟಣ ತಾಲ್ಲೂಕಿನ ರಾಮಕೃಷ್ಣ ವಿವೇಕಾನಂದ ಆಶ್ರಮ ಸಂಪೂರ್ಣ ಮುಳುಗಡೆಯಾಗಿದೆ.
ಕಾವೇರಿ ಜಲಾನಯನ ಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿರುವ ಪರಿಣಾಮ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್‌ಎಸ್ ಜಲಾಶಯ ಸಂಪೂರ್ಣ ಭರ್ತಿಯಾಗಿದ್ದು, ಜಲಾಶಯದಿಂದ 1.30 ಲಕ್ಷ ಕ್ಯೂಸೆಕ್ಸ್ ನೀರನ್ನು ಕಾವೇರಿ ನದಿಗೆ ಬಿಡುಗಡೆ ಮಾಡಲಾಗಿದೆ.
ಕೆಆರ್‌ಎಸ್ ಜಲಾಶಯದಿಂದ ಕಾವೇರಿ ನದಿಗೆ ಅಪಾರ ಪ್ರಮಾಣದ ನೀರನ್ನು ಬಿಡುಗಡೆ ಮಾಡಿರುವ ಹಿನ್ನೆಲೆಯಲ್ಲಿ ಜೀವನದಿ ಅಪಾಯದ ಮಟ್ಟ ಮೀರಿ ಹರಿಯುತ್ತಿದ್ದು, ನದಿ ಪಾತ್ರದ ತಗ್ಗು ಪ್ರದೇಶಗಳೆಲ್ಲಾ ಸಂಪೂರ್ಣ ಜಲಾವೃತವಾಗಿವೆ.
ಇನ್ನೂ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ ರಾಮಕೃಷ್ಣ ವಿವೇಕಾನಂದ ಆಶ್ರಮ ಸಂಪೂರ್ಣ ಮುಳುಗಡೆಯಾಗಿದ್ದು, ಸಾರ್ವಜನಿಕರ ಪ್ರವೇಶಕ್ಕೆ ನಿರ್ಬಂಧ ವಿಧಿಸಲಾಗಿದೆ.
ರಾಮಕೃಷ್ಣ ವಿವೇಕಾನಂದ ಆಶ್ರಮದ ಸುತ್ತ ಮುತ್ತಲೂ ಕಾವೇರಿ ನದಿ ನೀರು ಆವರಿಸಿದ್ದು, ಯಾವುದೇ ಅಹಿತಕರ ಘಟನೆ ನಡೆಯದಂತೆ ಪೊಲೀಸರನ್ನು ನಿಯೋಜನೆ ಮಾಡಲಾಗಿದೆ.
ಕಾವೇರಿ ನದಿ ತನ್ನ ಉದ್ದಗಲಕ್ಕೂ ಒಂದಲ್ಲಾ ಒಂದು ಸಮಸ್ಯೆ ತಂದಿದ್ದು, ಜನತೆ ಎಚ್ಚರಿಕೆಯಿಂದ ಇರುವಂತೆ ನೀರಾವರಿ ಇಲಾಖೆ ಅಧಿಕಾರಿಗಳು ಸೂಚನೆ ನೀಡಿದ್ದಾರೆ.