ಮಂಡ್ಯ: ಕೆಆರ್‌ಎಸ್ ಜಲಾಶಯದಿಂದ 1.70 ಲಕ್ಷ ಕ್ಯೂಸೆಕ್ಸ್ ನೀರನ್ನು ಹೊರಬಿಟ್ಟಿರುವ ಹಿನ್ನೆಲೆಯಲ್ಲಿ ಇತಿಹಾಸ ಪ್ರಸಿದ್ಧ ಶ್ರೀರಂಗಪಟ್ಟಣದ ವೆಲ್ಲೆಸ್ಲಿ ಸೇತುವೆ ಮುಳುಗಡೆಯಾಗಿದೆ.
ಕಾವೇರಿ ನದಿ ಆರ್ಭಟಕ್ಕೆ 240 ವರ್ಷಗಳ ಹಿಂದೆ ನಿರ್ಮಾಣ ಮಾಡಿದ್ದ ವೆಲ್ಲೆಸ್ಲಿ ಸೇತುವೆ ಸಂಪೂರ್ಣ ಮುಳುಗಡೆಯಾಗಿದೆ.
ಇನ್ನು ಕಾವೇರಿ ನದಿ ಆರ್ಭಟಕ್ಕೆ ನದಿ ತಟದಲ್ಲಿದ್ದ ದೇವಸ್ಥಾನಗಳು, ಪಶ್ಚಿಮ ವಾಹಿನಿಯಲ್ಲಿರುವ ಪುರಾತನ ಮಂಟಪ, ಧಾರ್ಮಿಕ ಶ್ರದ್ಧಾ ಕೇಂದ್ರಗಳು ಸಂಪೂರ್ಣ ಜಲಾವೃತವಾಗಿವೆ. ಶ್ರೀ ನಿಮಿಷಾಂಭ ದೇವಾಲಯದ ಸನ್ನಿಧಿಯ ಹೊರಾಂಗಣದವರೆಗೂ ಕಾವೇರಿ ನೀರಿನ ಪ್ರವಾಹ ಉಂಟಾಗಿದೆ.
ನದಿ ನೀರಿನ ಪ್ರವಾಹದಿಂದ 240 ವರ್ಷಗಳ ಹಿಂದೆ ನಿರ್ಮಿಸಿದ್ದ ವೆಲ್ಲೆಸ್ಲಿ ಸೇತುವೆ ಸಂಪೂರ್ಣ ಮುಳುಗಡೆಯಾಗಿದೆ. ಈ ಹಿನ್ನೆಲೆಯಲ್ಲಿ ಸೇತುವೆ ಬಳಿ ತೆರಳದಂತೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ.
ಕೆಆರ್‌ಎಸ್ ಜಲಾಶಯದಿಂದ ದಾಖಲೆ ಪ್ರಮಾಣದಲ್ಲಿ ನೀರನ್ನು ಹೊರಬಿಟ್ಟಿರುವ ಹಿನ್ನೆಲೆಯಲ್ಲಿ ಕಾವೇರಿ ನದಿ ಅಪಾಯದ ಮಟ್ಟ ಮೀರಿ ಹರಿಯುತ್ತಿದ್ದು, ನದಿ ಪಾತ್ರದಲ್ಲಿ ಭಾರೀ ಪ್ರವಾಹ ಉಂಟಾಗಿದೆ. ಈ ಹಿನ್ನೆಲೆಯಲ್ಲಿ ಜನತೆ ಬಹಳ ಎಚ್ಚರಿಕೆಯಿಂದ ಇರುವಂತೆ ಸೂಚನೆ ನೀಡಿದ್ದಾರೆ.