SSLC exam: Children who failed should be admitted to school: District Collector
ಮಂಡ್ಯ : ಎಸ್. ಎಸ್. ಎಲ್. ಸಿ ಪರೀಕ್ಷೆ-03 ಜುಲೈ ಮಾಹೆಯಲ್ಲಿ ನಡೆಯಲಿದೆ. ಸದರಿ ಪರೀಕ್ಷೆಯಲ್ಲಿ ಅನುತ್ತೀರ್ಣರಾದ ವಿದ್ಯಾರ್ಥಿಗಳನ್ನು ಪುನ: 10 ನೇ ತರಗತಿಗೆ ನೊಂದಾಯಿಸಿ ಎಂದು ಜಿಲ್ಲಾಧಿಕಾರಿ ಡಾ ಕುಮಾರ ಅವರು ಅಧಿಕಾರಿಗಳಿಗೆ ಸೂಚಿಸಿದರು.
ಗುರುವಾರ ಜಿಲ್ಲಾ ಪಂಚಾಯತ್ ಸಭಾಗಂಣದಲ್ಲಿ ಆಯೋಜಿಸಲಾಗಿದ್ದ ಎಸ್.ಎಸ್.ಎಲ್.ಸಿ ಪರೀಕ್ಷೆ -03 ಪೂರ್ವ ಸಿದ್ಧತಾ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿ, ಜುಲೈ 5 ರಿಂದ ಜುಲೈ 12 ರವರೆಗೆ ಎಸ್.ಎಸ್.ಎಲ್.ಸಿ ಪರೀಕ್ಷೆ -03 ನಡೆಯಲಿದ್ದು, ಜಿಲ್ಲೆಯಲ್ಲಿ 4094 ಮಕ್ಕಳು ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಅನುತ್ತೀರ್ಣರಾಗಿದ್ದಾರೆ ಅವರ ಪೈಕಿ ಪ್ರಸ್ತುತ 3845 ಮಕ್ಕಳು ಎಸ್.ಎಸ್.ಎಲ್.ಸಿ ಪರೀಕ್ಷೆ -03 ಅನ್ನು ಬರೆಯಲು ನೊಂದಾಯಿಸಿಕೊಂಡಿದ್ದಾರೆ ಎಂದು ತಿಳಿಸಿದರು.
ಅನುತ್ತೀರ್ಣವಾಗುವ ವಿದ್ಯಾರ್ಥಿಗಳು ವಿದ್ಯಾಭ್ಯಾಸ ನಿಲ್ಲಿಸಿ ಯಾವುದಾದರೂ ಉದ್ಯೋಗಕ್ಕೆ ಸೇರುವ ಸಾಧ್ಯತೆ ಇರುತ್ತದೆ ಎಂದರು.
ಅನುತ್ತೀರ್ಣರಾದ ವಿದ್ಯಾರ್ಥಿಗಳ ಪಟ್ಟಿ ಪಡೆದು ಆಯಾ ಕ್ಷೇತ್ರ ಶಿಕ್ಷಣಾಧಿಕಾರಿಗಳು ವಿದ್ಯಾರ್ಥಿಗಳ ಪೋಷಕರ ಮನವೊಲಿಸಿ ಅವರನ್ನು ಪುನ: ಹತ್ತನೇ ತರಗತಿಗೆ ದಾಖಲಿಸಿಕೊಂಡು ಮುಂದಿನ ವರ್ಷ ಪರೀಕ್ಷೆ ಬರೆಸಿದರೆ ಕಂಡಿತ ಉತ್ತೀರ್ಣರಾಗುತ್ತಾರೆ ಎಂದರು.
ಸದರಿ ಸಾಲಿನಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಶೇ 50 ಕ್ಕಿಂತ ಕಡಿಮೆ ಫಲಿತಾಂಶ ಬಂದಿರುವ ಶಾಲೆಗಳನ ಮುಖ್ಯೋಪಾಧ್ಯಾಯರ ಸಭೆ ನಡೆಸಿ ಅವರಿಗೆ ಮುಂದಿನ ಸಾಲಿನಲ್ಲಿ ಫಲಿತಾಂಶ ಉತ್ತಮ ಪಡಿಸಲು ಕಾರ್ಯಾಗಾರ ನಡೆಸಿ ಎಂದು ಸಲಹೆ ನೀಡಿದರು.
ಪರೀಕ್ಷೆ -03 ಕ್ಕೂ ಸಹ ಪರೀಕ್ಷೆ-02 ರಲ್ಲಿ ಅನುತ್ತೀರ್ಣರಾದ ಅಂದಾಜು 249/ವಿದ್ಯಾರ್ಥಿಗಳು ಹೆಸರು ನೊಂದಾಯಿಸಿಕೊಂಡಿರುವುದಿಲ್ಲ. ಸದರಿ ವಿದ್ಯಾರ್ಥಿಗಳ ಬಗ್ಗೆ ವಿಶೇಷ ನಿಗಾ ವಹಿಸಿ ಅವರನ್ನು ಸಹ ಶಾಲೆಗೆ ಕರೆತನ್ನಿ ಎಂದರು.
ಯಾವುದೇ ಲೋಪವಿಲ್ಲದಂತೆ ಪರೀಕ್ಷೆ ನಡೆಸಿ ಜುಲೈ 5 ರಿಂದ ಜುಲೈ 12 ರವರೆಗೆ ಎಸ್.ಎಸ್.ಎಲ್.ಸಿ ಪರೀಕ್ಷೆ -03 12 ಕೇಂದ್ರಗಳಲ್ಲಿ ನಡೆಯಲಿದ್ದು, ಪರೀಕ್ಷೆಯಲ್ಲಿ ಯಾವುದೇ ಲೋಪವಾಗದಂತೆ ನಡೆಸಲು ಎಲ್ಲಾ ಕೇಂದ್ರಗಳಿಗೂ ಪ್ರೌಢಶಾಲೆಯ ಮುಖ್ಯ ಶಿಕ್ಷಕರನ್ನು ಅಧೀಕ್ಷಕರನ್ನಾಗಿ ನೇಮಿಸಲಾಗಿದೆ ಎಂದರು.
ಪರೀಕ್ಷೆಯ ದಿನದಂದು ಪ್ರಶ್ನಪತ್ರಿಕೆಯನ್ನು ಕೊಂಡೊಯ್ಯಲು ಮಾರ್ಗಾಧಿಕಾರಿಗಳನ್ನು ನೇಮಿಸಲಾಗಿದೆ ಜೊತೆಗೆ ಪೊಲೀಸ್ ಭದ್ರತೆಯನ್ನು ಕಲ್ಪಿಸಲಾಗಿದೆ. 12 ಪರೀಕ್ಷಾ ಕೇಂದ್ರಗಳಲ್ಲೂ ಸಿಸಿಟಿವಿಯನ್ನು ಅಳವಡಿಸಿದ್ದು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಲೈವ್ ವೆಬ್ ಕ್ಯಾಸ್ಟಿಂಗ್ ಮೂಲಕ ವೀಕ್ಷಿಸಲಾಗುವುದು. ಪರೀಕ್ಷಾ ಕೇಂದ್ರಗಳಲ್ಲಿ ಮೂಲಭೂತ ಸೌಕರ್ಯಗಳು ಹಾಗೂ ಆರೋಗ್ಯ ಸಿಬ್ಬಂದಿಗಳನ್ನು ಮಕ್ಕಳ ಭದ್ರತಾ ದೃಷ್ಟಿಯಿಂದ ನಿಯೋಜಿಸಲಾಗುವುದು ಎಂದು ತಿಳಿಸಿದರು.
ಪರೀಕ್ಷಾ ಕೇಂದ್ರದ 200 ಮೀಟರ್ ಸುತ್ತಲಿನ ಪ್ರದೇಶವನ್ನು ನಿಷೇಧಿತ ಪ್ರದೇಶವೆಂದು ಘೋಷಿಸಲಾಗುವುದು, ಪರೀಕ್ಷೆ ಮುಗಿದ ನಂತರ ಉತ್ತರ ಪತ್ರಿಕೆಗಳನ್ನು ಸಂರಕ್ಷಿಸಿಡಲು ಸ್ಟ್ರಾಂಗ್ ರೂಮ್ ನಿರ್ಮಿಸಲಾಗಿದ್ದು 24 ಗಂಟೆಗಳ ಕಾಲ ಪೊಲೀಸ್ ಬಂದೋಬಸ್ತ್ ನೀಡಲಾಗುವುದು ಎಂದರು.
ಸಭೆಯಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ಶಿವರಾಮೇಗೌಡ, ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಸೌಭಾಗ್ಯ, ಚಂದ್ರಶೇಖರ್, ಚಂದ್ರಕಾಂತ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
ಮಂಡ್ಯ: ಡಿವೈಡರ್‌ಗೆ ಡಿಕ್ಕಿ ಹೊಡೆದ ಕಾರು ಪಲ್ಟಿಯಾಗಿ ಬಿದ್ದ ಪರಿಣಾಮ ಸ್ಥಳದಲ್ಲೇ ಮೂವರು ಸಾವನ್ನಪ್ಪಿರುವ ಧಾರುಣ ಘಟನೆ ಮಂಡ್ಯದಲ್ಲಿ ನಡೆದಿದೆ.…
ಬೆಂಗಳೂರು: ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಮುಂದಿನ ಮೂರು ದಿನಗಳ ಕಾಲ ಬೆಳಗಿನ ಜಾವ ದಟ್ಟವಾದ ಮಂಜು ಕವಿದ ವಾತಾವರಣ ಇರಲಿದೆ.…
ಕೊಳ್ಳೇಗಾಲ: ಮೇಯಲು ಬಿಟ್ಟಿದ್ದ ಮೇಕೆಗಳು ಯೂರಿಯಾ ಗೊಬ್ಬರ ತಿಂದು ಸಾವನ್ನಪ್ಪಿರುವ ಘಟನೆ ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲ ತಾಲ್ಲೂಕಿನ ಜಾಗೇರಿ ಹಳೆ…
ಚಾಮರಾಜನಗರ: ಪಾದಾಚಾರಿಗಳ ಮೇಲೆ ಏಕಾಏಕಿ ಹುಚ್ಚುನಾಯಿ ದಾಳಿ ನಡೆಸಿದ ಪರಿಣಾಮ 7 ಮಂದಿ ಗಾಯಗೊಂಡಿರುವ ಘಟನೆ ಯಳಂದೂರು ಪಟ್ಟಣದಲ್ಲಿ ನಡೆದಿದೆ.…
ಮಡಿಕೇರಿ: ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ತಮ್ಮ ವಸ್ತುಗಳು ಏನೇ ಇದ್ದರೂ ಅಫಿಡವಿಟ್‌ನಲ್ಲಿ ತೋರಿಸಿದ್ದರೆ ಯಾವುದೇ ಸಮಸ್ಯೆ ಆಗಲ್ಲ. ಈ ಹಿಂದೆ…
ಬೆಂಗಳೂರು: ನಟ ಕಿಚ್ಚ ಸುದೀಪ್ ಅಭಿನಯದ ಮಾರ್ಕ್ ಸಿನಿಮಾ ಟ್ರೈಲರ್ ಅದ್ಧೂರಿಯಾಗಿ ಬಿಡುಗಡೆ ಮಾಡಲಾಗಿದೆ. ವಿಜಯ್ ಕಾರ್ತಿಕೇಯ-ಸುದೀಪ್ ಕಾಂಬಿನೇಷನ್‌ನಲ್ಲಿ ಮೂಡಿಬಂದಿರುವ…