ಮಂಡ್ಯ: 2023 – 24 ನೇ ಸಾಲಿನ ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟವಾಗಿದ್ದು, ಮಂಡ್ಯ ಜಿಲ್ಲೆ ಫಲಿತಾಂಶದಲ್ಲಿ ಕುಸಿತ ಕಂಡಿದೆ.2022 – 23ನೇ ಸಾಲಿನಲ್ಲಿ ಸಾಲಿನಲ್ಲಿ 2ನೇ ಸ್ಥಾನದಲ್ಲಿದ್ದ ಮಂಡ್ಯ ಜಿಲ್ಲೆ ಈ ಬಾರಿ 19ನೇ ಸ್ಥಾನಕ್ಕೆ ಕುಸಿತ ಕಂಡಿದೆ.
ಈ ಬಾರಿ ಜಿಲ್ಲೆಯಲ್ಲಿ 20,529 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು. ಈ ಪೈಕಿ 15,108 ವಿದ್ಯಾರ್ಥಿಗಳು ಉತ್ತೀರ್ಣರಾಗುವ ಮೂಲಕ ಶೇ.73.59 ಫಲಿತಾಂಶ ಬಂದಿದೆ. ಇದು ಇತ್ತೀಚಿನ ವರ್ಷದಲ್ಲಿ ಬಂದ ಅತಿ ಕಳಪೆ ಫಲಿತಾಂಶವಾಗಿದೆ. ಕಳೆದ ಸಾಲಿನಲ್ಲಿ ಶೇ.96.04 ಫಲಿತಾಂಶದೊಂದಿಗೆ ರಾಜ್ಯದಲ್ಲಿ ಎರಡನೇ ಸ್ಥಾನ ಪಡೆದಿತ್ತು.
ಒಟ್ಟಾರೆ ರಾಜ್ಯದಲ್ಲಿ ಉಡುಪಿಗೆ ಮೊದಲ ಸ್ಥಾನ ಲಭಿಸಿದೆ. ಉಡುಪಿ ಜಿಲ್ಲೆಗೆ ಶೇ. 94 ರಷ್ಟು ಫಲಿತಾಂಶ ಬಂದರೆ, ಯಾದಗಿರಿ ಜಿಲ್ಲೆ ಶೇ. 50.59 ಫಲಿತಾಂಶದೊಂದಿಗೆ ಕೊನೆಯ ಸ್ಥಾನದಲ್ಲಿದೆ. ಕ್ರಮವಾಗಿ ಎರಡನೇ ಸ್ಥಾನದಲ್ಲಿ ದಕ್ಷಿಣ ಕನ್ನಡ ಶೇ. 92.12, ಮೂರನೇ ಸ್ಥಾನದಲ್ಲಿ ಶಿವಮೊಗ್ಗ ಶೇ 88.67 ಮತ್ತು ನಾಲ್ಕನೇ ಸ್ಥಾನದಲ್ಲಿ ಕೊಡಗು ಶೇ 88.67 ರಷ್ಟು ತೇರ್ಗಡೆ ಫಲಿತಾಂಶ ಹೊಂದಿವೆ.
ಜಕಾರ್ತಾ : ಇಂಡೋನೇಷ್ಯಾದ ಉತ್ತರ ಮೊಲುಕ್ಕಾ ಸಮುದ್ರ ಪ್ರದೇಶದಲ್ಲಿ ಗುರುವಾರ ಬೆಳಗ್ಗೆ ಪ್ರಬಲ ಭೂಕಂಪ ಸಂಭವಿಸಿದೆ. ರಿಕ್ಟರ್ ಮಾಪಕದಲ್ಲಿ 7.4ರಷ್ಟು…
ಹನೂರು : ಏಕ ಕಾಲದಲ್ಲಿ ಬುಧವಾರ ತಡರಾತ್ರಿ ಕಾಡಾನೆಗಳು ರೈತರ ಜಮೀನುಗಳಲ್ಲಿ ಬೆಳೆದಿದ್ದ ಬೆಳೆಗಳ ಮೇಲೆ ದಾಳಿ ನಡೆಸಿ ಸುಮಾರು…
ಮೈಸೂರು : ಸ್ಪರ್ಧಾತ್ಮಕ ಜಗತ್ತು ಸಾಗರದಂತೆ. ಇವತ್ತಿನ ಸ್ಪರ್ಧಾತ್ಮಕ ಸಮಾಜದಲ್ಲಿ ಹೆಚ್ಚಿನ ಬದಲಾವಣೆಗಳು, ಒತ್ತಡಗಳಿದ್ದು, ಎಲ್ಲದಕ್ಕೂ ಸಿದ್ಧರಿರಬೇಕು. ನಿರಂತರ ಅಭ್ಯಾಸ…
ಹನೂರು : ತಾಲೂಕಿನ ಪೊನ್ನಾಚಿ ಗ್ರಾಮದಲ್ಲಿ ಇಬ್ಬರು ಪ್ರೇಮಿಗಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬುಧವಾರ ಬೆಳಗ್ಗೆ ಬೆಳಕಿಗೆ ಬಂದಿದೆ. ಹನೂರು…
ದಾವಣಗೆರೆ: ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ನಿರೀಕ್ಷೆಗೂ ಮೀರಿ ಜನಸ್ಪಂದನೆ ದೊರೆಯುತ್ತಿದ್ದು, ಅಭಿವೃದ್ಧಿ ಮಾಡದ ಬಿಜೆಪಿಯ ಸತ್ಯವನ್ನು ಜನರು ಅರಿತಿದ್ದಾರೆ…
ಬೆಂಗಳೂರು: ಎಲ್ಲಾ ರಾಜ್ಯದಲ್ಲೂ ದ್ವಿಭಾಷಾ ಶಿಕ್ಷಣದ ವ್ಯವಸ್ಥೆ ಜಾರಿಯಲ್ಲಿದೆ ಎಂದು ಶಾಲಾ ಶಿಕ್ಷಣ ಸಾಕ್ಷರತಾ ಶಿಕ್ಷಣ ಸಚಿವ ಮಧುಬಂಗಾರಪ್ಪ ಅವರು,…