ಮಂಡ್ಯ

SSLC 2024: ಉತ್ತೀರ್ಣಳಾಗಿದ್ದರೂ ವಿದ್ಯಾರ್ಥಿನಿ ನೇಣಿಗೆ ಶರಣು!

ಮದ್ದೂರು: ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಉತ್ತೀರ್ಣಳಾಗಿದ್ದರೂ ಆನ್‌ಲೈನ್‌ನಲ್ಲಿ ನೋಡಿ ಅನುತ್ತೀರ್ಣನಾಗಿದ್ದೇನೆ ಎಂಬ ತಪ್ಪು ತಿಳುವಳಿಕೆಯಿಂದ ಮನನೊಂದ ವಿದ್ಯಾರ್ಥಿನಿಯೊಬ್ಬಳು ನೇಣಿಗೆ ಶರಣಾಗಿರುವ ಘಟನೆ ತಾಲ್ಲೂಕಿನ ಹುಲಿಗೆರೆಪುರ ಗ್ರಾಮದಲ್ಲಿ ನಡೆದಿದೆ.

ಹುಲಿಗೆರೆಪುರ ಗ್ರಾಮದ ಮಂಚೇಗೌಡ ಎಂಬವರ ಪುತ್ರಿ, ನಗರಕೆರೆ ಗ್ರಾಮದ ಸರ್ಕಾರಿ ಅನುದಾನಿತ ಪೂರ್ಣಿಮಾ ಪ್ರೌಢಶಾಲೆಯಲ್ಲಿ ವ್ಯಾಸಂಗ ಮಾಡುತ್ತಿದ್ದ ಅಮೃತ (16) ಆತ್ಮಹತ್ಯೆಗೆ ಶರಣಾದ ಬಾಲಕಿ. ತನ್ನ ಮೊಬೈಲ್ ಮೂಲಕ ಆನ್‌ಲೈನ್‌ನಲ್ಲಿ ಅಮೃತ ಫಲಿತಾಂಶವನ್ನು ನೋಡಿದ್ದಾಳೆ. ಶೇ. 57ರಷ್ಟು ಅಂಕ ಪಡೆದು ಉತ್ತೀರ್ಣಳಾಗಿದ್ದರೂ ತಪ್ಪು ತಿಳುವಳಿಕೆಯಿಂದ ಅನುತ್ತೀರ್ಣಳಾಗಿದ್ದೇನೆ ಎಂದು ತಿಳಿದು ಮನೆಯಲ್ಲೇ ನೇಣಿಗೆ ಶರಣಾಗಿದ್ದಾಳೆ.
ಈ ಸಂಬಂಧ ಮದ್ದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

andolana

Recent Posts

ತಿರುವಿನಲ್ಲಿ ಉರುಳಿಬಿದ್ದ ಲಾರಿ: ತಪ್ಪಿದ ಭಾರೀ ಅನಾಹುತ

ಕೊಡಗು: ಕೊಡಗು ಜಿಲ್ಲೆ ಶನಿವಾರಸಂತೆ ಬಳಿಯ ಗುಡುಗಳಲೆಯಲ್ಲಿ ಸಿಮೆಂಟ್ ತುಂಬಿದ್ದ ಲಾರಿ ಉರುಳಿಬಿದ್ದಿದೆ. ಶನಿವಾರಸಂತೆ–ಅರಕಲಗೂಡು ರಸ್ತೆಯ ಗುಡುಗಳಲೆ ತಿರುವಿನಲ್ಲಿ ಘಟನೆ…

10 hours ago

ದುಬಾರೆ ಆನೆ ಶಿಬಿರದಲ್ಲಿ19 ವರ್ಷದ ಗಂಡಾನೆ ಸಾವು

ಕುಶಾಲನಗರ: ದುಬಾರೆ ಆನೆ ಶಿಬಿರದಲ್ಲಿದ್ದ ಸುಮಾರು 19 ವರ್ಷ ಪ್ರಾಯದ ಗಂಡಾನೆಯೊಂದು ಐದು ತಿಂಗಳಿಗೂ ಹೆಚ್ಚು ಕಾಲ ನಿರಂತರ ಚಿಕಿತ್ಸೆ…

11 hours ago

ಪ್ರೀತಿಗೆ ನಿರಾಕರಣೆ: ಮೈಸೂರಿನಲ್ಲಿ ಬೆಚ್ಚಿಬೀಳಿಸಿದ ಒನ್‌ ಸೈಡ್‌ ಲವ್‌ ಕೃತ್ಯ

ಮೈಸೂರು: ಪ್ರೀತಿಗೆ ನಿರಾಕರಿಸಿದ ಪರಿಣಾಮ ಯುವಕನೋರ್ವ ಯುವತಿಯನ್ನು ತಬ್ಬಿಕೊಂಡು ಪೆಟ್ರೋಲ್‌ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಮೈಸೂರಿನ ವಿಜಯನಗರದ ಬಳಿ…

12 hours ago

ಮನ್​​ಮುಲ್​ ಹಾಲಿನ ಪುಡಿ ಕಲಬೆರಕೆ ಪ್ರಕರಣ: ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಅಧ್ಯಕ್ಷ ಶಿವಕುಮಾರ್ ಅರೆಸ್ಟ್​!

ಮಂಡ್ಯ: ಮನ್​​ಮುಲ್​ ಹಾಲಿನ ಪುಡಿ ಕಲಬೆರಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಮನ್ ಮುಲ್ ಅಧ್ಯಕ್ಷ ಶಿವಕುಮಾರ್(ಶಿವಪ್ಪ)…

14 hours ago

ಭಾರೀ ಮಳೆಗೆ ರೈತರ ಬೆಳೆ ನಾಶ: ಲಕ್ಷಾಂತರ ರೂ. ನಷ್ಟ, ಮನೆ ಗೋಡೆ ಕುಸಿತ

ಹನೂರು: ಸೋಮವಾರ ತಡರಾತ್ರಿ ಸುರಿದ ಭಾರಿ ಮಳೆಗೆ ಕ್ಷೇತ್ರದ ಹಲವು ಜಮೀನುಗಳಲ್ಲಿ ಬೆಳೆದಿದ್ದ ಬೆಳೆಗಳು ಸಂಪೂರ್ಣ ಜಲಾವೃತಗೊಂಡು ಲಕ್ಷಾಂತರ ರೂಪಾಯಿ…

14 hours ago

ಸ್ಕೂಲ್ ಬಸ್‌ ಹರಿದು ಒಂದೂವರೆ ವರ್ಷದ ಮಗು ಸಾವು

ಮೈಸೂರು: ಜಿಲ್ಲೆಯ ಹುಣಸೂರು ತಾಲೂಕಿನ ನಂಜಾಪುರ ಗ್ರಾಮದಲ್ಲಿ ಹೃದಯವಿದ್ರಾವಕ ಘಟನೆ ನಡೆದಿದೆ. ರಸ್ತೆ ಬದಿ ನಿಂತಿದ್ದ ಒಂದೂವರೆ ವರ್ಷದ ಪುಟ್ಟ…

15 hours ago