ಮದ್ದೂರು: ಇಂದು ( ಮೇ 9 ) ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟಗೊಂಡಿದೆ. ಮದ್ದೂರು ತಾಲೂಕಿನ ತಗ್ಗಹಳ್ಳಿ ಸರ್ಕಾರಿ ಪ್ರೌಢಶಾಲೆಯಲ್ಲಿ ವ್ಯಾಸಂಗ ಮಾಡುತ್ತಿದ್ದ ಗ್ರಾಮದ ಮಹದೇವ್ ಅವರ ಮಗ ನಿಖಿಲ್ (16) ಎಂಬ ವಿದ್ಯಾರ್ಥಿ 3 ವಿಷಯಗಳಲ್ಲಿ ಅನುತ್ತೀರ್ಣನಾದ ಹಿನ್ನೆಲೆಯಲ್ಲಿ ಮನನೊಂದು ತಮ್ಮ ಹೊಲದಲ್ಲಿ 12 ಗಂಟೆ ಸಮಯಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಕುಟುಂಬದ ರೋಧನ ಮುಗಿಲುಮುಟ್ಟಿದ್ದು, ಮೃತ ವಿದ್ಯಾರ್ಥಿ ಪೋಷಕರ ಎರಡನೇ ಮಗನಾಗಿದ್ದು ಈತ ಆತ್ಮಹತ್ಯೆಗೆ ಶರಣಾಗಿರುವುದು ಕುಟುಂಬದ ದುಃಖಕ್ಕೆ ಕಾರಣವಾಗಿದೆ. ಬದುಕಿದ್ದರೆ ಎಷ್ಟು ಬಾರಿಯಾದರೂ ಪರೀಕ್ಷೆ ಬರೆದು ಪಾಸ್ ಮಾಡಿ ಬೇರೆ ಏನಾದರೂ ಮಾಡಬಹುದಿತ್ತು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಕುಟುಂಬಸ್ಥರು ಅಗಲಿದ ನಿಖಿಲ್‌ನನ್ನು ನೆನೆದು ಕಣ್ಣೀರು ಹಾಕಿದ್ದಾರೆ.
Disclaimer: ಯಾವುದೇ ಸಮಸ್ಯೆಗೂ ಅತ್ಮಹತ್ಯೆ ಒಂದೇ ಪರಿಹಾರವಲ್ಲ. ನಿಮ್ಮ ತೊಂದರೆಗಳನ್ನು ಆತ್ಮೀಯರ ಜತೆ ಹಂಚಿಕೊಳ್ಳಿ. ಇಲ್ಲವಾದರೆ ಈ ಸಹಾಯವಾಣಿಗೆ ಕರೆಮಾಡಿ ಮಾತನಾಡಿ: 9152987821
ಬೆಂಗಳೂರು: ನಾವು ಮುಂಚೂಣಿ ನಾಯಕರಾಗಿದ್ದೆವು. ಈಗ ಬೇರೆ ಕುದುರೆಗಳು ಬಂದಿವೆ. ಇದೊಂದು ರೇಸ್. ಈಗ ಅವರ ಕುದುರೆಗಳು ಮುಂದೆ ಇವೆ…
ಸೋಮವಾರಪೇಟೆ: ವಿಪರೀತ ಬಿಸಿಲಿನಿಂದ ಕಂಗೆಟ್ಟಿರುವ ತಾಲ್ಲೂಕಿನ ಗ್ರಾಮೀಣ ಜನರು ಮಳೆಗಾಗಿ ದೇವರ ಮೊರೆ ಹೋಗುತ್ತಿದ್ದಾರೆ. ಹಿರಿಕರ ಗ್ರಾಮದ ಕೃಷಿಕರು, ಗ್ರಾಮದ…
ಕಲಬುರ್ಗಿ: ಇಂದು(ಏಪ್ರಿಲ್.15, 2026) ರಾಜ್ಯದಲ್ಲಿಯೇ ಅತೀ ಹೆಚ್ಚು ಉಷ್ಣಾಂಶ ಕಲಬುರ್ಗಿ ಜಿಲ್ಲೆಯಲ್ಲಿ ದಾಖಲಾಗಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ. ಕಲಬುರ್ಗಿ ಜಿಲ್ಲೆಯ ನಾಲ್ಕು…
ಲಕ್ನೋ: ಕರ್ನಾಟಕ ಕಾಂಗ್ರೆಸ್‌ನ ಹಿರಿಯ ಶಾಸಕರು ಅಯೋಧ್ಯೆ ರಾಮಮಂದಿರಕ್ಕೆ ತೆರಳಿ ರಾಮಲಲ್ಲಾನ ದರ್ಶನ ಪಡೆದರು. 12 ಮಂದಿ ಶಾಸಕರು ಇಂದು…
ಯೋಗೇಶ್ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿ ಅಪರಾಧಿ ಎಂದು ತೀರ್ಪು ಬೆಂಗಳೂರು: ಧಾರವಾಡ ಜಿಲ್ಲಾ ಪಂಚಾಯತ್ ಮಾಜಿ…
ಬೆಂಗಳೂರು: ಮಂಡ್ಯಕ್ಕೆ ಆಗಮಿಸಲು ಬೆಂಗಳೂರಿಗೆ ಬಂದಿಳಿದಿದ್ದ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಸಿಎಂ ಸಿದ್ದರಾಮಯ್ಯ ಮನವಿ ಪತ್ರ ಸಲ್ಲಿಸಿದ್ದಾರೆ. ಇಂದು…