ಮಂಡ್ಯ : ಬೆಂಗಳೂರಿನ ಎಂ.ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಕಾಲ್ತುಳಿತ ಪ್ರಕರಣದಲ್ಲಿ ಮಂಡ್ಯ ಜಿಲ್ಲೆಯ ಕೆ.ಆರ್ ಪೇಟೆ ತಾಲೂಕಿನ ರಾಯಸಮದ್ರ ಗ್ರಾಮದ ಪೂರ್ಣಚಂದ್ರ(26) ಎಂಬ ವ್ಯಕ್ತಿ ಸಾವನ್ನಪ್ಪಿದ್ದಾರೆ.
ಮೈಸೂರಿನ ಖಾಸಗಿ ಕಂಪನಿಯಲ್ಲಿ ಸಿವಿಲ್ ಇಂಜಿನಿಯರ್ ಕೆಲಸ ಮಾಡುತ್ತಿದ್ದ ಪೂರ್ಣಚಂದ್ರ ಅವರು ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಬೇಕಿದ್ದ ಸಂಭ್ರಮ ಕಣ್ತುಂಬಿಕೊಳ್ಳಲು ಬೆಂಗಳೂರಿಗೆ ತೆರಳಿದ್ದರು. ಈ ವೇಳೆ ಕಾಲ್ತುಳಿತ ಉಂಟಾಗಿ ಪೂರ್ಣಚಂದ್ರ ಅವರು ಸಾವನ್ನಪ್ಪಿದ್ದಾರೆ.
ಸಾವಿನ ಸುದ್ದಿ ಕೇಳಿ ಪೂರ್ಣಚಂದ್ರ ಮನೆಯಲ್ಲಿ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.
ಸಂಪೂರ್ಣ ಮಾಹಿತಿಗೆ ಈ ಲಿಂಕ್ ಬಳಸಿ:- https://www.instagram.com/reel/DKewqoJzg7v/?igsh=MXdvajFibGs5ZmY2dg==





