Mysore
28
clear sky

Social Media

ಗುರುವಾರ, 05 ಮಾರ್ಚ್ 2026
Light
Dark

ನಿಂತಿದ್ದ ಟಿಪ್ಪರ್‌ಗೆ ಸ್ಕೂಟರ್ ಡಿಕ್ಕಿ

ಮದ್ದೂರು: ತಾಲ್ಲೂಕಿನ ಗಡಿಗ್ರಾಮ ನಿಡಘಟ್ಟ ಬಳಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಓರ್ವ ವ್ಯಕ್ತಿ ಸ್ಥಳದಲ್ಲೇ ಮೃತಪಟ್ಟು ತೀವ್ರವಾಗಿ ಗಾಯಗೊಂಡ ಮತ್ತೋರ್ವ ಮದ್ದೂರು-ಮಂಡ್ಯ ಆಸ್ಪತ್ರೆಗಳಲ್ಲಿ ಪ್ರಾಥಮಿಕ ಚಿಕಿತ್ಸೆ ಬಳಿಕ ಬೆಂಗಳೂರಿನ ನಿಮ್ಹಾನ್ಸ್ನಲ್ಲಿ ಹೆಚ್ಚಿನ ಚಿಕಿತ್ಸೆಗಾಗಿ ದಾಖಲಾಗಿದ್ದಾರೆ.

ಮೃತ ವ್ಯಕ್ತಿ ಹಾಗೂ ಗಾಯಾಳು ಪಶ್ಚಿಮ ಬಂಗಾಳ ಮೂಲದವರಾಗಿದ್ದು, ಶನಿವಾರ ಬೆಳಿಗ್ಗೆ ಫೋಟೋಶೂಟ್‌ಗೆಂದು ಮೈಸೂರಿಗೆ ತೆರಳಿ ಕೆಲಸ ಮುಗಿಸಿ ಶನಿವಾರ ಸಂಜೆ 6 ಗಂಟೆ ವೇಳೆಗೆ ಬೆಂಗಳೂರಿಗೆ ವಾಪಸ್ಸಾಗುವ ವೇಳೆ ರಸ್ತೆಬದಿ ನಿಂತಿದ್ದ ಟಿಪ್ಪರ್‌ಗೆ ಹಿಂದಿನಿAದ ಡಿಕ್ಕಿಯೊಡೆದಿದ್ದಾರೆ.

ಡಿಕ್ಕಿಯ ರಭಸಕ್ಕೆ ದ್ವಿಚಕ್ರ ವಾಹನ ಸಂಪೂರ್ಣ ಜಖಂಗೊAಡಿದ್ದು, ಬೈಬಾದ್‌ಷಾ (21) ಸ್ಥಳದಲ್ಲೇ ಮೃತಪಟ್ಟಿದ್ದು, ತೀವ್ರ ಗಾಯಗೊಂಡ ವಿಜಯ್‌ವಹರಿ (23) ನಿಮ್ಹಾನ್ಸ್ನಲ್ಲಿ ಚಿಕಿತ್ಸೆಗೆ ದಾಖಲಾಗಿದ್ದಾರೆ.

ಘಟನೆ ಸಂಬAಧ ಪ್ರಕರಣ ದಾಖಲಿಸಿಕೊಂಡಿರುವ ಮದ್ದೂರು ಸಂಚಾರಿ ಪಿಎಸ್‌ಐ ಅಯ್ಯನ್‌ಗೌಡ ಘಟನೆಗೆ ಸಂಬAಧಿಸಿದ ಲಾರಿ ಚಾಲಕ ಉತ್ತರ ಪ್ರದೇಶ ಮೂಲದ ಪಪ್ಪುಸಿಂಗ್ ಅವರನ್ನು ವಶಕ್ಕೆ ಪಡೆಯಲಾಗಿದೆ.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!