ಮಂಡ್ಯ: ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಮಂಡ್ಯ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಟಾರ್ ಚಂದ್ರು ಅವರಿಗೆ ಟಿಕೆಟ್ ನೀಡಲಾಗಿದೆ.
ಉದ್ಯಮಿಯಾದ ವೆಂಕಟರಮಣೇಗೌಡರನ್ನು ಸ್ಥಳೀಯರು ಸ್ಟಾರ್ ಚಂದ್ರು ಎಂದು ಗುರುತಿಸುತ್ತಾರೆ. ಇವರಿಗೆ ಕಾಂಗ್ರೆಸ್ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಮಂಡ್ಯ ಕ್ಷೇತ್ರದಿಂದ ಸ್ಪರ್ಧೆ ಮಾಡಲು ಟಿಕೆಟ್ ನೀಡಿದೆ.
ನಿನ್ನೆ (ಮಾ.೦೮) ಕಾಂಗ್ರೆಸ್ ತನ್ನ 39 ಜನ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದ್ದು, ಅದರಲ್ಲಿ ರಾಜ್ಯದ ಏಳು ಕ್ಷೇತ್ರಗಳಿಗೆ ಸ್ಪರ್ಧಾರ್ಥಿಗಳನ್ನು ನೇಮಕ ಮಾಡಿ ಆದೇಶ ಹೊರಡಿಸಿತ್ತು. ಇದರಲ್ಲಿ ಮಂಡ್ಯ ಕ್ಷೇತ್ರಕ್ಕೆ ಸ್ಟಾರ್ ಚಂದ್ರು ಅವರನ್ನು ಅಭ್ಯರ್ಥಿ ಎಂದು ಟಿಕೆಟ್ ಘೋಷಣೆ ಮಾಡಿತ್ತು.
ಟಿಕೆಟ್ ಘೋಷಣೆಯಾದ ಬಳಿಕ ಮಾತನಾಡಿದ ಚಂದ್ರು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಚಂದ್ರಶೇಖರ್, ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಎನ್ ಚಲುವರಾಯಸ್ವಾಮಿ ಮತ್ತು ಮಂಡ್ಯದ ಕಾರ್ಯಕರ್ತರಿಗೆ ಧನ್ಯವಾದ ಸಲ್ಲಿಸಿದರು.
ಶಿವರಾತ್ರಿಯ ಶುಭದಿನದಲ್ಲಿ ಟಿಕೆಟ್ ಸಿಕ್ಕಿರುವುದು ನನ್ನ ಅದೃಷ್ಟ. ಮುಂದಿನ ದಿನಗಳಲ್ಲಿ ಕ್ಷೇತ್ರದ ಅಭಿವೃದ್ಧಿಗಾಗಿ ಶ್ರಮವಹಿಸಿ ಕೆಲಸ ಮಾಡುಲಾಗುವುದು.
ನಮ್ಮ ಕುಟುಂಬದವರೆಲ್ಲ ಕಾಂಗ್ರೆಸ್ ಪಕ್ಷದೊಂದಿಗೆ ಗುರುತಿಸಿಕೊಂಡಿದ್ದಾರೆ ಮತ್ತು ತಾನೂ ಒಬ್ಬ ನಿಷ್ಠಾವಂತ ಕಾರ್ಯಕರ್ತನಾಗಿದ್ದು, ಸಂಸತ್ತಿಗೆ ಆಯ್ಕೆಯಾದರೆ ಕರ್ನಾಟಕ ಸರ್ಕಾರ ಜಾರಿಗೊಳಿಸಿರುವ ಎಲ್ಲ ಕಾರ್ಯಕ್ರಮಗಳ ಸೂಕ್ತ ಅನುಷ್ಠಾನಕ್ಕೆ ಶ್ರಮಿಸುತ್ತೇನೆ ಎಂದು ಚಂದ್ರು ಹೇಳಿದರು.





