ಮಂಡ್ಯ

ಲೋಕಸಭಾ ಚುನಾವಣೆ: ಮಂಡ್ಯ ಕ್ಷೇತ್ರದಿಂದ ಸ್ಟಾರ್‌ ಚಂದ್ರು ಕಣಕ್ಕೆ

ಮಂಡ್ಯ: ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಮಂಡ್ಯ ಕ್ಷೇತ್ರದಿಂದ ಕಾಂಗ್ರೆಸ್‌ ಅಭ್ಯರ್ಥಿಯಾಗಿ ಸ್ಟಾರ್‌ ಚಂದ್ರು ಅವರಿಗೆ ಟಿಕೆಟ್‌ ನೀಡಲಾಗಿದೆ.

ಉದ್ಯಮಿಯಾದ ವೆಂಕಟರಮಣೇಗೌಡರನ್ನು ಸ್ಥಳೀಯರು ಸ್ಟಾರ್‌ ಚಂದ್ರು ಎಂದು ಗುರುತಿಸುತ್ತಾರೆ. ಇವರಿಗೆ ಕಾಂಗ್ರೆಸ್‌ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಮಂಡ್ಯ ಕ್ಷೇತ್ರದಿಂದ ಸ್ಪರ್ಧೆ ಮಾಡಲು ಟಿಕೆಟ್‌ ನೀಡಿದೆ.

ನಿನ್ನೆ (ಮಾ.೦೮) ಕಾಂಗ್ರೆಸ್‌ ತನ್ನ 39 ಜನ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದ್ದು, ಅದರಲ್ಲಿ ರಾಜ್ಯದ ಏಳು ಕ್ಷೇತ್ರಗಳಿಗೆ ಸ್ಪರ್ಧಾರ್ಥಿಗಳನ್ನು ನೇಮಕ ಮಾಡಿ ಆದೇಶ ಹೊರಡಿಸಿತ್ತು. ಇದರಲ್ಲಿ ಮಂಡ್ಯ ಕ್ಷೇತ್ರಕ್ಕೆ ಸ್ಟಾರ್‌ ಚಂದ್ರು ಅವರನ್ನು ಅಭ್ಯರ್ಥಿ ಎಂದು ಟಿಕೆಟ್‌ ಘೋಷಣೆ ಮಾಡಿತ್ತು.

ಟಿಕೆಟ್ ಘೋಷಣೆಯಾದ ಬಳಿಕ ಮಾತನಾಡಿದ ಚಂದ್ರು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಚಂದ್ರಶೇಖರ್, ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಎನ್ ಚಲುವರಾಯಸ್ವಾಮಿ ಮತ್ತು ಮಂಡ್ಯದ ಕಾರ್ಯಕರ್ತರಿಗೆ ಧನ್ಯವಾದ ಸಲ್ಲಿಸಿದರು.

ಶಿವರಾತ್ರಿಯ ಶುಭದಿನದಲ್ಲಿ ಟಿಕೆಟ್ ಸಿಕ್ಕಿರುವುದು ನನ್ನ ಅದೃಷ್ಟ. ಮುಂದಿನ ದಿನಗಳಲ್ಲಿ ಕ್ಷೇತ್ರದ ಅಭಿವೃದ್ಧಿಗಾಗಿ ಶ್ರಮವಹಿಸಿ ಕೆಲಸ ಮಾಡುಲಾಗುವುದು.

ನಮ್ಮ ಕುಟುಂಬದವರೆಲ್ಲ ಕಾಂಗ್ರೆಸ್ ಪಕ್ಷದೊಂದಿಗೆ ಗುರುತಿಸಿಕೊಂಡಿದ್ದಾರೆ ಮತ್ತು ತಾನೂ ಒಬ್ಬ ನಿಷ್ಠಾವಂತ ಕಾರ್ಯಕರ್ತನಾಗಿದ್ದು, ಸಂಸತ್ತಿಗೆ ಆಯ್ಕೆಯಾದರೆ ಕರ್ನಾಟಕ ಸರ್ಕಾರ ಜಾರಿಗೊಳಿಸಿರುವ ಎಲ್ಲ ಕಾರ್ಯಕ್ರಮಗಳ ಸೂಕ್ತ ಅನುಷ್ಠಾನಕ್ಕೆ ಶ್ರಮಿಸುತ್ತೇನೆ ಎಂದು ಚಂದ್ರು ಹೇಳಿದರು.

andolanait

Recent Posts

ರೈಲ್ವೆ ಮೇಲ್ಸೇತುವೆ; ಭೂ ದರ ಕಗ್ಗಂಟು ಬಗೆಹರಿಯುವುದೇ?

ಚಾಮರಾಜನಗರ: ಚಾ.ನಗರ-ನಂಜನಗೂಡು ಹೆದ್ದಾರಿಯಲ್ಲಿರುವ ಪಣ್ಯದಹುಂಡಿ ಬಳಿ ರೈಲ್ವೆ ಮೇಲ್ಸೇತುವೆ ನಿರ್ಮಾಣಕ್ಕೆ ಸ್ವಾಧಿನಪಡಿಸಿಕೊಂಡಿರುವ ಭೂಮಿಯ ದರ ನಿಗದಿ ಕಗ್ಗಂಟಿನ ವಿಚಾರ ಅಂತಿಮ…

2 hours ago

ಜನವರಿಗೆ ಚಾ.ಬೆಟ್ಟದ ಅಭಿವೃದ್ಧಿ ಕಾಮಗಾರಿ ಶುರು

ಮೈಸೂರು: ಪ್ರಸಿದ್ಧ ಯಾತ್ರಾ ಸ್ಥಳ ಚಾಮುಂಡಿ ಬೆಟ್ಟದ ಸಮಗ್ರ ಅಭಿವೃದ್ಧಿ ಕಾಮಗಾರಿಯು ಕೇಂದ್ರ ಸರ್ಕಾರದ ಪ್ರಸಾದ ಯೋಜನೆಯಡಿ ಜನವರಿ ಮೊದಲ…

2 hours ago

ಕೋಳಿ ಮೊಟ್ಟೆಗೆ ಬರ: ಏರಿದ ದರ

ಗಿರೀಶ್ ಹುಣಸೂರು ಬಿಡಿ ಮೊಟ್ಟೆಗೆ ೭.೫೦ ರೂ.; ರಫ್ತು ಹೆಚ್ಚಳದಿಂದ ಭಾರೀ ಹೊಡೆತ  ಮೈಸೂರು: ಮಾಗಿ ಚಳಿಗಾಲ ಆರಂಭ, ಚಂಡಮಾರುತದಿಂದ ಹವಾಮಾನ…

3 hours ago

ಹಣ ದ್ವಿಗುಣಗೊಳಿಸುವುದಾಗಿ ೨೮ ಲಕ್ಷ ರೂ. ವಂಚನೆ; ದೂರು ದಾಖಲು

ಕೊಳ್ಳೇಗಾಲ: ಹಣ ದ್ವಿಗುಣಗೊಳಿಸಿಕೊಡುವುದಾಗಿ ಆಮಿಷ ಒಡ್ಡಿ, ಒಟ್ಟು ೨೮.೮೮ ಲಕ್ಷ ರೂ.ಗಳನ್ನು ವಂಚಿಸಿರುವ ಬಗ್ಗೆ ಪಟ್ಟಣ ಪೊಲೀಸ್ ಠಾಣೆಯಲ್ಲಿ ಮಮತಾ…

12 hours ago

ಅಂಬಳೆ: ಚಾಮುಂಡೇಶ್ವರಿ ದೇಗುಲದಲ್ಲಿ ಕಳ್ಳತನ

ಯಳಂದೂರು:ತಾಲ್ಲೂಕಿನ ಅಂಬಳೆ ಗ್ರಾಮದಲ್ಲಿರುವ ಸುವರ್ಣಾವತಿ ನದಿ ದಡಲ್ಲಿರುವ ಐತಿಹಾಸಿಕ ಚಾಮುಂಡೇಶ್ವರಿ ದೇಗುದಲ್ಲಿ ಗುರುವಾರ ರಾತ್ರಿ ಕಳ್ಳತನ ನಡೆದಿದ್ದು, ಲಕ್ಷಾಂತರ ರೂ.…

12 hours ago