ಮಂಡ್ಯ: ಮಾಜಿ ಮುಖ್ಯಮಂತ್ರಿ ಹಾಗೂ ಹಿರಿಯ ಮುತ್ಸದ್ದಿ ಎಸ್.ಎಂ.ಕೃಷ್ಣ ಅವರನ್ನು ಮಂಡ್ಯ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ವೆಂಕಟರಮಣೇಗೌಡ(ಸ್ಟಾರ್ ಚಂದ್ರು) ಅವರು ಭೇಟಿ ಆರ್ಶೀವಾದ ಪಡೆದರು.
ಬೆಂಗಳೂರಿನ ಸದಾಶಿವನಗರದಲ್ಲಿರುವ ಎಸ್ ಎಂ ಕೃಷ್ಣ ಅವರ ನಿವಾಸದಲ್ಲಿ ಭೇಟಿ ಮಾಡಿ ಉಭಯ ಕುಶಲೋಪರಿ ವಿಚಾರಿಸಿದರು. ಇದೆ ಸಂದರ್ಭದಲ್ಲಿ ಅವರೊಂದಿಗೆ ಪ್ರಸಕ್ತ ರಾಜಕೀಯ ವಿದ್ಯಮಾನಗಳ ಕುರಿತು ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ಚರ್ಚಿಸಿದರು.
ಶಾಸಕರಾದ ರವಿಕುಮಾರ್ ಗೌಡ, ವಿಧಾನಪರಿಷತ್ ಸದಸ್ಯರಾದ ಮರಿತಿಬ್ಬೇಗೌಡ, ದಿನೇಶ್ ಗೂಳಿಗೌಡ, ಮಾಜಿ ಶಾಸಕ ಕೆ.ಬಿ.ಚಂದ್ರಶೇಖರ್, ಮಾಜಿ ವಿಧಾನಪರಿಷತ್ ಸದಸ್ಯ ಬಿ.ರಾಮಕೃಷ್ಣ, ಮಂಡ್ಯ ಜಿಲ್ಲಾ ಕಾಂಗ್ರೆಸ್ ಕಾರ್ಯದರ್ಶಿ ಚಿದಂಬರಂ ಜೊತೆಯಲ್ಲಿದ್ದರು.