ಮಂಡ್ಯ: ವಿದ್ಯಾರ್ಥಿಗಳನ್ನು ಸ್ಪರ್ಧಾತ್ಮಕ ಯುಗಕ್ಕೆ ಅಣಿಗೊಳಿಸುವ ನಿಟ್ಟಿನಲ್ಲಿ ಮಂಡ್ಯ ವಿಶ್ವವಿದ್ಯಾಲಯದಲ್ಲಿ ತಂತ್ರಜ್ಞಾನ ಆಧಾರಿತ ಹೊಸಹೊಸ ಕೋರ್ಸ್ ಗಳನ್ನು ಆರಂಭಿಸಬೇಕು. ಈ ನಿಟ್ಟಿನಲ್ಲಿ ತಜ್ಞರ ಸಮಿತಿ ರಚಿಸಬೇಕು ಎಂದು ಮಂಡ್ಯ ವಿವಿ ವಿದ್ಯಾವಿಷಯಕ ಪರಿಷತ್ತಿನ ಸದಸ್ಯರೂ ಆದ ವಿಧಾನ ಪರಿಷತ್ತಿನ ಶಾಸಕ ಮಧು ಜಿ.ಮಾದೇಗೌಡ ಹೇಳಿದರು.
ಅವರು ಶುಕ್ರವಾರ ನಡೆದ ವಿ.ವಿಯ ಆಡಳಿಯ ಭವನದಲ್ಲಿ ಜರುಗಿದ ಸಭೆಯಲ್ಲಿ ಮಾತನಾಡಿದ ಅವರು, ಸಾಂಪ್ರದಾಯಿಕ ಶಿಕ್ಷಣಕ್ಕಷ್ಟೆ ಸೀಮಿತವಾದರೆ ವಿದ್ಯಾರ್ಥಿಗಳೂ ಆಸಕ್ತಿ ತೋರುವುದಿಲ್ಲ. ದಾಖಲಾತಿ ಕುಸಿದು ವಿವಿಗೂ ಹಿನ್ನಡೆ ಆಗಲಿದೆ. ಈಗಾಗಲೇ ಕೆಲವು ಕೋರ್ಸ್ ಗಳಲ್ಲಿ ವಿದ್ಯಾರ್ಥಿಗಳ ದಾಖಲಾತಿ ಸಂಖ್ಯೆ ಸೀಮಿತವಾಗಿದೆ. ಮುಂದಿನ ದಿನಗಳಲ್ಲಿ ಸಂಶೋಧನಾ ಚಟುವಟಿಕೆಗಳು ಕಷ್ಟ ಅನ್ನುವಂತಹ ಪರಿಸ್ಥಿತಿ ಇದೆ. ವಿದ್ಯಾರ್ಥಿಗಳು ಹೊಸದನ್ನು ಕಲಿಯಬೇಕು. ಕಲಿಕೆ ಅವರ ಬದುಕನ್ನು ಕಟ್ಟಿಕೊಳ್ಳುವಂತಿರಬೇಕು. ಹೊಸ ಕೋರ್ಸ್‌ಗಳ ಆರಂಭ ಆಗಬೇಕು. ಹಾಗಾಗಿ, ತಜ್ಞರ ಸಮಿತಿ ರಚಿಸಲು ಅಗತ್ಯ ಕ್ರಮವಹಿಸಬೇಕು ಎಂದು ಸಲಹೆ ನೀಡಿದರು.
ಮಂಡ್ಯ: ಕರ್ನಾಟಕದಲ್ಲಿ ಕನ್ನಡವೇ ಸಾರ್ವಭೌಮ. ಈ ನಿಟ್ಟಿನಲ್ಲಿ 10ನೇ ತರಗತಿವರೆಗೆ ಕನ್ನಡ ಮಾಧ್ಯಮ ಕಡ್ಡಾಯವಾಗಬೇಕು. ಇಂಗ್ಲೀಷ್ ಮಾಧ್ಯಮದ ಶಾಲೆ ತೆರೆಯುವುದನ್ನು…
ಹನೂರು: ತಾಲ್ಲೂಕಿನ ಮಹದೇಶ್ವರ ಬೆಟ್ಟಕ್ಕೆ ತೆರಳುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ಹಳ್ಳಕ್ಕೆ ಪಲ್ಟಿಯಾಗಿ ಇಬ್ಬರು ಗಾಯಗೊಂಡಿರುವ ಘಟನೆ ಜರುಗಿದೆ.…
ಕಲಬುರ್ಗಿ: ಸಂವಿಧಾನದ ವಿಧಿ 371 ( ಜೆ ) ಜಾರಿಗೆ ಬಂದ ನಂತರ ಕಲ್ಯಾಣ ಕರ್ನಾಟಕ ಭಾಗದಲ್ಲಿ ಶೈಕ್ಷಣಿಕ ಹಾಗೂ…
ಬೆಂಗಳೂರು: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಅವಾಚ್ಯ ಪದ ಬಳಕೆ ಪ್ರಕರಣ ವಿಚಾರವಾಗಿ ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಅವರನ್ನು…
ಬೆಂಗಳೂರು: ಬಿಜೆಪಿ ವಿಧಾನ ಪರಿಷತ್ ಶಾಸಕ ಸಿ.ಟಿ.ರವಿ ಬಂಧನಕ್ಕೆ ಸಂಬಂಧಿಸಿದಂತೆ ಕರ್ನಾಟಕದಲ್ಲಿ ಪ್ರಜಾಪ್ರಭುತ್ವ ಕೊನೆಯುಸಿರೆಳೆಯುತ್ತಿದೆಯೇ ಎನ್ನುವುದು ನನ್ನ ಅನುಮಾನ ಎಂದು…
ಮಂಡ್ಯ: 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಉದ್ಘಾಟನೆ ಸಮಾರಂಭದಲ್ಲಿ ಮಾತನಾಡಿದ ಕೃಷಿ ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ…