ಮಂಡ್ಯ

ರಾಜ್ಯ ಸರ್ಕಾರ ದ್ವೇಷದ ರಾಜಕಾರಣ ಮಾಡುತ್ತಿದೆ: ಕನತಾದರ್ಶನ ಕಾರ್ಯಕ್ರಮದಲ್ಲಿ ಎಚ್‌ಡಿಕೆ ಗರಂ

ಮಂಡ್ಯ: ‘ಎಚ್‌.ಎಂ.ಟಿ. ಕಾರ್ಖಾನೆ, ಭದ್ರಾವತಿಯ ವಿ.ಐ.ಎಸ್‌.ಎಲ್‌. ಕಾರ್ಖಾನೆ ಮತ್ತು ಆಂಧ್ರಪ್ರದೇಶದ ವೈಜಾಗ್‌ನ ಆರ್‌.ಐ.ಎನ್‌.ಎಲ್‌. ಸ್ಟೀಲ್‌ ಪ್ಲಾಂಟ್‌ ಸೇರಿದಂತೆ ಸರ್ಕಾರಿ ಸ್ವಾಮ್ಯದ ಕಾರ್ಖಾನೆಗಳಿಗೆ ಜೀವ ತುಂಬುವ ಕೆಲಸ ಮಾಡುತ್ತೇನೆ’ ಎಂದು ಕೇಂದ್ರ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಸಚಿವ ಎಚ್‌.ಡಿ.ಕುಮಾರಸ್ವಾಮಿ ಭರವಸೆ ನೀಡಿದರು.

ನಗರದಲ್ಲಿ ಶುಕ್ರವಾರ ಜನತಾದರ್ಶನ ಕಾರ್ಯಕ್ರಮ ನಡೆಸಿದ ನಂತರ ಅವರು ಮಾಧ್ಯಮದವರೊಂದಿಗೆ ಮಾತನಾಡಿ, ಆರು ರಾಜ್ಯಗಳಲ್ಲಿರುವ ಎಚ್‌.ಎಂ.ಟಿ. ಕಾರ್ಖಾನೆಯ ಶಾಖೆಗಳಿಗೆ ಭೇಟಿ ಕೊಟ್ಟು ಯಾವ ರೀತಿಯ ಪುನಃಶ್ಚೇತನ ಮಾಡಬೇಕು ಎಂಬುದನ್ನು ಅಧಿಕಾರಿಗಳೊಂದಿಗೆ ಚರ್ಚಿಸಿದ್ದೇನೆ. ದೆಹಲಿಯ ಉದ್ಯೋಗ ಭವನದಲ್ಲಿ ನಿತ್ಯ ಸರ್ಕಾರಿ ಕೈಗಾರಿಕೆಗಳ ಪುನಃಶ್ಚೇತನದ ಬಗ್ಗೆ ಸಭೆ ನಡೆಸುತ್ತಿದ್ದೇನೆ ಎಂದರು.

1918ರಿಂದ ಪ್ರಾರಂಭವಾಗಿರುವ ಅನೇಕ ಕೈಗಾರಿಕೆಗಳು ಸ್ಥಗಿತಗೊಂಡಿವೆ. ಇವುಗಳಿಗೆ ಶಕ್ತಿ ತುಂಬಿ, ಉದ್ಯೋಗ ಸೃಷ್ಟಿಸುವ ಕೆಲಸ ಮಾಡುತ್ತೇನೆ. ನಿರುದ್ಯೋಗ ಸಮಸ್ಯೆ ನಿವಾರಣೆಗೆ ನನಗೆ ಇನ್ನೂ 3 ತಿಂಗಳು ಕಾಲಾವಕಾಶ ಬೇಕು ಎಂದು ತಿಳಿಸಿದರು.

ಭೂಮಿ ನುಂಗಿದವರು ಯಾರು?: 1974ರಲ್ಲಿ ಎಚ್‌.ಎಂ.ಟಿ. ಕಾರ್ಖಾನೆ ಪ್ರಾರಂಭವಾದಾಗ 8 ಸಾವಿರ ಮಂದಿ ಉದ್ಯೋಗ ಮಾಡುತ್ತಿದ್ದರು. ಅಲ್ಲಿ ₹280 ಕೋಟಿ ಆದಾಯ ಬರುತ್ತಿತ್ತು. 350 ಎಂಜಿನಿಯರುಗಳು ಹೊಸದಾಗಿ ಆರಂಭವಾದ ಖಾಸಗಿ ಕಾರ್ಖಾನೆಗೆ ವಲಸೆ ಹೋದರು. ಅಲ್ಲಿಗೆ ಎಚ್‌.ಎಂ.ಟಿ. ಕತೆ ಮುಗಿಯಿತು. ಎಚ್‌ಎಂಟಿ ಭೂಮಿ ಯಾರ‍್ಯಾರು ಕಬಳಿಸಿದ್ದಾರೆ ಎಂಬುದನ್ನು ರಾಜ್ಯ ಸರ್ಕಾರ ತನಿಖೆ ಮಾಡಲು ಸಿದ್ಧವಿದೆಯೇ? ಎಂದು ಸವಾಲು ಹಾಕಿದರು.

ಪ್ರೋಟೊಕಾಲ್‌ ನಂಬಿ ರಾಜಕಾರಣ ಮಾಡಲ್ಲ: ಜನತಾ ದರ್ಶನಕ್ಕೆ ಬಂದ ಸಾವಿರಾರು ಜನರನ್ನು ನಿಯಂತ್ರಿಸಲು ಅಧಿಕಾರಿಗಳು ಮತ್ತು ಪೊಲೀಸ್ ಸಿಬ್ಬಂದಿಯ ಕೊರತೆ ಕಾಡಿತು. ಅಧಿಕಾರಿಗಳು ಹೋಗದಂತೆ ರಾಜ್ಯ ಸರ್ಕಾರವೇ ಸುತ್ತೋಲೆ ಹೊರಡಿಸಿತು. ರಾಜ್ಯ ಸರ್ಕಾರದ ಪ್ರೊಟೋಕಾಲ್‌ ನಂಬಿ ನಾನು ರಾಜಕಾರಣ ಮಾಡುತ್ತಿಲ್ಲ. ನನ್ನನ್ನು ನಿಮ್ಮ ಜಿಲ್ಲೆಗೆ (ರಾಮನಗರ) ಬಂದಾಗ ಯಾವ ರೀತಿ ನಡೆಸಿಕೊಂಡಿದ್ದೀರಿ ಎಂಬುದು ಗೊತ್ತಿದೆ. ರಾಜ್ಯ ಸರ್ಕಾರ ದ್ವೇಷದ ರಾಜಕಾರಣ ಮಾಡುತ್ತಿದೆ ಎಂಬುದರಲ್ಲಿ ಸಂಶಯವೇ ಇಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಅರ್ಜಿ ಹಿಡಿದುಕೊಂಡು ಬಂದಿರಲಿಲ್ಲವೇ?: ಕರ್ನಾಟಕ ರಾಜ್ಯ ಸರ್ಕಾರದ ಬೇಡಿಕೆಗಳನ್ನು ಕಾರ್ಯರೂಪಕ್ಕೆ ತರಲು ಮುಖ್ಯಮಂತ್ರಿ ಮತ್ತು ಸಚಿವರ ದಂಡು ಮೊನ್ನೆ ದೆಹಲಿಗೆ ಬಂದಿತ್ತು. ಆಗ ಯಾರ ಮುಂದೆ ಅರ್ಜಿ ಹಿಡಿದುಕೊಂಡು ಬಂದಿದ್ದರು? ನಮ್ಮ ಹತ್ತಿರ ಬಂದಿರಲಿಲ್ಲವೇ? ಒಕ್ಕೂಟ ವ್ಯವಸ್ಥೆಯಲ್ಲಿ ಎರಡೂ ಸರ್ಕಾರಗಳಿಗೂ ಜವಾಬ್ದಾರಿ ಇದೆ. ಇದನ್ನು ಅರ್ಥಮಾಡಿಕೊಳ್ಳಲಿ. ಕೇಂದ್ರ ಸಚಿವರಿಗೆ ಯಾವ ರೀತಿ ಭದ್ರತೆ ಕೊಡಬೇಕು ಎಂಬುದು ಈ ರಾಜ್ಯ ಸರ್ಕಾರಕ್ಕೆ ಜ್ಞಾನ ಇದೆಯಾ? ಎಂದು ವಾಗ್ದಾಳಿ ನಡೆಸಿದರು.

ಆಂದೋಲನ ಡೆಸ್ಕ್

Recent Posts

32 ಕ್ಷೇತ್ರಗಳ ಟಾರ್ಗೆಟ್‌: ನಿಖಿಲ್‌ ಕುಮಾರಸ್ವಾಮಿ ರಾಜ್ಯ ಪ್ರವಾಸ

ಬೆಂಗಳೂರು: ಪಕ್ಷ ಸಂಘಟನೆಗಾಗಿ ರಾಜ್ಯಾದ್ಯಂತ ಪ್ರವಾಸ ಮಾಡುತ್ತಿರುವ ಜೆಡಿಎಸ್‌ ಯುವ ಘಟಕದ ಅಧ್ಯಕ್ಷ ನಿಖಿಲ್‌ ಕುಮಾರಸ್ವಾಮಿ ಅವರು 2ನೇ ಹಂತದ…

1 hour ago

1.60 ಕೋಟಿ ಲಂಚ ಪಡೆದು ಮುಡಾ ಮಾಜಿ ಆಯುಕ್ತ ನಟೇಶ್‌ಗೆ ಬಡ್ತಿ: ದಾಖಲೆ ಬಿಡುಗಡೆ ಮಾಡಿದ ಸ್ನೇಹಮಯಿ ಕೃಷ್ಣ

ಬೆಂಗಳೂರು: ಮೈಸೂರು ಮುಡಾ ಹಗರಣದಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಮತ್ತೊಂದು ಗಂಭೀರ ಆರೋಪ ಮಾಡಿದ್ದಲ್ಲದೇ ದಾಖಲೆಗಳನ್ನು ಬಿಡುಗಡೆ…

2 hours ago

ಫೆಬ್ರವರಿ.25ರಂದು ಅಜ್ಜಿಪುರ ಗ್ರಾಮದಿಂದ ವಿಧಾನಸೌಧದವರೆಗೆ ಪಾದಯಾತ್ರೆ: ಬಡಗಲಪುರ ನಾಗೇಂದ್ರ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಹನೂರು ಭಾಗದ ಉಡುತೊರೆ ಹಳ್ಳ ಜಲಾಶಯ ಸೇರಿದಂತೆ ಪ್ರಮುಖ ಕೆರೆಗಳಿಗೆ…

2 hours ago

ಕ್ರಿಕೆಟ್‌ ಪಂದ್ಯಾವಳಿ ವೇಳೆ ಜೇನುನೊಣಗಳ ದಾಳಿ: ಅಂಪೈರ್‌ ದಾರುಣ ಸಾವು

ಉನ್ನಾವೋ: ಕ್ರಿಕೆಟ್ ಪಂದ್ಯದ ವೇಳೆ ಜೇನುನೊಣಗಳ ಹಿಂಡು ದಾಳಿ ಮಾಡಿದ ಪರಿಣಾಮ 65 ವರ್ಷದ ಅಂಪೈರ್ ಸಾವನ್ನಪ್ಪಿದ್ದು, ಹಲವಾರು ಆಟಗಾರರು…

2 hours ago

ಬೆಂಗಳೂರು ಏರ್‌ಪೋರ್ಟ್‌ನಲ್ಲಿ 23.8 ಕೋಟಿ ಮೌಲ್ಯದ ಕೊಕೇನ್‌ ಜಪ್ತಿ

ಬೆಂಗಳೂರು: ಇಲ್ಲಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 23.8 ಕೋಟಿ ರೂ ಮೌಲ್ಯದ ಕೊಕೇನ್‌ ಸೀಜ್‌ ಮಾಡಲಾಗಿದೆ. ಎನ್‌ಸಿಬಿ ಅಧಿಕಾರಿಗಳು…

3 hours ago

ನಾಳೆ ರಾಕಿಂಗ್‌ ಸ್ಟಾರ್‌ ಯಶ್‌ ಅಭಿನಯದ ಟಾಕ್ಸಿಕ್‌ ಚಿತ್ರದ 2ನೇ ಟೀಸರ್‌ ರಿಲೀಸ್‌

ಬೆಂಗಳೂರು: ಕೆಜಿಎಫ್‌-2 ಯಶಸ್ಸಿನ ನಂತರ ಇಡೀ ದೇಶದ ಕಾತುರದಿಂದ ಕಾಯುತ್ತಿರುವ ಸಿನಿಮಾ ಎಂದರೆ ಅದು ರಾಕಿಂಗ್‌ ಸ್ಟಾರ್‌ ಯಶ್‌ ಅಭಿನಯದ…

4 hours ago