ಮಂಡ್ಯ

ರಾಜ್ಯ ಜಲಾನಯನ ಅಭಿವೃದ್ಧಿ ಇಲಾಖೆ ಇತರೆ ರಾಜ್ಯಗಳಿಗೆ ಮಾದರಿ : ಸಚಿವ.ಎನ್.ಚಲುವರಾಯಸ್ವಾಮಿ

ಬೆಂಗಳೂರು : ಹವಾಮಾನ ಬದಲಾವಣೆ, ಭೂಕ್ಷಯ ಮತ್ತು ಶಾಶ್ವತ ಜಲಾನಯನ ನಿರ್ವಹಣೆಗೆ ಸಂಬಂಧಿಸಿದ ಜ್ಞಾನ ಮತ್ತು ಅನುಭವ ವಿನಿಮಯಕ್ಕೆ ಜಾಗತಿಕ ತಜ್ಞರು, ಸಂಶೋಧಕರು ಮತ್ತು ವಿಜ್ಞಾನಿಗಳನ್ನು ಒಂದೇ ವೇದಿಕೆಯಲ್ಲಿ ತರುವ ಮೂಲಕ ರೈತರ ಹಾಗೂ ಕೃಷಿ ಅಭಿವೃದ್ಧಿಗೆ ಪೂರಕವಾದ ನಿರ್ಣಯಗಳನ್ನು ಕೈಗೊಳ್ಳುವಂತೆ ಕೃಷಿ ಸಚಿವ ಎನ್.ಚಲುವರಾಯಸ್ವಾಮಿಯವರು ಕರೆ ನೀಡಿದರು.

ಜಲಾನಯನ ಅಭಿವೃದ್ಧಿ ಇಲಾಖೆ, ಕೇಂದ್ರದ ಭೂ ಸಂಪನ್ಮೂಲ ಇಲಾಖೆ, ವಿಶ್ವ ಬ್ಯಾಂಕ್ ಹಾಗೂ ಬೆಂಗಳೂರಿನ ಕೃಷಿ ವಿಶ್ವವಿದ್ಯಾನಿಲಯದ ಸಹಯೋಗದೊಂದಿಗೆ, ಮೂರು ದಿನಗಳ ಜಲಾನಯನ ಸ್ಥಿತಿಸ್ಥಾಪಕತ್ವ, ವಿಜ್ಞಾನ ಸುಸ್ಥಿರತೆ ಮತ್ತುಸಮಾಜವನ್ನು ಸಂಯೋಜಿಸುವ ಕುರಿತು ಅಂತರಾಷ್ಟ್ರೀಯ ಸಮ್ಮೇಳನವನ್ನು ಉದ್ಘಾಟಿಸಿ ಮಾತನಾಡಿದ ಕೃಷಿ ಸಚಿವ ಚಲುವರಾಯಸ್ವಾಮಿಯವರು, ಕಳೆದ ನಾಲ್ಕು ದಶಕಗಳಿಂದ ಜಲಾನಯನ ಅಭಿವೃದ್ಧಿಯಲ್ಲಿ ಕರ್ನಾಟಕ ರಾಜ್ಯ ಮುಂಚೂಣಿಯಲ್ಲಿದೆ ಎಂದು ಹೇಳಿದರು. ವಿಶ್ವಬ್ಯಾಂಕ್ REWARD ಕಾರ್ಯಕ್ರಮದಡಿ ನಡೆಯುತ್ತಿರುವ LRI ಆಧಾರಿತ ಜಲಾನಯನ ಅಭಿವೃದ್ಧಿಯಿಂದ ರಾಜ್ಯದ ಸ್ಥೈರ್ಯವನ್ನು ಹೆಚ್ಚಿಸಿದೆ ಎಂದು ಅವರು ಮೆಚ್ಚುಗೆ ವ್ಯಕ್ತಪಡಿಸಿದರು.

ಭೂಸಂಪನ್ಮೂಲ ಇಲಾಖೆ, ಭಾರತ ಸರ್ಕಾರದ ಜಂಟಿ ಕಾರ್ಯದರ್ಶಿ ನಿತಿನ್ ಕಾಡೆ ಮಾತನಾಡಿ, ಯಶಸ್ವಿ ಜಲಾನಯನ ಅಭಿವೃದ್ಧಿಯ ಎರಡುಸ್ತಂಭಗಳು—ತಾಂತ್ರಿಕ ಸಾಮರ್ಥ್ಯ ಮತ್ತು ಬಲವಾದ ಆಡಳಿತ ಎಂದು ಹೇಳಿದರು. REWARD ಕಾರ್ಯಕ್ರಮವು ದೇಶವ್ಯಾಪಿ PMKSY ಕಾರ್ಯಕ್ರಮದಲ್ಲಿ ವಿಸ್ತರಿಸಲು ಅಗತ್ಯವಾದ ತಾಂತ್ರಿಕ ಬಲವನ್ನು ಒದಗಿಸುತ್ತದೆ ಎಂದು ಅವರು ತಿಳಿಸಿದರು.

ಸ್ಥಳೀಯ ಸಮುದಾಯಗಳು ಮತ್ತು ಸಂಸ್ಥೆಗಳನ್ನು ಬಲಪಡಿಸು ಮೂಲಕ ಅಭಿವೃದ್ಧಿ ಗೆ ಒತ್ತು ನೀಡುವ ಅಗತ್ಯವಿದೆ ಎಂದು ಅವರು ಹೇಳಿದರು. ವಿಶ್ವ ಬ್ಯಾಂಕಿನ ಮುಖ್ಯ ಕೃಷಿ ತಜ್ಞ ಆಂಡ್ರೂ ವುಡ್ ಲ್ಯಾಂಡ್ ಮಾತನಾಡಿ, ಕರ್ನಾಟಕದಲ್ಲಿ REWARD ಕಾರ್ಯಕ್ರಮವು ಪರಿಣಾಮಕಾರಿಯಾಗಿ ಅನುಷ್ಠಾನಗೊಂಡಿರುವುದಕ್ಕೆ ಮೆಚ್ಚಿ, ಇತರ ರಾಜ್ಯಗಳಿಗೆ ಕರ್ನಾಟಕ ಮಾದರಿಯಾಗಿದೆ ಎಂದು ಹೇಳಿದರು.

ಸಮ್ಮೇಳನದಲ್ಲಿ ಇಥಿಯೋಪಿಯಾ, ನೈಜೀರಿಯಾ, ಕಾಂಗೋ, ಕೆನಡಾ, ನೈರೋಬಿ, ಪ್ರಾನ್ಸ್, ಸೇರಿದಂತೆ ಹಲವು ದೇಶಗಳ ಪ್ರತಿನಿಧಿಗಳು ಭಾಗವಹಿಸಿದ್ದರು.. ಇನ್ನೂ ದೇಶದ 24 ರಾಜ್ಯಗಳ ಜಲಾನಯನ ಅಭಿವೃದ್ಧಿ ಕಾರ್ಯಕ್ರಮಗಳ ನೋಡಲ್ ಎಜೆನ್ಸಿಗಳ ಮುಖ್ಯ ಕಾರ್ಯನಿರ್ವಹಕರು,ಮತ್ತು ನಿರ್ದೇಶಕರು, ಕರ್ನಾಟಕ ಜಲ ಸಂರಕ್ಷಣಾ ಮತ್ತು ಕೃಷಿ ಇಲಾಖೆ ಹಿರಿಯ ಅಧಿಕಾರಿಗಳು ಬೆಂಗಳೂರು ಕೃಷಿ ವಿವಿ ಕುಲಪತಿ ಡಾ.ಸುರೇಶ್, ಸೇರಿದಂತೆ ಇತರೆ ಗಣ್ಯರು ಭಾಗವಹಿಸಿದ್ದರು..

ಆಂದೋಲನ ಡೆಸ್ಕ್

Recent Posts

ಮೈಸೂರು | ನಾಲ್ಕೇ ದಿನಕ್ಕೆ ಮುರಿದು ಬಿದ್ದ ದಸರಾ ದೀಪಾಲಂಕಾರ ಕಟೌಟ್

ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ದಸರಾ ದೀಪಾಲಂಕಾರ ಕಾಮಗಾರಿಯಲ್ಲೇ ಯಡವಟ್ಟಾಗಿದ್ದು, ನಗರದ ಗನ್ ಹೌಸ್ ವೃತ್ತದಲ್ಲಿ ಕಟ್ಟಲಾಗಿದ್ದ ದಸರಾ ದೀಪಾಲಂಕಾರದ…

4 hours ago

ಕಮಿಷನ್ ಆರೋಪ ಸುಳ್ಳು, ಎಸ್‌ಐಆರ್ ರದ್ದಾಗಬೇಕು: ಸಚಿವ ಪುಟ್ಟರಂಗಶೆಟ್ಟಿ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಶಾಸಕರು ಕಮಿಷನ್ ಕೇಳುತ್ತಿದ್ದಾರೆ ಎಂಬ ಗುತ್ತಿಗೆದಾರರ ಆರೋಪ ಸುಳ್ಳು,ಮತದಾರರ ಪಟ್ಟಿಯ…

5 hours ago

ಯಳಂದೂರು ತಾಲ್ಲೂಕಿನಲ್ಲಿ ವರುಣನ ಕೃಪೆ: ಭತ್ತದ ನಾಟಿಗೆ ಮುಂದಾದ ರೈತರು

ಯಳಂದೂರು: ತಾಲ್ಲೂಕಿನ ವಿವಿಧ ಗ್ರಾಮಗಳಲ್ಲಿ ಕಳೆದ ಕೆಲ ದಿನಗಳಿಂದ ಸತತವಾಗಿ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ರೈತರು ಭತ್ತದ ನಾಟಿ ಕಾರ್ಯದಲ್ಲಿ…

5 hours ago

ಕಾವೇರಿ ತೀರ್ಥೋದ್ಭವಕ್ಕೆ ದಿನಗಣನೆ: ಕಾವೇರಿ ನೀರಾವರಿ ನಿಗಮದಿಂದ 2 ಕೋಟಿ ರೂ ಬಿಡುಗಡೆ

ಮಡಿಕೇರಿ: ನಾಡಿನ ಜೀವನದಿ ಕಾವೇರಿ ಉಗಮಸ್ಥಾನ ತಲಕಾವೇರಿಯಲ್ಲಿ ನಡೆಯಲಿರುವ ಪವಿತ್ರ ತೀರ್ಥೋದ್ಭವಕ್ಕೆ ದಿನಗಣನೆ ಶುರುವಾಗಿದ್ದು, ಇನ್ನೇನು ಕೇವಲ 15 ದಿನಗಳಷ್ಟೇ…

6 hours ago

ಮಂಡ್ಯ | ಕೇಂದ್ರದ ಬರ ಅಧ್ಯಯನ ತಂಡದಿಂದ ಕೆಆರ್‌ಎಸ್‌ ಹಾಗೂ ಬರಪೀಡಿತ ಹಳ್ಳಿಗಳ ಪರಿಶೀಲನೆ

ಮಂಡ್ಯ: ರಾಜ್ಯದಲ್ಲಿ ಕಂಡು ಕೇಳರಿಯದ ಬರಗಾಲ ಆವರಿಸಿರುವ ಹಿನ್ನೆಲೆಯಲ್ಲಿ ಇಂದು ಕೇಂದ್ರ ಬರ ಅಧ್ಯಯನ ಸಮಿತಿ ಸದಸ್ಯರು ಮಂಡ್ಯಕ್ಕೆ ಆಗಮಿಸಿ…

6 hours ago

ಓದುಗರ ಪತ್ರ: ಐತಿಹಾಸಿಕ ಸಂಗತಿ!

ಐತಿಹಾಸಿಕ ಸಂಗತಿ! ಸರ್ಕಾರದ ನಿರ್ದೇಶನದ ಮೇರೆಗೆ ಬೆಳಗಾವಿ ನಗರಪಾಲಿಕೆ ‘ಗಡಿ ವಿಷಯದಲ್ಲಿ ಮಹಾಜನ್ ವರದಿಯೇ ಅಂತಿಮ’ಎಂಬ ನಿರ್ಣಯ ಅಂಗೀಕರಿಸಿರುವುದು ಐತಿಹಾಸಿಕ…

10 hours ago