Mysore
27
overcast clouds

Social Media

ಭಾನುವಾರ, 02 ಆಗಸ್ಟ್ 2026
Light
Dark

ಮದ್ದೂರಿನಲ್ಲಿ ಗಣೇಶ ಮೆರವಣಿಗೆ ವೇಳೆ ಕಲ್ಲು ತೂರಾಟ: ಎಂಟು ಮಂದಿಗೆ ಗಾಯ

ಮಂಡ್ಯ: ಮದ್ದೂರಿನ ಚನ್ನೇಗೌಡ ಬಡಾವಣೆ ನಿವಾಸಿಗಳು ಕಳೆದ ತಡರಾತ್ರಿ ಗಣಪತಿ ವಿಸರ್ಜನೆ ಮೆರವಣಿಗೆ ನಡೆಸುತ್ತಿದ್ದಾಗ ಕಲ್ಲು ತೂರಾಟ ನಡೆದಿದೆ.

ಲೈಟ್‌ ಆಫ್‌ ಮಾಡಿ ಕಲ್ಲು ತೂರಾಟ ಮಾಡಿದ್ದಾರೆ ಎಂಬ ಆರೋಪ ಕೇಳಿಬಂದಿದ್ದು, ನಾಳೆ ಬೆಳಿಗ್ಗೆವರೆಗೂ ನಿಷೇಧಾಜ್ಞೆ ಜಾರಿ ಮಾಡಿ ಆದೇಶ ಹೊರಡಿಸಲಾಗಿದೆ.

ಬೀದಿ ಬೀದಿಯಲ್ಲಿ ಮೆರವಣಿಗೆ ಮೂಲಕ ಬಂದ ಗಣಪ ಇನ್ನೇನು ಮಸೀದಿ ಮುಂದೆ ಹಾದುಹೋಗಬೇಕಿತ್ತು. ಈ ವೇಳೆ ದಿಢೀರ್‌ ಲೈಟ್‌ ಆಫ್‌ ಮಾಡಿ ಮಸೀದಿಯಿಂದ ಕಲ್ಲು ತೂರಾಟ ನಡೆಸಲಾಗಿದೆ ಎಂಬ ಆರೋಪ ಕೇಳಿಬಂದಿದೆ. ಘಟನೆಯಲ್ಲಿ ನಾಲ್ವರು ಹೋಂಗಾರ್ಡ್‌ಗಳು ಸೇರಿದಂತೆ ಒಟ್ಟು 8 ಮಂದಿ ಗಾಯಗೊಂಡಿದ್ದಾರೆ.

ಘಟನಾ ಸ್ಥಳಕ್ಕೆ ಮಂಡ್ಯ ಎಸ್‌ಪಿ ಮಲ್ಲಿಕಾರ್ಜುನ ಬಾಲದಂಡಿ ಭೇಟಿ ನೀಡಿ ಮಾಹಿತಿ ಪಡೆದಿದ್ದಾರೆ. ಈ ಕುರಿತು ಮಾತನಾಡಿರುವ ಅವರು, ಘಟನೆ ಸಂಬಂಧ 21 ಆರೋಪಿಗಳನ್ನು ವಶಕ್ಕೆ ಪಡೆಯಲಾಗಿದೆ. ನಾಳೆ ಬೆಳಿಗ್ಗೆವರೆಗೆ ಮದ್ದೂರಿನಲ್ಲಿ ನಿಷೇಧಾಜ್ಞೆ ಜಾರಿ ಮಾಡಲಾಗಿದೆ ಎಂದು ಹೇಳಿದ್ದಾರೆ.

ಇನ್ನು ಎಸ್‌ಪಿ ಮಲ್ಲಿಕಾರ್ಜುನ ಬಾಲದಂಡಿ ನೇತೃತ್ವದಲ್ಲಿ ಮದ್ದೂರು ಪಟ್ಟಣದ ಪ್ರಮುಖ ರಸ್ತೆಗಳಲ್ಲಿ ಪೊಲೀಸರು ಪಥಸಂಚಲನ ನಡೆಸಿದ್ದಾರೆ.

Tags:
error: Content is protected !!