ಮಂಡ್ಯ: ಮದ್ದೂರಿನ ಚನ್ನೇಗೌಡ ಬಡಾವಣೆ ನಿವಾಸಿಗಳು ಕಳೆದ ತಡರಾತ್ರಿ ಗಣಪತಿ ವಿಸರ್ಜನೆ ಮೆರವಣಿಗೆ ನಡೆಸುತ್ತಿದ್ದಾಗ ಕಲ್ಲು ತೂರಾಟ ನಡೆದಿದೆ.
ಲೈಟ್ ಆಫ್ ಮಾಡಿ ಕಲ್ಲು ತೂರಾಟ ಮಾಡಿದ್ದಾರೆ ಎಂಬ ಆರೋಪ ಕೇಳಿಬಂದಿದ್ದು, ನಾಳೆ ಬೆಳಿಗ್ಗೆವರೆಗೂ ನಿಷೇಧಾಜ್ಞೆ ಜಾರಿ ಮಾಡಿ ಆದೇಶ ಹೊರಡಿಸಲಾಗಿದೆ.
ಬೀದಿ ಬೀದಿಯಲ್ಲಿ ಮೆರವಣಿಗೆ ಮೂಲಕ ಬಂದ ಗಣಪ ಇನ್ನೇನು ಮಸೀದಿ ಮುಂದೆ ಹಾದುಹೋಗಬೇಕಿತ್ತು. ಈ ವೇಳೆ ದಿಢೀರ್ ಲೈಟ್ ಆಫ್ ಮಾಡಿ ಮಸೀದಿಯಿಂದ ಕಲ್ಲು ತೂರಾಟ ನಡೆಸಲಾಗಿದೆ ಎಂಬ ಆರೋಪ ಕೇಳಿಬಂದಿದೆ. ಘಟನೆಯಲ್ಲಿ ನಾಲ್ವರು ಹೋಂಗಾರ್ಡ್‌ಗಳು ಸೇರಿದಂತೆ ಒಟ್ಟು 8 ಮಂದಿ ಗಾಯಗೊಂಡಿದ್ದಾರೆ.
ಘಟನಾ ಸ್ಥಳಕ್ಕೆ ಮಂಡ್ಯ ಎಸ್‌ಪಿ ಮಲ್ಲಿಕಾರ್ಜುನ ಬಾಲದಂಡಿ ಭೇಟಿ ನೀಡಿ ಮಾಹಿತಿ ಪಡೆದಿದ್ದಾರೆ. ಈ ಕುರಿತು ಮಾತನಾಡಿರುವ ಅವರು, ಘಟನೆ ಸಂಬಂಧ 21 ಆರೋಪಿಗಳನ್ನು ವಶಕ್ಕೆ ಪಡೆಯಲಾಗಿದೆ. ನಾಳೆ ಬೆಳಿಗ್ಗೆವರೆಗೆ ಮದ್ದೂರಿನಲ್ಲಿ ನಿಷೇಧಾಜ್ಞೆ ಜಾರಿ ಮಾಡಲಾಗಿದೆ ಎಂದು ಹೇಳಿದ್ದಾರೆ.
ಇನ್ನು ಎಸ್‌ಪಿ ಮಲ್ಲಿಕಾರ್ಜುನ ಬಾಲದಂಡಿ ನೇತೃತ್ವದಲ್ಲಿ ಮದ್ದೂರು ಪಟ್ಟಣದ ಪ್ರಮುಖ ರಸ್ತೆಗಳಲ್ಲಿ ಪೊಲೀಸರು ಪಥಸಂಚಲನ ನಡೆಸಿದ್ದಾರೆ.
ಪ್ರಶಾಂತ್ ಎನ್ ಮಲ್ಲಿಕ್ ಮೈಸೂರು: ಸುತ್ತೂರು ಜಾತ್ರೆ ವೇಳೆ ರಾತ್ರಿ ಗದ್ದೆಯಲ್ಲಿ ಮಲಗಿದ್ದ ವ್ಯಕ್ತಿಗಳ ಮೇಲೆ ಕಾರು ಹರಿದ ಪರಿಣಾಮ…
ಸಿದ್ದಾಪುರ: ವಿರಾಜಪೇಟೆ ರಸ್ತೆಯಲ್ಲಿರುವ ಎಸ್‌ವೈಎಸ್ ಕಾಫಿ ಅಂಗಡಿಯಲ್ಲಿ ನಡೆದ ನಗದು ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಸಿದ್ದಾಪುರ ಪೊಲೀಸರು ಕೇರಳ ಮೂಲದ…
ಮಹಾದೇಶ್ ಎಂ ಗೌಡ ಹನೂರು: ತಾಲ್ಲೂಕಿನ ಕೆವಿಎನ್ ದೊಡ್ಡಿ ಗ್ರಾಮದ ಜಮೀನೊಂದರಲ್ಲಿ ಕಾಡಾನೆ ಲಗ್ಗೆ ಇಟ್ಟು ಅಪಾರ ಪ್ರಮಾಣದ ಬೆಳೆ…
ಬೆಂಗಳೂರು: ಕಾಲ್ತುಳಿತ ಪ್ರಕರಣದಿಂದಾಗಿ ಈ ಬಾರಿಯ ಬಹು ನಿರೀಕ್ಷಿತ ಇಂಡಿಯನ್ ಪ್ರೀಮಿಯರ್ ಲೀಗ್(ಐಪಿಎಲ್) ಪಂದ್ಯಗಳು ನಡುವುದೇ ಡೋಲಾಯಮಾನ ಸ್ಥಿತಿಯಲ್ಲಿರುವಾಗಲೇ ಉದ್ಘಾಟನಾ…
ಬೆಂಗಳೂರು: ಶಿಡ್ಲಘಟ್ಟ ಪೌರಾಯುಕ್ತೆ ಅಮೃತಾ ಅವರಿಗೆ ಜೀವ ಬೆದರಿಕೆ ಹಾಕಿದ್ದ ಪ್ರಕರಣ ಸಂಬಂಧ ಕಾಂಗ್ರೆಸ್ ಮುಖಂಡ ರಾಜೀವ್‌ಗೌಡಗೆ ಹೈಕೋರ್ಟ್ ತೀವ್ರ…
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲು ಸೇರಿರುವ ಪ್ರಮುಖ ಆರೋಪಿ ಪವಿತ್ರಾ ಗೌಡಗೆ ವಾರಕ್ಕೊಮ್ಮೆ ಮನೆ ಊಟ…