Mysore
17
few clouds

Social Media

ಭಾನುವಾರ, 07 ಡಿಸೆಂಬರ್ 2025
Light
Dark

ಗಣಪತಿ ವಿಸರ್ಜನೆ ವೇಳೆ ಕಲ್ಲು ತೂರಾಟ ಪ್ರಕರಣ: ಸಚಿವ ಚಲುವರಾಯಸ್ವಾಮಿ ಪ್ರತಿಕ್ರಿಯೆ

Minister N. Cheluvarayaswamy instructs action against officials harassing for bribes.

ಮಂಡ್ಯ: ಮದ್ದೂರಿನಲ್ಲಿ ಗಣಪತಿ ವಿಸರ್ಜನೆ ಮೆರವಣಿಗೆ ವೇಳೆ ನಡೆದ ಗಲಭೆ ವಿಚಾರಕ್ಕೆ ಸಂಬಂಧಿಸಿದಂತೆ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಚಲುವರಾಯಸ್ವಾಮಿ ಪ್ರತಿಕ್ರಿಯೆ ನೀಡಿದ್ದು, ಬಿಜೆಪಿ ನಾಯಕರ ವಿರುದ್ಧ ಕಿಡಿಕಾರಿದ್ದಾರೆ.

ಈ ಕುರಿತು ಮಾತನಾಡಿದ ಅವರು, ನಿನ್ನೆ ಮೆರವಣಿಗೆ ನಡೆಯುವ ಸಂಧರ್ಭದಲ್ಲಿ ಮಸೀದಿ ಕಡೆಯಿಂದ ಕಲ್ಲುಗಳು ಎಸೆದ ಬಗ್ಗೆ ಮಾಹಿತಿ ಇದೆ. ಈ ಬಗ್ಗೆ ವಿಚಾರಣೆ ನಡೆಸಿ ನಂತರ ಇಪ್ಪತ್ತೊಂದು ಜನರನ್ನು ಈಗಾಗಲೇ ಬಂಧಿಸಲಾಗಿದೆ. ಯಾವ ಹಿಂದೂಗಳ ಮೇಲೂ ಕೇಸ್ ದಾಖಲಾಗಿಲ್ಲ. ಗಲಭೆ ನಡೆದ ಕೆಲವೇ ಗಂಟೆಗಳಲ್ಲಿ ತಪ್ಪಿತಸ್ಥರ ವಿರುದ್ಧ ಕ್ರಮ ತೆಗೆದುಕೊಳ್ಳಲಾಗಿದೆ. ಘಟನೆ ನಡೆದ ತಕ್ಷಣ ಇಷ್ಟು ಬೇಗ ಕ್ರಮ ತೆಗೆದುಕೊಂಡ ಪ್ರಕರಣ ಬೇರೆ ಯಾವುದೂ ಇಲ್ಲ‌. ಆದ್ರೆ ಬಿಜೆಪಿಯ ಹಾಗೂ ಕೆಲವು ಜೆಡಿಎಸ್ ನಾಯಕರು ಪ್ರಚೋದಿಸುವ ಕೆಲಸ ಮಾಡ್ತಾ ಇದ್ದಾರೆ.

ಇನ್ನಷ್ಟು ಬಿಗಿ ಕ್ರಮಗಳನ್ನು ತೆಗೆದುಕೊಳ್ಳಲು ಹೇಳಬಹುದಿತ್ತು. ಅದು ಬಿಟ್ಟು ಕೋಮುಗಲಭೆಗೆ ಪ್ರಚೋದನೆ ಕೊಡಬಾರದಿತ್ತು. ಮದ್ದೂರಿನಲ್ಲಿ ಹಿಂದೆ ಎಂದೂ ಈ ರೀತಿಯ ಘಟನೆ ನಡೆದಿಲ್ಲ. ಹೊರಗಡೆಯಿಂದ ಬಂದು ಯಾರೋ‌ ಗಲಭೆ ಮಾಡಿರಬಹುದು ಎಂಬ ಬಗ್ಗೆ ವಿಚಾರಣೆ ಮಾಡುತ್ತಾ ಇದ್ದೇವೆ. ಯಾವುದೇ ಸಮಾಜ ಇದ್ರೂ ಅವರ ಮೇಲೆ ಸೂಕ್ತ ಕ್ರಮಗಳನ್ನು ತೆಗೆದುಕೊಳ್ತೀವಿ. ಬಿಜೆಪಿ, ಜೆಡಿಎಸ್‌ನವರು ರಾಜಕಾರಣವಾಗಿ ನಮ್ಮನ್ನು ಎದುರಿಸಲಾಗದೆ ಪ್ರಚೋದನೆ ಮಾಡ್ತಾ ಇದ್ದಾರೆ. ನಾವು ಯಾರ ಓಲೈಕೆ ಸಹಾ ಮಾಡುತ್ತಿಲ್ಲ. ಹಾಗಿದ್ರೆ ಯಾಕೆ ಇಪ್ಪತ್ತೊಂದು ಜನರನ್ನು ಬಂಧನ ಮಾಡ್ತಾ ಇದ್ದೆವು ಎಂದು ಪ್ರಶ್ನೆ ಮಾಡಿದರು.

ಇನ್ನು ಸರ್ಕಾರದ ಅಭಿವೃದ್ಧಿ ಯೋಜನೆಗಳನ್ನು ಬಿಜೆಪಿ ಹಾಗೂ ಜೆಡಿಎಸ್ ನಾಯಕರಿಗೆ ಸಹಿಸಲು ಆಗುತ್ತಿಲ್ಲ. ಸದನದಲ್ಲಿ ನಮ್ಮನ್ನು ಎದುರಿಸಲು ಅವರಿಗೆ ಆಗೋದಿಲ್ಲ. ಹೀಗಾಗಿ ಇವಾಗ ಇಂತಹ ಘಟನೆಗಳು ಆದಾಗ ಪ್ರಚೋದನೆ ಕೊಡುವ ಕೆಲಸ ಮಾಡ್ತಾ ಇದ್ದಾರೆ ಎಂದು ಬಿಜೆಪಿ ಹಾಗೂ ಜೆಡಿಎಸ್‌ ನಾಯಕರ ವಿರುದ್ಧ ವಾಗ್ದಾಳಿ ನಡೆಸಿದರು.

Tags:
error: Content is protected !!