ಮಂಡ್ಯ: ಜಿಲ್ಲೆಯ ಮದ್ದೂರಿನಲ್ಲಿ ಗಣೇಶ ಮೆರವಣಿಗೆ ವೇಳೆ ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿದ್ದ ಘಟನೆಯನ್ನು ಖಂಡಿಸಿ ನಿನ್ನೆ ಮದ್ದೂರಿನಲ್ಲಿ ಪ್ರತಿಭಟನೆ ನಡೆಸಿದ ಹಿಂದೂ ಕಾರ್ಯಕರ್ತರ ವಿರುದ್ಧವೂ ಎಫ್‌ಐಆರ್ ದಾಖಲು ಮಾಡಲಾಗಿದೆ.
ಪ್ರತಿಭಟನೆ ವೇಳೆ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿ, ಕಲ್ಲು ತೂರಾಟ, ಬಾವುಟ ಕಿತ್ತೆಸೆತ, ಮಸೀದಿಗೆ ನುಗ್ಗಲು ಯತ್ನಿಸಿದ ಆರೋಪದ ಮೇಲೆ ಪ್ರತಿಭಟನಾಕಾರರ ವಿರುದ್ಧ ಪ್ರತ್ಯೇಕ ಎರಡು ಎಫ್‌ಐಆರ್ ದಾಖಲು ಮಾಡಲಾಗಿದೆ.
ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿ ಪೊಲೀಸರ ಮೇಲೆ ಹಲ್ಲೆ ಎಂದು ಕೇಸ್ ದಾಖಲಿಸಲಾಗಿದ್ದು, ಸೌಮ್ಯ, ಪಲ್ಲವಿ, ರಮ್ಯಾ ಸೇರಿದಂತೆ ಒಟ್ಟು 500 ಜನರ ವಿರುದ್ಧ ಎಫ್‌ಐಆರ್ ದಾಖಲು ಮಾಡಲಾಗಿದೆ.




