ಮಂಡ್ಯ: ಸಕ್ಕರೆ ನಾಡು ಮಂಡ್ಯದಲ್ಲಿ ಅವಿವಾಹಿತ ಯುವಕರ ವಿಚಿತ್ರ ಪ್ರಕರಣವೊಂದು ಬೆಳಕಿಗೆ ಬಂದಿದ್ದು, ಪಂಚಾಯಿತಿ ವತಿಯಿಂದ ನಮಗೆ ಮಠ ಕಟ್ಟಿಸಿಕೊಡುವಂತೆ ಮನವಿ ಮಾಡಿದ್ದಾರೆ.
ಮಂಡ್ಯ ಜಿಲ್ಲೆ ಮದ್ದೂರು ತಾಲ್ಲೂಕಿನ ಮರಳಿಗ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಮದುವೆಯಾಗಲು ಹೆಣ್ಣು ಸಿಗದೆ ಹತಾಶೆಗೊಳಗಾಗ ಯುವಕರು ಗ್ರಾಮದಲ್ಲಿ ಮಠ ಕಟ್ಟಿಸಿಕೊಡಿ ಎಂದು ಬೇಡಿಕೆ ಇಟ್ಟಿದ್ದಾರೆ.
ಇದನ್ನು ಓದಿ: ಚಿತ್ರದುರ್ಗದಲ್ಲಿ ರೇಣುಕಾಸ್ವಾಮಿ ಸಮಾಧಿ ನಾಮಫಲಕ ಧ್ವಂಸ
ಗ್ರಾಮದಲ್ಲಿ ಮದುವೆಯಾಗದ 30ಕ್ಕೂ ಹೆಚ್ಚು ಯುವಕರು ತಮ್ಮೂರಿನ ಪಂಚಾಯ್ತಿಯ ಗ್ರಾಮಸಭೆಗೆ ಬೇಡಿಕೆ ಪತ್ರ ಬರೆದಿದ್ದಾರೆ.
ಪ್ರಸನ್ನ ಎಂಬ ಯುವಕನ ನೇತೃತ್ವದಲ್ಲಿ ಪಂಚಾಯ್ತಿಗೆ ಅರ್ಜಿ ಬರೆದು ಮಠಕ್ಕೆ ಮನವಿ ಸಲ್ಲಿಸಲಾಗಿದ್ದು, ಅವಿವಾಹಿತ ಯುವಕರ ಈ ವಿಚಿತ್ರ ಅರ್ಜಿಯನ್ನು ಕಂಡು ಸದಸ್ಯರು ಹಾಗು ಅಧಿಕಾರಿಗಳು ಒಂದು ಕ್ಷಣ ದಂಗಾಗಿ ಹೋಗಿದ್ದಾರೆ. ಈ ಮನವಿಯನ್ನು ತಹಶೀಲ್ದಾರ್ ಗಮನಕ್ಕೆ ತರುವುದಾಗಿ ಪಂಚಾಯಿತಿ ಪಿಡಿಓ ತಿಳಿಸಿದ್ದಾರೆ.
ಇನ್ನು ತಮ್ಮೂರಿನ ಗಂಡು ಮಕ್ಕಳ ಹತಾಶೆ ಸ್ಥಿತಿಗೆ ಕಂಗಾಲಾಗಿರುವ ಮಕ್ಕಳ ಪೋಷಕರು, ರೈತ ಕುಟುಂಬದ ಗಂಡು ಮಕ್ಕಳಿಗೆ ಹೆಣ್ಣು ಕೊಡದ ಸ್ಥಿತಿಗೆ ಬಂದಿದ್ದಕ್ಕೆ ಬೇಸರ ವ್ಯಕ್ತಪಡಿಸಿದ್ದಾರೆ.
‘ಪ್ರತಾಪ’ಕ್ಕೆ ಸವಾಲು ಈ ನೀಲಿ ಇದು ನಮ್ಮ ಸೂರು ಆಕಾಶದ ನೀಲಿ ಇದು ನನ್ನವ್ವ ಸುತ್ತಿಕೊಂಡ ಸೀರೆಯ ನೀಲಿ ನನಗೆ…
ಪ್ರಸ್ತುತ ಆಂಡ್ರಾಯ್ಡ ಮೊಬೈಲ್‌ನಿಂದಲೇ ದಿನನಿತ್ಯದ ಕೆಲಸಗಳು ಆರಂಭವಾಗಿ ಅವುಗಳಿಂದಲೇ ದಿನ ಮುಕ್ತಾಯ ಅನ್ನುವಷ್ಟರ ಮಟ್ಟಿಗೆ ಅನಿವಾರ್ಯತೆ ನಿರ್ಮಾಣವಾಗಿದೆ. ಮೊಬೈಲ್ ಇಲ್ಲದೆ…
ಹೆಚ್. ಡಿ. ಕೋಟೆ ತಾಲ್ಲೂಕು ಕೇಂದ್ರ ಸ್ಥಳದಲ್ಲಿ ಕೆಲವು ಸರ್ಕಾರಿ ಇಲಾಖೆಗಳು ಹಾಗೂ ಹಾಸ್ಟೆಲ್‌ಗಳು ಖಾಸಗಿ ಕಟ್ಟಡಗಳಲ್ಲಿ ಕಾರ್ಯನಿರ್ವಣೆ ಮಾಡುತ್ತಿವೆ.…
ಜಿ.ಪಿ.ಬಸವರಾಜು ಯಾಂತ್ರಿಕ ಬದುಕಿನ ಹಲವು ಪ್ರಶ್ನೆಗಳಿಗೆ ಉತ್ತರಗಳನ್ನು ತೋರಿಸುವ ನಾಟಕ ‘ಅಮೃತಬಳ್ಳಿ ಕಷಾಯ’ ಮಾಯಾ ನಗರಿಯಂತೆ ಕಾಣುವ ಮುಂಬೈ ನಗರ…
ಎಸ್.ಎಲ್.ಚನ್ನಬಸವಣ್ಣ , ಉಪನಿರ್ದೇಶಕರು ಕರ್ನಾಟಕ ಪೊಲೀಸ್ ಅಕಾಡೆಮಿ ಮೈಸೂರು ಸದಾ ಜಾಗೃತವಾಗಿರುವ ಸಮಯಪಾಲನೆಯ ವಿವೇಚನೆ ಕರ್ನಾಟಕ ಪೊಲೀಸ್ ಅಕಾಡೆಮಿ, ಮೈಸೂರು…
ಕೆ.ಬಿ.ರಮೇಶನಾಯಕ ಉತ್ತನಹಳ್ಳಿ ಗ್ರಾಮದ ಬಳಿ ಯುವ ದಸರಾ, ಸಾತಗಳ್ಳಿ ವಿಟಿಯು ಸಮೀಪ ಕಂಬಳ ಕ್ರೀಡೆ ಆಯೋಜನೆ; ವೀಕ್ಷಕರ ಬೇಡಿಕೆಗೆ ತಕ್ಕಂತೆ…