ಮಂಡ್ಯ : ಮಂಡ್ಯದಲ್ಲಿ ಬೀದಿ ನಾಯಿಗಳ ಗುಂಪೊಂದು ಫುಟ್‌ಪಾತ್‌ನಲ್ಲಿ ಮಲಗಿದ್ದ ವೃದ್ಧನ ಮೇಲೆ ದಾಳಿ ನಡೆಸಿ, ಕೊಂದು ಹಾಕಿರುವ ಆಘಾತಕಾರಿ ಘಟನೆ ನಡೆದಿದೆ ಎಂದು ಅಧಿಕಾರಿಗಳು ಮಂಗಳವಾರ ತಿಳಿಸಿದ್ದಾರೆ.
ಮೃತ ವ್ಯಕ್ತಿಯ ಗುರುತನ್ನು ಅಧಿಕಾರಿಗಳು ಪತ್ತೆಹಚ್ಚಬೇಕಿದ್ದು, ಸೋಮವಾರ ತಡರಾತ್ರಿ ಮಂಡ್ಯ ನಗರ ಸಮೀಪದ ಬೆಸಗರಹಳ್ಳಿಯಲ್ಲಿ ಈ ಘಟನೆ ನಡೆದಿದೆ.
ವ್ಯಕ್ತಿ ಬಾರ್‌ನಲ್ಲಿ ಮದ್ಯ ಸೇವಿಸಿ ಹೊರಗೆ ಮಲಗಿದ್ದರು. ಮಧ್ಯರಾತ್ರಿ ಬೀದಿ ನಾಯಿಗಳು ಆತನ ಮೇಲೆ ದಾಳಿ ಮಾಡಿ, ಕೊಂದು ಹಾಕಿವೆ ಎಂದು ಪೊಲೀಸರು ತಿಳಿಸಿದ್ದಾರೆ.
ಅಕ್ಕಪಕ್ಕದಲ್ಲಿ ಯಾರೂ ಇಲ್ಲದ ಕಾರಣ ಆತನ ಕಿರುಚಾಟ ಯಾರಿಗೂ ಕೇಳಿಸಿಲ್ಲ. ಸಂತ್ರಸ್ತ ಕೂಡ ಮದ್ಯದ ಅಮಲಿನಲ್ಲಿದ್ದರು.
ಬೆಸಗರಹಳ್ಳಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ. ಪ್ರಾಥಮಿಕ ತನಿಖೆಯಲ್ಲಿ ಸಂತ್ರಸ್ತ ಬೇರೆ ಊರಿನವರು ಎಂದು ತಿಳಿದುಬಂದಿದ್ದು, ಅವರ ಗುರುತನ್ನು ಪತ್ತೆಹಚ್ಚಲು ಮಾಹಿತಿ ಸಂಗ್ರಹಿಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.