Mysore
35
few clouds

Social Media

ಸೋಮವಾರ, 27 ಏಪ್ರಿಲ 2026
Light
Dark

ರೈತರಿಗೆ ಕಿರುಕುಳ ನೀಡುವ ಖಾಸಗಿ ಹಣಕಾಸು ಸಂಸ್ಥೆಗಳ ವಿರುದ್ಧ ಕಠಿಣ ಕ್ರಮ: ಜಿಲ್ಲಾಧಿಕಾರಿ ಡಾ.ಕುಮಾರ

ಮಂಡ್ಯ: ಖಾಸಗಿ ಹಣಕಾಸು ಸಂಸ್ಥೆಗಳು ಮತ್ತು ಮೈಕ್ರೋ ಫೈನಾನ್ಸ್‌ ಕಂಪನಿಗಳು ರೈತರಿಗೆ ಹಾಗೂ ಜನಸಾಮಾನ್ಯರಿಗೆ ಸಾಲ ವಸೂಲಾತಿ ಹೆಸರಿನಲ್ಲಿ ಕಿರುಕುಳ ನೀಡಬಾರದು ಎಂದು ಕಟ್ಟುನಿಟ್ಟಿನ ಆದೇಶವಾಗಿದೆ. ನಿಯಮ ಮೀರಿ ವರ್ತಿಸುವ ಸಂಸ್ಥೆಗಳ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಡಾ.ಕುಮಾರ ತಿಳಿಸಿದರು.

ಮಂಡ್ಯ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಇಂದು ಕರ್ನಾಟಕ ರೈತ ಸಂಘದ ಬೇಡಿಕೆಗಳ ಸಂಬಂಧ ನಡೆಸ ಸಭೆಯಲ್ಲಿ ಮಾತನಾಡಿದ ಅವರು, ಆರ್‌ಬಿಐಗೆ ಒಳಪಡುವ ಮೈಕ್ರೋ ಫೈನಾನ್ಸ್‌ ಕಂಪನಿಗಳು ಸಾಲ ವಸೂಲಾತಿ ಮಾಡುವಾಗ ಆರ್‌ಬಿಐ ನಿಗದಿಪಡಿಸಿದ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು. ನಿಯಮಗಳನ್ನೂ ಕೂಡ ಪಾಲಿಸಬೇಕು. ನಿಯಮ ಮೀರಿ ದೌರ್ಜನ್ಯವನ್ನು ಎಸಗುವ ಸಂಸ್ಥೆಗಳ ವಿರುದ್ಧ ಕಾನೂನು ರೀತಿಯ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.

Tags:
error: Content is protected !!