Mysore
20
scattered clouds

Social Media

ಶುಕ್ರವಾರ, 05 ಡಿಸೆಂಬರ್ 2025
Light
Dark

ನೌಕರರ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ಮೇ 27 ರಂದು ಮುಷ್ಕರ

strike

ಮಂಡ್ಯ: ರಾಜ್ಯದಲ್ಲಿನ ಎಲ್ಲಾ ಮಹಾನಗರ ಪಾಲಿಕೆ, ನಗರ ಸ್ಥಳೀಯ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ನೌಕರರ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಮೇ 27ರಂದು ಅರ್ನಿಧಿಷ್ಟ ಕಾಲ ಮುಷ್ಕರ ನಡೆಸಲಾಗುವುದು ಎಂದು ಕರ್ನಾಟಕ ರಾಜ್ಯ ಪೌರ ನೌಕರರ ಸಂಘದ ರಾಜ್ಯ ಉಪಾಧ್ಯಕ್ಷ ಆರ್.ನಾಗರಾಜು ತಿಳಿಸಿದರು.

ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ರಾಜ್ಯಾದ್ಯಂತ ಈಗಾಗಲೇ ಹಲವು ಪ್ರತಿಭಟನಾ ಹೋರಾಟಗಳನ್ನು ನಡೆಸಿ, ಇಲಾಖೆಯ ಅಧಿಕಾರಿಗಳನ್ನು, ಸಚಿವರನ್ನು ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿದರೂ ಯಾವುದೇ ಕ್ರಮವಹಿಸಿಲ್ಲ ಎಂದು ಪತ್ರಿಕಾಗೋಷ್ಠಿಯಲ್ಲಿ ಅಸಮಾಧಾನ ವ್ಯಕ್ತಪಡಿಸಿದರು.

ರಾಜ್ಯದ ಪೌರ ನೌಕರರನ್ನು ಸರ್ಕಾರಿ ನೌಕರರೆಂದು ಪರಿಗಣಿಸಿ, ಕೆಜಿಐಪಿ ಜ್ಯೋತಿ ಸಂಜೀವಿನಿ ಸೇರಿದಂತೆ ಸರ್ಕಾರಿ ನೌಕರರು ಪಡೆಯುವ ಎಲ್ಲಾ ಸೌಲಭ್ಯಗಳನ್ನು ವಿಸ್ತರಿಸುವುದು, ಹೊರಗುತ್ತಿಗೆಯಲ್ಲಿ ಕೆಲಸ ನಿರ್ವಹಿಸುತ್ತಿರುವ ನೌಕರರನ್ನು ನೇರ ಪಾವತಿಗೆ ಒಳಪಡಿಸುವುದು, ಸಮಾನ ಕೆಲಸಕ್ಕೆ ಸಮಾನ ವೇತನ, ಟೈಮ್ ಸ್ಕಿಲ್ ನೌಕರರನ್ನು ಖಾಲಿ ಇರುವ ಹುದ್ದೆಗಳಿಗೆ ವಿಲೀನ ಮಾಡುವುದು ಸೇರಿದಂತೆ ಹಲವು ಬೇಡಿಕೆಗಳನ್ನು ಸರ್ಕಾರದ ಮುಂದಿರಿಸಲಾಗಿದೆ ಎಂದು ಹೇಳಿದರು.

ನಮ್ಮೆಲ್ಲಾ ಬೇಡಿಕೆಗಳನ್ನು ಈಡೇರಿಸುವಂತೆ ಮೇ 3 ರಂದು ಮಂಡ್ಯ ನಗರದಲ್ಲಿ ಪಂಜಿನ ಮೆರವಣಿಗೆ ನಡೆಸಲಾಗುವುದು, 15 ದಿನಗಳ ಒಳಗೆ ಬೇಡಿಕೆ ಈಡೇರಿಸದಿದ್ದಲ್ಲಿ ರಾಜ್ಯಾದ್ಯಂತ ಮಹಾನಗರ ಪಾಲಿಕೆ, ನಗರ ಸ್ಥಳೀಯ ಸಂಸ್ಥೆಗಳಲ್ಲಿ ಪೌರ ನೌಕರ ಸಿಬ್ಬಂದಿ ಕೆಲಸ ಮಾಡುವುದನ್ನು ಬಂದ್ ಮಾಡಲಾಗುವುದು ಎಂದು ಎಚ್ಚರಿಸಿದರು.

ಓದಲು ಆ ಪತ್ರಿಕೆ ಸಿಗದಿದ್ದರೆ ಇ-ಪತ್ರಿಕೆ ಓದಿ

ಸುದ್ದಿಗೋಷ್ಠಿಯಲ್ಲಿ ಮಂಡ್ಯ ಜಿಲ್ಲಾ ಶಾಖೆಯ ಅಧ್ಯಕ್ಷ ಮಹದೇವು, ಗೌರವ ಅಧ್ಯಕ್ಷ ನಂಜುಂಡ, ಉಪಾಧ್ಯಕ್ಷ ಚಂದ್ರ, ಸೋಮಸುಂದರ್, ಹರೀಶ್, ಲಿಂಗಮಯಿ ಇದ್ದರು.

Tags:
error: Content is protected !!