ಮಂಡ್ಯ: ಶ್ರೀರಂಗಪಟ್ಟಣ ತಾಲ್ಲೂಕಿನ ಕೃಷ್ಣರಾಜ ಸಾಗರ ಗ್ರಾಮದ ಬಳಿಯ ಹುಲಿಕೆರೆ ಗ್ರಾಮದ ಬಳಿ ಇರುವ ವರುಣ ನಾಲೆಯಲ್ಲಿ ಈಜಲು ಹೋದ ವಿದ್ಯಾರ್ಥಿ ನಾಪತ್ತೆಯಾಗಿರುವ ಘಟನೆ ನಡೆದಿದೆ.
ಮೈಸೂರಿನ ಶೇಷಾದ್ರಿಪುರಂ ಕಾಲೇಜಿನ ಪ್ರಥಮ ವರ್ಷ ಬಿಸಿಎ ಪದವಿ ವಿದ್ಯಾರ್ಥಿ ಚಂದನ್ ಎಂಬಾತನೇ ಮೃತ ವಿದ್ಯಾರ್ಥಿಯಾಗಿದ್ದಾನೆ.
ಚಂದನ್ ತನ್ನ ಐವರು ಸ್ನೇಹಿತರೊಂದಿಗೆ ಕೆ.ಆರ್.ಸಾಗರ ಸಮೀಪದ ಹುಲಿಕೆರೆ ಗ್ರಾಮದ ಬಳಿಯಿರುವ ವರುಣ ನಾಲೆಯಲ್ಲಿ ಈಜಲು ಹೋದಾಗ ನೀರಿನಲ್ಲಿ ಮುಳುಗಿದ್ದು, ನಾಪತ್ತೆಯಾಗಿದ್ದಾನೆ.
ಈ ಸಂಬಂಧ ಕೆ.ಆರ್.ಎಸ್ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ನಾಪತ್ತೆಯಾಗಿರುವ ಚಂದನ್‌ಗಾಗಿ ಶೋಧ ನಡೆಸುತ್ತಿದ್ದಾರೆ.





