ಮಂಡ್ಯ: ಕಲುಷಿತ ಆಹಾರ ಸೇವನೆಯಿಂದ ಓರ್ವ ವಿದ್ಯಾರ್ಥಿ ಸಾವನ್ನಪ್ಪಿದ್ದು, 25ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥರಾಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಡ್ಯ ಎಸ್ಪಿ ಮಲ್ಲಿಕಾರ್ಜುನ ಬಾಲದಂಡಿ ಪ್ರತಿಕ್ರಿಯೆ ನೀಡಿದ್ದಾರೆ.
ಮಂಡ್ಯ ಜಿಲ್ಲೆಯ ಮಳವಳ್ಳಿ ಪಟ್ಟಣದಲ್ಲಿ ಈ ಘಟನೆ ನಡೆದಿದ್ದು, ರಾತ್ರಿ ಊಟ ಸೇವಿಸಿದ 30 ವಿದ್ಯಾರ್ಥಿಗಳು ವಾಂತಿ ಭೇದಿಯಿಂದ ಅಸ್ವಸ್ಥರಾಗಿದ್ದಾರೆ. ಇರದಲ್ಲಿ ಓರ್ವ ವಿದ್ಯಾರ್ಥಿ ಚಿಕಿತ್ಸೆಗೆ ಸ್ಪಂದಿಸದೇ ಸಾವನ್ನಪ್ಪಿದ್ದಾನೆ. ಉಳಿದ ಅಸ್ವಸ್ಥ ವಿದ್ಯಾರ್ಥಿಗಳಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಇನ್ನು ಘಟನೆಗೆ ಕಾರಣವಾದ ಶಾಲೆಗೆ ಜಿಲ್ಲಾಧಿಕಾರಿ ಡಾ. ಕುಮಾರ್, ಎಸ್ಪಿ ಮಲ್ಲಿಕಾರ್ಜುನ ಬಾಲದಂಡಿ ಸೇರಿದಂತೆ ಹಲವು ಅಧಿಕಾರಿಗಳು ಭೇಟಿ ನೀಡಿ ಸಂಬಂಧಪಟ್ಟ ಅಧಿಕಾರಿಗಳಿಂದ ಮಾಹಿತಿ ಪಡೆದಿದ್ದಾರೆ.
ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಎಸ್ಪಿ ಮಲ್ಲಿಕಾರ್ಜುನ ಬಾಲದಂಡಿ ಅವರು, ಇದರಲ್ಲಿ ಯಾರೇ ತಪ್ಪು ಮಾಡಿದ್ದರೂ ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ. ಸದ್ಯಕ್ಕೆ ವಿದ್ಯಾರ್ಥಿಗಳ ಆರೋಗ್ಯ ಸ್ಥಿರವಾಗಿದೆ. ಘಟನೆ ಬಗ್ಗೆ ಸಂಪೂರ್ಣ ವಿವರ ಪಡೆದುಕೊಳ್ಳಲಾಗಿದೆ. ತಪ್ಪಿತಸ್ಥರನ್ನು ಬಿಡುವ ಮಾತೇ ಇಲ್ಲ ಎಂದು ಎಚ್ಚರಿಕೆ ನೀಡಿದರು.





