ಮಂಡ್ಯ: ಜಿಲ್ಲೆಯ ಮಳಮಳ್ಳಿ ತಾಲ್ಲೂಕಿನ ಟಿ.ಕಾಗೇಪುರ ಖಾಸಗಿ ವಸತಿ ಶಾಲೆಯಲ್ಲಿ ಕಲುಷಿತ ಆಹಾರ ಸೇವಿಸಿ ವಿದ್ಯಾರ್ಥಿಗಳು ಅಸ್ವಸ್ಥರಾಗಿರುವುದರ ಕುರಿತು ಆಸ್ಪತ್ರೆಗೆ ಭೇಟಿ ನೀಡಿದ ಸಚಿವ ಎನ್.ಚಲುವರಾಯಸ್ವಾಮಿ ಅವರು ವಿದ್ಯಾರ್ಥಿಗಳ ಆರೋಗ್ಯ ವಿಚಾರಿಸಿದ್ದಾರೆ.
ಈ ಕುರಿತು ಸಾಮಾಜಿಕ ಮಾಧ್ಯಮ ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ಅವರು, ಮಂಡ್ಯ ಜಿಲ್ಲೆಯ ಮಳವಳ್ಳಿಯ ಗೋಕುಲಂ ವಿದ್ಯಾಸಂಸ್ಥೆಯಲ್ಲಿ ಫುಡ್ ಪಾಯ್ಸನಿಂಗ್ ಪರಿಣಾಮ ಅಸ್ವಸ್ಥಗೊಂಡಿದ್ದ ವಿದ್ಯಾರ್ಥಿಗಳನ್ನು ಮಿಮ್ಸ್ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಇಂದು(ಮಾರ್ಚ್.16) ಆಸ್ಪತ್ರೆಗೆ ಭೇಟಿ ನೀಡಿ, ಆರೋಗ್ಯ ವಿಚಾರಿಸಿದೆ ಎಂದು ತಿಳಿಸಿದ್ದಾರೆ.
ಈ ಪ್ರಕರಣದ ಬಗ್ಗೆ ತನಿಖೆ ನಡೆಸುವಂತೆ ಪೊಲೀಸ್ ಅಧಿಕಾರಿಗಳು ಹಾಗೂ ಆರೋಗ್ಯ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಹೇಳಿದ್ದಾರೆ.





