ಮಂಡ್ಯ: ಕರುನಾಡ ಸೇವಕರು ಸಂಘಟನೆಯ ಮುಖಂಡ ಎಂ.ಬಿ. ನಾಗಣ್ಣಗೌಡ ವಿರುದ್ಧ ಉಪ ಲೋಕಾಯುಕ್ತ ಬಿ. ವೀರಪ್ಪ ಅವರು ಮಾನಹಾನಿಗೆ ಸಂಬಂಧಿಸಿದಂತೆ ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡು ವಿಚಾರಣೆಗೆ ಹಾಜರಾಗುವಂತೆ ಆದೇಶ ಹೊರಡಿಸಿದ್ದಾರೆ.
ಉಪ ಲೋಕಾಯುಕ್ತರ ಮುಂದೆ ದಾಖಲಾಗಿರುವ ಪ್ರಕರಣಗಳಲ್ಲಿ ಕ್ಲೀನ್ ಚಿಟ್ ಕೊಡಿಸುವುದು, ಇಲ್ಲವೇ ಆದಷ್ಟು ಕಡಿಮೆ ಪ್ರಮಾಣದ ಕ್ರಮಕ್ಕೆ ವ್ಯವಸ್ಥೆ ಮಾಡಲಾಗುವುದು ಎಂಬ ಆಮಿಷವನ್ನು ಅಧಿಕಾರಿಗಳಿಗೆ ನೀಡಿ ಹಣ ವಸೂಲಿಯನ್ನು ಜಿಲ್ಲಾಡಳಿತದ ಒಬ್ಬ ವ್ಯಕ್ತಿ, ಒಬ್ಬ ವಕೀಲ ಮತ್ತು ಲೋಕಾಯುಕ್ತದ ಕೆಳಹಂತದ ಅಧಿಕಾರಿಗಳು ಮಾಡಿದ್ದಾರೆ ಎಂದು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಹಾಗೂ ಉಪ ಲೋಕಾಯುಕ್ತರಿಗೆ ಕಳೆದ ಮೇ ೨೧ರಂದು ದೂರು ನೀಡಿದ್ದರು.
ದೂರಿನಲ್ಲಿ ಯಾವುದೇ ಆಧಾರ/ದಾಖಲಾತಿ ಹಾಗೂ ಸಾಕ್ಷ್ಯಾಧಾರಗಳಿಲ್ಲವಾಗಿದ್ದು, ಮಾನಹಾನಿಗೆ ಸಂಬಂಧಿಸಿದಂತೆ ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಂಡು ಸಾಕ್ಷ್ಯ ಮತ್ತು ಆಧಾರಗಳನ್ನು ಹಾಜರುಪಡಿಸಲು ಆದೇಶವನ್ನು ಹೊರಡಿಸಿರುತ್ತಾರೆ.
ಕಳೆದ ಮೇ ೨೨ರ ಶುಕ್ರವಾರ ಮಂಡ್ಯ ನಗರದ ಡಾ. ಬಿ.ಆರ್. ಅಂಬೇಡ್ಕರ್ ಭವನದಲ್ಲಿ ನಡೆದ ದೂರುಗಳ ವಿಚಾರಣೆ ಸಂದರ್ಭದಲ್ಲಿ ಉಪ ಲೋಕಾಯುಕ್ತ ಬಿ. ವೀರಪ್ಪ ಅವರು ಸರಿಯಾದ ಆಧಾರ ಮತ್ತು ದಾಖಲೆಗಳಿಲ್ಲದೆ ಸುಮ್ಮನೆ ಆರೋಪ ಮಾಡಿ, ಲೋಕಾಯುಕ್ತ ಅಧಿಕಾರಿಗಳ ಕರ್ತವ್ಯಕ್ಕೆ ಅಡ್ಡಿಪಡಿಸಬೇಡಿ, ಸಮಾಜದಲ್ಲಿ ನಡೆಯುತ್ತಿರುವ ಭ್ರಷ್ಟಾಚಾರ, ಭೂ ಅಕ್ರಮ, ವಿದ್ಯಾರ್ಥಿಗಳ ಸಮಸ್ಯೆ ಕುರಿತಂತೆ ಬೆಳಕು ಚೆಲ್ಲಿ. ಸುಮ್ಮನೆ ಅಧಿಕಾರಿಗಳ ವಿರುದ್ಧ ಆರೋಪ ಮಾಡಬೇಡಿ ಎಂದು ತಿಳಿ ಹೇಳಿದ್ದನ್ನು ಇಲ್ಲಿ ಸ್ಮರಿಸಬಹುದು.
ಕೇರಳಂ: ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರನ್ನು ಹುದ್ದೆಯಿಂದ ಕೆಳಗಿಳಿಸುವಂತೆ ಆಗ್ರಹಿಸಿ ಕೇರಳಂ ವಿಧಾನಸಭೆಯಲ್ಲಿ ನಿರ್ಣಯ ಅಂಗೀಕರಿಸಲಾಗಿದೆ. ಎಸ್‌ಐಆರ್…
ಶ್ರೀರಂಗಪಟ್ಟಣ: ಇಲ್ಲಿ ನಡೆಯುವ ದಸರಾ ಮಹೋತ್ಸವದಲ್ಲಿ ಭಾಗವಹಿಸುವ ಆನೆಗಳನ್ನು ಆಯ್ಕೆ ಮಾಡಲಾಗಿದೆ. ಧನಂಜಯ, ಲಕ್ಷ್ಮಿ ಹಾಗೂ ರೂಪ ಆನೆಗಳು ಈ…
ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ 2026ರ ಸಿದ್ಧತೆಗಳು ಬಿರುಸುಗೊಂಡಿವೆ. ದಸರಾ ಗಜಪಡೆ ಹಾಗೂ ಅಶ್ವಪಡೆಗೆ ನಡೆದ ಮೂರನೇ ಹಂತದ ಕುಶಾಲತೋಪು…
ನವದೆಹಲಿ: ಸತ್ಯಕ್ಕೆ ಅಂತಿಮ ಗೆಲುವಾಗಲಿದೆ. ಈ ಹೋರಾಟದಿಂದ ಯಾವುದೇ ಕಾರಣಕ್ಕೂ ಹಿಂಜರಿಯುವುದಿಲ್ಲ” ಎಂದು ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್…
ಮೈಸೂರು: ಬಹುಭಾಷಾ ನಟ ಪ್ರಭುದೇವ್ ಅವರು ತಮ್ಮ ತಾಯಿಯೊಂದಿಗೆ ಸುತ್ತೂರು ಮಠಕ್ಕೆ ಭೇಟಿ ನೀಡಿ ಶ್ರೀಗಳ ದರ್ಶನ ಪಡೆದರು. ನಾಳೆ…
ವರದಿ ರೂಪ: ರವಿಚಂದ್ರ ಚಿಕ್ಕೆಂಪಿಹುಂಡಿ ಮಾಗಡಿ ರಸ್ತೆಯಲ್ಲಿತ್ತು ದೊಡ್ಡ ಮೋರಿ, ಮರಗಳ ತೋಪು, ಸುತ್ತಲೂ ಕತ್ತಲಿನಿಂದ ಕೂಡಿದ್ದ ನಿರ್ಜನ ಪ್ರದೇಶ…