ಜ.26 ರಂದು ಅಧಿಕಾರಿಗಳಿಗೆ ಅಭಿನಂದನಾ ಸಮಾರಂಭ
ಮಂಡ್ಯ: ಜಿಲ್ಲಾ ನಾಗರಿಕ ಅಭಿನಂದನಾ ಸಮಿತಿ ಹಾಗೂ ನೆಲೆಯೋಗಿ ಸಮಾಜಸೇವಾ ಟ್ರಸ್ಟ್ (ರಿ) ಇವರ ಸಂಯುಕ್ತಾಶ್ರಯದಲ್ಲಿ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಯಶಸ್ಸಿಗೆ ಶ್ರಮಿಸಿದ ಎಲ್ಲಾ ಶಾಸಕರು ಹಾಗೂ ಅಧಿಕಾರಿಗಳಿಗೆ ಅಭಿನಂದನಾ ಸಮಾರಂಭವನ್ನು ಜನವರಿ 26 ಸಂಜೆ 6 ಗಂಟೆಗೆ ಬಾಲಕರ ಸರ್ಕಾರಿ ಕಾಲೇಜು ಆವರಣದಲ್ಲಿ ಹಮ್ಮಿಕೊಳ್ಳಲಾಗಿದೆ.
87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಅಧ್ಯಕ್ಷರಾದ ನಾಡೋಜ ಡಾ.ಗೊ.ರು. ಚನ್ನಬಸಪ್ಪ ನವರು ಕಾರ್ಯಕ್ರಮದ ಅಧ್ಯಕ್ಷತೆವಹಿಸಿ ಅಭಿನಂದಿಸಲಿದ್ದಾರೆ.
ಕೃಷಿ ಸಚಿವರು ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವರಾದ ಎನ್ ಚೆಲುವರಾಯಸ್ವಾಮಿ, ಸ್ವಾಗತ ಸಮಿತಿ ಅಭಿನಂದಿತರು,
ವಿಧಾನ ಪರಿಷತ್ ಶಾಸಕರಾದ ದಿನೇಶ್ ಗೂಳಿಗೌಡ, ಮಧು ಜಿ. ಮಾದೇಗೌಡ, ಕೆ.ವಿವೇಕಾನಂದ, ವಿಧಾನಸಭಾ ಶಾಸಕರುಗಳಾದ ಪಿ.ಎಂ ನರೇಂದ್ರಸ್ವಾಮಿ, ಎಂ.ಬಿ. ರಮೇಶ್ ಬಂಡಿಸಿದ್ದೇಗೌಡ, ಪಿ ರವಿಕುಮಾರ್, ದರ್ಶನ್ ಪುಟ್ಟಣ್ಣಯ್ಯ, ಹೆಚ್ .ಟಿ ಮಂಜು, ಕೆ.ಎಂ. ಉದಯ್, ಜಿಲ್ಲಾಧಿಕಾರಿ ಡಾ.ಕುಮಾರ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶೇಕ್ ತನ್ವೀರ್ ಆಸಿಫ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ, ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ನಾಡೋಜ ಡಾ.ಮಹೇಶ್ ಜೋಷಿ ಹಾಗೂ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಸಂಚಾಲಕರಾದ ಡಾ.ಮೀರಾ ಶಿವಲಿಂಗಯ್ಯ ರವರಿಗೆ ಅಭಿನಂದಿಸಲಾಗುವುದು.
ಖ್ಯಾತ ಗಾಯಕರುಗಳಾದ ಹೇಮಂತ್ ಶಮಿತಾ ಮಲ್ನಾಡ್ ಮತ್ತು ಹರ್ಷ ತಂಡದಿಂದ ರಸಸಂಜೆ ಕಾರ್ಯಕ್ರಮ ಏರ್ಪಡಿಸಲಾಗಿದೆ.