ಕಿಕ್ಕೇರಿ: ಕಬ್ಬು ತುಂಬಿದ ಟ್ರ್ಯಾಕ್ಟರ್ ಪಲ್ಟಿಯಾದ ಪರಿಣಾಮ 6 ವರ್ಷದ ಬಾಲಕಿ ಮೃತಪಟ್ಟಿರುವ ಘಟನೆ ಇಲ್ಲಿಗೆ ಸಮೀಪದ ಕೋಡಿಮರನಹಳ್ಳಿ ಗ್ರಾಮದ ಬಳಿ ನಡೆದಿದೆ.
ಮಹಾರಾಷ್ಟ ಮೂಲದ ಕವಿತಾ ರಾಥೋಡ್ ಅವರ ಪುತ್ರಿ ರೋಶಿಣಿ ಮೃತ ಬಾಲಕಿ. ಕವಿತಾ ರಾಥೋಡ್ ಕುಟುಂಬವು ಕೋರಮಂಡಲ್ ಸಕ್ಕರೆ ಕಾರ್ಖಾನೆಗೆ ಕಬ್ಬು ಕಟಾವು ಮಾಡಲು ಕಾರ್ಮಿಕರಾಗಿ ಬಂದಿದ್ದು, ಕೋಡಿಮರನಹಳ್ಳಿ ಗ್ರಾಮದಲ್ಲಿ ರವಿ ಎಂಬುವವರಿಗೆ ಸೇರಿದ ಕಬ್ಬನ್ಬು ಕಟಾವು ಮಾಡಿ ಕಬ್ಬನ್ನು ಟ್ರ್ಯಾಕ್ಟರ್ ಗೆ ತುಂಬಿ ಕೋರಮಂಡಲ್ ಸಕ್ಕರೆ ಕಾರ್ಖಾನೆಗೆ ತೆಗೆದುಕೊಂಡು ಹೋಗಲಾಗುತ್ತಿತ್ತು.
ಟ್ರ್ಯಾಕ್ಟರ್‌ನಲ್ಲಿದ್ದ ಕಬ್ಬು ಜಾರಿದಾಗ ಟ್ರ್ಯಾಕ್ಟರ್ ರಸ್ತೆಗೆ ಬಿದ್ದಿದೆ. ಈ ಸಂದರ್ಭದಲ್ಲಿ ರವಿ ಎಂಬುವವರ ಮನೆ ಪಕ್ಕದಲ್ಲಿ ಹಾಕಲಾಗಿದ್ದ ನಲ್ಲಿಯಲ್ಲಿ ಬಾಲಕಿ ರೋಶಿಣಿ ನೀರು ಕುಡಿಯುತ್ತಿದ್ದು, ಕಬ್ಬು ಸಂಪೂರ್ಣವಾಗಿ ಈಕೆಯ ಮೇಲೆ ಬಿದ್ದಿದೆ.
ಇದನ್ನು ನೋಡಿದ ಸಾರ್ವಜನಿಕರು ಕೂಡಲೇ ಜೆಸಿಬಿ ಮೂಲಕ ಕಬ್ಬನ್ನು ತೆರವುಗೊಳಿಸಿ ಅಸ್ವಸ್ಥಳಾಗಿದ್ದ ಬಾಲಕಿ ರೋಶಿಣಿಯನ್ನು ಕೆ.ಆರ್.ಪೇಟೆ ತಾಲ್ಲೂಕು ಆಸ್ಪತ್ರೆಗೆ ಕರೆದುಕೊಂಡು ಹೋಗುತ್ತಿದ್ದಾಗ ಮಾರ್ಗ ಮಧ್ಯೆದಲ್ಲೇ ಮೃತಪಟ್ಟಳು.
ಈ ಸಂಬಂಧ ಕಿಕ್ಕೇರಿ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.
ಗುಂಡ್ಲುಪೇಟೆ : ತಾಲ್ಲೂಕಿನ ಬರಗಿ ಗ್ರಾಮದ ಜಮೀನುಗಳಲ್ಲಿ ಜಾನುವಾರುಗಳ ಮೇಲೆ ದಾಳಿ ನಡೆಸಿ ಕೊಂದುಹಾಕಿದ್ದ ವಿಚಾರವಾಗಿ ಅರಣ್ಯ ಇಲಾಖೆ ಚಿರತೆ…
ಮೈಸೂರು : ಬುಧವಾರವಷ್ಟೇ ಹೆಬ್ಬಾಳ್‌ನಲ್ಲಿ ಶೆಡ್‌ವೊಂದರ ಮೇಲೆ ದಾಳಿ ನಡೆಸಿದ್ದ ಎನ್‌ಸಿಬಿ ಪೊಲೀಸರು, ಮಾದಕ ವಸ್ತು ಮಾರಾಟ ಆರೋಪ ಪ್ರಕರಣದಲ್ಲಿ…
ಹನೂರು : ತಾಲ್ಲೂಕಿನ ಬಿ.ಆರ್.ಟಿ ಹುಲಿ ಸಂರಕ್ಷಿತ ಪ್ರದೇಶದ ಬೈಲೂರು ವನ್ಯಜೀವಿ ವಲಯ ವ್ಯಾಪ್ತಿಯಲ್ಲಿ ಅಕ್ರಮವಾಗಿ ತೇಗದ ಮರಗಳನ್ನು ಕಟಾವು…
ಮೈಸೂರು : ವಿಶ್ವವಿದ್ಯಾನಿಲಯಗಳ ಕ್ಯಾಂಪಸ್‌ನಲ್ಲಿ ಜಾತಿ, ಧರ್ಮ,ಲಿಂಗ ಆಧಾರಿತ ಶೋಷಣೆಯನ್ನು ತಡೆಗಟ್ಟಲು ಯುಜಿಸಿಯ ಉದ್ದೇಶಿತ ಹೊಸ ನಿಯಮಾವಳಿಗಳ ಜಾರಿಗೆ ಒತ್ತಾಯಿಸಿ…
ಬೆಂಗಳೂರು : ರಾಜ್ಯ ಸರ್ಕಾರಿ ನೌಕರರಿಗೆ ಖಾದಿ ಬಟ್ಟೆ ಬಳಕೆ ಕಡ್ಡಾಯಗೊಳಿಸಲಾಗಿದೆ. ಪ್ರತಿ ತಿಂಗಳ ಮೊದಲ ಶನಿವಾರ ಖಾದಿ ಬಟ್ಟೆ…
ಹೊಸದಿಲ್ಲಿ : ಮಹತ್ವದ ಬೆಳವಣಿಗೆಯಲ್ಲಿ ವಿಶ್ವವಿದ್ಯಾಲಯ ಅನುದಾನ ಆಯೋಗದ (ಯುಜಿಸಿ) ಹೊಸ ನಿಯಮಗಳಿಗೆ ಸರ್ವೋಚ್ಚ ನ್ಯಾಯಾಲಯ ತಡೆ ನೀಡಿದೆ. ವಿಶ್ವವಿದ್ಯಾಲಯ…