ಮಂಡ್ಯ : ಜಿಲ್ಲೆಯಲ್ಲಿ ಕಬ್ಬು ಕಟಾವು ನಂತರ ಸಕ್ಕರೆ ಕಾರ್ಖಾನೆಗೆ ಸಾಗಾಣಿಕೆ ಮಾಡುವ ವೆಚ್ಚವನ್ನು ರೈತರ ಮೇಲೆ ವಿಧಿಸುವಂತಿಲ್ಲ ಎಂದು ಜಿಲ್ಲಾಧಿಕಾರಿ ಡಾ ಕುಮಾರ ಅವರು ಹೇಳಿದರು. ಗುರುವಾರ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಕಬ್ಬು ಸಾಗಾಣಿಕೆ ವೆಚ್ಚ ಕುರಿತು ರೈತರು ಹಾಗೂ ಲಾರಿ ಮಾಲೀಕರ ನಡುವೆ ಇದ್ದ ಗೊಂದಲವನ್ನು ಪರಿಹರಿಸಲು ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಸರ್ಕಾರ ಹಾಗೂ ಜಿಲ್ಲಾಢಳಿತ ರೈತರ ಹಿತ ಕಾಯುವ ಕೆಲಸ ಮಾಡುತ್ತದೆ ಎಂದರು.
ಕಬ್ಬು ಸಾಗಾಣಿಕಾ ವೆಚ್ಚವನ್ನು ಸಕ್ಕರೆ ಕಾರ್ಖಾನೆಗಳು ರೈತರಿಗೆ ನೀಡುವ ಕಬ್ಬು ಖರೀದಿ ಹಣದಲ್ಲಿ ಕಟಾವು ಮಾಡುವಂತಿಲ್ಲ. ಸಕ್ಕರೆ ಕಾರ್ಖಾನೆಗಳು ಲಾರಿ ಮಾಲೀಕರಿಗೆ ಕಬ್ಬು ಸಾಕಾಣಿಕೆ ವೆಚ್ಚವನ್ನು ಭರಿಸುವ ಬಗ್ಗೆ ಚರ್ಚಿಸಿ ರೈತರಿಗೆ ಹೊರೆಯಾಗದಂತೆ ನೋಡಿಕೊಳ್ಳಬೇಕು ಎಂದರು.
ಜಿಲ್ಲಾ ಲಾರಿ ಮಾಲೀಕರು ಲಾರಿ ಆಯುಕ್ತಲಾಯದಿಂದ ನಿಗಧಿ ಪಡಿಸಿರುವ ದರವನ್ನು ಯಾವುದೇ ರೈತರ ಮೇಲೆ ಏರುವಂತಿಲ್ಲ. ರೈತರ ಹಿತ ರಕ್ಷಣೆ ಮಾಡುವುದು ಜಿಲ್ಲಾಡಳಿತದ ಜವಾಬ್ದಾರಿಯಾಗಿದೆ ಎಂದು ಹೇಳಿದರು. ಲಾರಿ ಮಾಲೀಕರು ಹಾಗೂ ಸಕ್ಕರೆ ಕಾರ್ಖಾನೆಗಳು ಜೊತೆಗೂಡಿ ಸಮನ್ವಯ ಸಾಧಿಸಿ ವೆಚ್ಚವನ್ನು ಭರಿಸಿ, ಸಕ್ಕರೆ ಕಾರ್ಖಾನೆಗಳು ತಮ್ಮ ಮುಖ್ಯಸ್ಥರೊಂದಿಗೆ ಚರ್ಚಿಸಿ ಸೂಕ್ತ ತೀರ್ಮಾನ ಕೈಗೊಳ್ಳಿ ಎಂದರು.
ಮೇಲುಕೋಟೆ ವಿಧಾನಸಭಾ ಕ್ಷೇತ್ರದ ಶಾಸಕ ದರ್ಶನ್ ಪುಟ್ಟಣ್ಣಯ್ಯ ಅವರು ಮಾತನಾಡಿ, ಜಿಲ್ಲೆಯಲ್ಲಿ ಪ್ರಸ್ತುತ 206 ಬ್ಯಾಚ್ ಗಳಾಗಿ ಕಬ್ಬು ಕಟಾವು ಮಾಡುವವರು ಆಗಮಿಸಿದ್ದಾರೆ, ಜಿಲ್ಲೆಯಲ್ಲಿ ಕಬ್ಬು ಕಟಾವು ಮಾಡುವವರ ಕೊರತೆ ಇರುವುದರಿಂದ ಹೊರ ಜಿಲ್ಲೆ ಹೊರ ರಾಜ್ಯದಿಂದ ಬಂದು ಕಟಾವು ಮಾಡಿ ಸಾಗಾಣಿಕೆಯನ್ನು ಅವರೇ ಮಾಡುತ್ತಿದ್ದಾರೆ ಎಂದರು.
ಲಾರಿ ಮಾಲೀಕರಾಗಲಿ ಸಕ್ಕರೆ ಕಾರ್ಖಾನೆಗಳಾಗಲಿ ರೈತರಿಗೆ ಸಾಗಾಣಿಕೆ ವೆಚ್ಚವನ್ನು ಭರಿಸುವಂತೆ ಒತ್ತಾಯಿಸುವಂತಿಲ್ಲ ಎಂದು ತಿಳಿಸಿದರು. ಸಭೆಯಲ್ಲಿ ಮೈಷುಗರ್ ಅಧ್ಯಕ್ಷ ಸಿ ಡಿ ಗಂಗಾಧರ್, ರಾಜ್ಯ ಲಾರಿ ಮಾಲೀಕರ ಅಧ್ಯಕ್ಷ ಷಣ್ಮುಗಂ, ಜಿಲ್ಲಾ ಪ್ರಾದೇಶಿಕ ಸಾರಿಗೆ ಅಧಿಕಾರಿ ಹೇಮಾವತಿ, ಜಿಲ್ಲಾ ಲಾರಿ ಮಾಲೀಕರ ಅಧ್ಯಕ್ಷ ವೇಣುಗೋಪಾಲ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
ಗೋಲ್ಡ್ ಕೋಸ್ಟ್ (ಆಸ್ಟ್ರೇಲಿಯಾ) : ಆಸ್ಟ್ರೇಲಿಯಾದಲ್ಲಿ ನಡೆಯುತ್ತಿರುವ ಏಷ್ಯಾ ಮಹಿಳಾ ಫುಟ್ಬಾಲ್ ಕಪ್ 2026ನಲ್ಲಿ ಭಾಗವಹಿಸಿದ್ದ ಇರಾನ್ ರಾಷ್ಟ್ರೀಯ ಮಹಿಳಾ…
ಹೊಸದಿಲ್ಲಿ : ಇರಾನ್ ಮೇಲಿನ ಅಮೆರಿಕಾ-ಇಸ್ರೇಲ್ ದಾಳಿಗಳು ಮತ್ತು ಇರಾನ್‌ಗೆ ಹೊಸ ಸುಪ್ರೀಂ ಲೀಡರ್ ನೇಮಕದ ನಂತರ ಮಧ್ಯಪ್ರಾಚ್ಯದಲ್ಲಿ ತೀವ್ರ…
ಹೊಸದಿಲ್ಲಿ : ಮಧ್ಯಪ್ರಾಚ್ಯದಲ್ಲಿ ಇರಾನ್-ಇಸ್ರೇಲ್-ಅಮೆರಿಕಾ ನಡುವಿನ ಸಂಘರ್ಷದ ಹಿನ್ನೆಲೆಯಲ್ಲಿ ವಾಯುಪ್ರದೇಶದಲ್ಲಿ ತುರ್ತು ನಿರ್ಬಂಧಗಳು ಜಾರಿಯಾಗಿರುವುದರಿಂದ ದೆಹಲಿಯಿಂದ ಮ್ಯಾಂಚೆಸ್ಟರ್‌ಗೆ ಹೋಗುತಿದ್ದ ಇಂಡಿಗೊ…
ಮೈಸೂರು : ಮೈಸೂರು ಅಭಿವೃದ್ಧಿ ಪ್ರಾಧಿಕಾರ (MDA) ಈ ಬಾರಿಯ ಆರ್ಥಿಕ ವರ್ಷದ ಬಜೆಟ್‌ನಲ್ಲಿ ನಗರದ ಸಮಗ್ರ ಅಭಿವೃದ್ಧಿಗೆ ತೀವ್ರ…
ಮೈಸೂರು : ಮನೆಗಳ್ಳತನ, ವಾಹನ ಕಳ್ಳತನ, ದರೋಡೆ ಸೇರಿದಂತೆ ಕಳೆದ ಎರಡು ತಿಂಗಳಲ್ಲಿ ಜಿಲ್ಲೆಯಲ್ಲಿ ನಡೆದಿದ್ದ 24 ಅಪರಾಧ ಪ್ರಕರಣಗಳನ್ನು…
ಮೈಸೂರು : ರಾಜ್ಯ ಸರ್ಕಾರದ ʻಪಂಚ ಗ್ಯಾರಂಟಿʼ ಯೋಜನೆಗಳಿಂದ ಮಹಿಳಾ ಸಬಲೀಕರಣ ಸಾಧ್ಯವಾಗಿದೆ ಎಂದು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ…