ಮಂಡ್ಯ: ಅಂಬರೀಶ್ ಅವರ ಶ್ರೀಮತಿಯಾಗಿರುವ ಸುಮಲತ ಅಂಬರೀಶ್ ಅವರು ಬುದ್ದಿವಂತರಿದ್ದಾರೆ. ನಿರ್ಧಾರ ತೆಗೆದುಕೊಳ್ಳುವಲ್ಲಿ ಸಮರ್ಥರಿದ್ದಾರೆ. ಅವರು ಜೆಡಿಎಸ್ ಜೊತೆ ನಿಲ್ಲುವುದು ಅಕ್ಷಮ್ಯ ಅಪರಾಧ. ಅವರು ಇದನ್ನು ಮಾಡುವುದಿಲ್ಲ ಎಂದು ನಾನು ಭಾವಿಸುತ್ತೇನೆ ಎಂದು ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಎನ್. ಚೆಲುವರಾಯಸ್ವಾಮಿ ಹೇಳಿದ್ದಾರೆ.
ನಗರದಲ್ಲಿಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸುಮಲತಾ ಅಂಬರೀಶ್ ಅವರು ಕಾಂಗ್ರೆಸ್ ಸೇರಿದರೇ ನಮಗೆ ಯಾವುದೇ ಆಕ್ಷೇಪಣೆಯಿಲ್ಲ. ಅವರು ಬಂದರೆ ಸ್ವಾಗತಿಸುತ್ತೇವೆ. ಅವರ ಶಿಷ್ಯರು ನಮ್ಮ ಜೊತೆ ಮಾತನಾಡಿದ್ದಾರೆ. ಸುಮಲತಾ ಅವರು ಕಾಂಗ್ರೆಸ್ ಬರುವಂತೆ ನಾವು ಒತ್ತಾಯ ಮಾಡುವುದಿಲ್ಲ ಸ್ವತಃ ಯೋಚಿಸಿ ಸ್ವಾಭಿಮಾನದ ನಿರ್ಧಾರ ತೆಗೆದುಕೊಳ್ಳಲಿ. ಸುಮಲತಾ ಅಂಬರೀಶ್ ಕಾಂಗ್ರೆಸ್ ಗೆ ಬೆಂಬಲ ಘೋಷಿಸಬೇಕು. ಇಲ್ಲ ಅವರು ತಟಸ್ಥವಾಗಿ ಇರುವ ನಿರ್ಧಾರ ತೆಗೆದುಕೊಳ್ಳಲಿ ಎಂದರು.
ಇನ್ನು ಕಾಂಗ್ರೆಸ್‌ಗೆ ಸುಮಲತಾ ಸೇರ್ಪಡೆಗೊಂಡರೆ ಪಕ್ಷದಲ್ಲಿ ಸ್ಥಾನಮಾನ ಸಿಗಲಿದೆಯಾ ಎಂಬ ಪ್ರಶ್ನೆಗೆ, ಅವರಿಗೆ ಸೂಕ್ತ ಸ್ಥಾನಮಾನ ನೀಡುವ ಬಗ್ಗೆ ಪಕ್ಷದ ವರಿಷ್ಠರು ತೀರ್ಮಾನ ಮಾಡುತ್ತಾರೆ. ಕಳೆದ ಬಾರಿಯ ಚುನಾವಣೆ ವೇಳೆ ನಾವು ಮೈತ್ರಿಗೆ ಸಹಕರಿಸದೇ ಸುಮಲತಾಗೆ ಬೆಂಬಲಿಸಿದ ರೀತಿಯಲ್ಲಿ ಸುಮಲತಾ ಇಂದು ನಮಗೆ ಬೆಂಬಲಿಸಬೇಕು. ಅದು ಬಿಟ್ಟು ಅವರು ಅಮಿತ್ ಶಾ, ನರೇಂದ್ರ ಮೋದಿ ಅವರು ಭರವಸೆ ನೀಡಿದ್ದಾರೆ ಎಂದು ಮೈತ್ರಿಗೆ ಬೆಂಬಲ ನೀಡುವುದು ಅವರ ಇಚ್ಛೆ. ಆದರೆ, ಸುಮಲತಾ ಅವರು ತಮ್ಮ ಆತ್ಮ ಸಾಕ್ಷಿಗೆ ವಿರುದ್ಧವಾಗಿ ಮಾತನಾಡುವುದು ಅವರಿಗೆ ಶೋಭೆ ತರುವುದಿಲ್ಲ ಎಂದು ಮಂಡ್ಯದಲ್ಲಿ ಚೆಲುವರಾಯಸ್ವಾಮಿ ಹೇಳಿಕೆ ನೀಡಿದ್ದಾರೆ.
ಹೊಸದಿಲ್ಲಿ : ಕೇಂದ್ರ ಸಚಿವರಾದ ಅಶ್ವಿನ್ ವೈಷ್ಣವ್ ಮತ್ತು ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಅವರ ನಡುವೆ ಕರ್ನಾಟಕದಲ್ಲಿ ಉದ್ಯೋಗ…
ಬೆಂಗಳೂರು : ಚಿತ್ರದುರ್ಗದ ಹಿರಿಯೂರು ಬಳಿ ಇಂದು ಬೆಳಗಿನ ಜಾವ ಸಂಭವಿಸಿದ ರಸ್ತೆ ಅಪಘಾತದ ಮಾರ್ಗದಲ್ಲಿ ಶಾಲಾ ಮಕ್ಕಳು ಪ್ರಯಾಣಿಸುತ್ತಿದ್ದ…
ಬೆಂಗಳೂರು: ನಾನು ಪಕ್ಷದ ಅಧ್ಯಕ್ಷನಾಗಿ ಬಾವುಟ ಕಟ್ಟಿದ್ದೇನೆ, ಕಸ ಗುಡಿಸಿದ್ದೇನೆ. ಪಕ್ಷಕ್ಕಾಗಿ ಎಲ್ಲವನ್ನೂ ಮಾಡಿದ್ದೇನೆ. ನಾನು ಸ್ಟೇಜ್ ಮೇಲೆ ಕೂತು…
ಬೆಂಗಳೂರು: ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಭಾಗಿಯಾಗಲು ಸಿಎಂ ಸಿದ್ದರಾಮಯ್ಯ ಅವರು ನಾಳೆ ದೆಹಲಿಗೆ ತೆರಳಲಿದ್ದಾರೆ. ಡಿಸೆಂಬರ್.27ರಂದು ದೆಹಲಿಯ ಇಂದಿರಾ…
ಚಾಮರಾಜನಗರ: ಗಡಿ ಜಿಲ್ಲೆ ಚಾಮರಾಜನಗರದಲ್ಲಿ ಹುಲಿಗಳ ಉಪಟಳ ಹೆಚ್ಚಾಗಿದ್ದು, ದೇಪಾಪುರ ಗ್ರಾಮದ ಹೊರವಲಯದಲ್ಲಿ ಹುಲಿಯೊಂದು ಬೋನಿಗೆ ಬಿದ್ದಿದೆ. ಹುಲಿಯನ್ನು ನೋಡಲು…
ಬೆಂಗಳೂರು: ರಾಜ್ಯದಲ್ಲಿ ತೀವ್ರ ಚಳಿ, ಶೀತಗಾಳಿಯ ಜೊತೆಗೆ ಬೆಳಗಿನ ವೇಳೆ ಕೆಲವೆಡೆ ದಟ್ಟವಾದ ಮಂಜು ಆವರಿಸುತ್ತಿದೆ. ಬೆಳಗಿನ ವೇಳೆಯಲ್ಲಿ ದಟ್ಟವಾದ…