ಮಂಡ್ಯ/ಬೆಂಗಳೂರು: ಶ್ರೀರಂಗಪಟ್ಟಣದ ಮುಡಬಾಗಿಲು ಆಂಜನೇಯ ಸ್ವಾಮಿ ದೇವಾಲಯ ದ್ವಂಸಗೊಳಿಸಿ ಅಲ್ಲಿ ಜಾಮಿಯಾ ಮಸೀದಿ ನಿರ್ಮಿಸಲಾಗಿದೆ. ಈ ಪ್ರದೇಶದಲ್ಲಿ ಉತ್ಖನನ ನಡೆಸಿ ವರದಿ ನೀಡಲು ಭಾರತೀಯ ಪುರಾತತ್ವ ಸರ್ವೇಕ್ಷಣಾಲಯಕ್ಕೆ ನಿರ್ದೇಶಿಸಬೇಕು ಎಂದು ಹೂಡಲಾಗಿದ್ದ ಅರ್ಜಿಗೆ ಸಂಬಂಧಿಸಿದಂತೆ, ರಾಜ್ಯ ಸರ್ಕಾರ ಹಾಗೂ ಪುರಾತತ್ವ ಇಲಾಖೆಗೆ ಹೈಕೋರ್ಟ್ ನೋಟಿಸ್ ನೀಡಿದೆ.
ಜಿಲ್ಲೆಯ ಹಾಲನಹಳ್ಳಿ ಭಜರಂಗ ಸೇನೆಯ ರಾಜ್ಯ ಘಟಕ ಅಧ್ಯಕ್ಷ ಸಲ್ಲಿಸಿರುವ ಸಾರ್ವಜನಿಕ ಹಿತಾಶಕ್ತಿ ಅರ್ಜಿಯನ್ನು ಎನ್.ವಿ ಅಂಜಾರೀಯಾ ನೇತೃತ್ವದ ವಿಭಾಗೀಯ ಪೀಠ ಅಂಗೀಕರಿಸಿ, ವಾದ-ವಿವಾದ ಆಲಿಸಿ ಈ ನೋಟಿಸ್ ನೀಡಲು ಆದೇಶಿಸಿತು. ಮತ್ತು ಈ ವಿಚಾರಣೆಯನ್ನು ಜುಲೈ. 11ಕ್ಕೆ ಮುಂದೂಡಲಾಯಿತು.
ಈ ಅರ್ಜಿಯಲ್ಲಿ ಮೂಡಬಾಗಿಲು ಆಂಜನೇಯ ಸ್ವಾಮಿ ದೇವಾಲಯವನ್ನು ವಿಜಯನಗರ ಸಾಮ್ರಾಜ್ಯ, ಮೈಸೂರು ಅರಸರು ಪೋಷಿಸುತ್ತಾ ಬಂದಿದ್ದರು. ಈ ದೇವಾಲಯವನ್ನು ಟಿಪ್ಪು ತನ್ನ ಅಧಿಕಾರಾವಧಿಯಲ್ಲಿ ದ್ವಂಸ ಮಾಡಿ ಬಳಿಕ ಅದೇ ಜಾಗದಲ್ಲಿ ಜಾಮೀಯಾ ಮಸೀದಿಯನ್ನು ನಿರ್ಮಿಸಿದ್ದರು ಎಂದು ಅರ್ಜಿಯಲ್ಲಿ ಅಕ್ಷೇಪಿಸಿದ್ದರು. ಈ ಸಂಬಂಧ ನ್ಯಾಯಾಲಯ ಭಾರತೀಯ ಪುರಾತತ್ವ ಇಲಾಖೆಗೆ ನಿರ್ದೇಶನ ನೀಡುವಂತೆ ಕೋರಿದ್ದರು.
ಕಠ್ಮಂಡು: ನೇಪಾಳದಲ್ಲಿ ಮತ್ತೆ ಪ್ರವಾಹ, ಭೂಕುಸಿತದ ಆರ್ಭಟ ಮುಂದುವರಿದಿದ್ದು, ಕೇವಲ 8 ಸೆಕೆಂಡ್‌ಗಳಲ್ಲಿ ಪರ್ವತವೇ ಕುಸಿದು ಬಿದ್ದಿದೆ! ವಿವಿಧೆಡೆ ಸಂಭವಿಸಿದ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಪಳನಿಮೇಡ್ ಗ್ರಾಮದಲ್ಲಿ ರೈತನ ಮೇಲೆ ಕಾಡುಹಂದಿ ದಾಳಿ ಮಾಡಿದ್ದು,…
ಮೈಸೂರು: ಮುಡಾ 50:50 ಸೈಟ್ ವಿಚಾರದಲ್ಲಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಮಹತ್ವದ ಮಾಹಿತಿ ನೀಡಿದ್ದಾರೆ. ಶೀಘ್ರದಲ್ಲೇ ಅಕ್ರಮ ಸೈಟ್‌ಗಳ…
ಕೊಪ್ಪಳ: ಮೈಸೂರು ದಸರಾ ಉದ್ಘಾಟನೆ ಕುರಿತು ಹರಿದಾಡುತ್ತಿದ್ದ ವದಂತಿಗಳಿಗೆ ಗವಿಮಠದ ಗವಿಸಿದ್ದೇಶ್ವರ ಸ್ವಾಮೀಜಿ ತೆರೆ ಎಳೆದಿದ್ದಾರೆ. ಮೈಸೂರು ದಸರಾ ಉದ್ಘಾಟನೆಗೆ…
ನವದೆಹಲಿ: ಬ್ಯಾಂಕ್ ಗ್ರಾಹಕರಿಗೆ ಯಾವುದೇ ಆತಂಕ ಬೇಡ. ಇಂದಿನಿಂದ ನಡೆಯಬೇಕಿದ್ದ 3 ದಿನಗಳ ಬ್ಯಾಂಕ್ ಮುಷ್ಕರ ಮುಂದೂಡಿಕೆಯಾಗಿದೆ. ಬ್ಯಾಂಕ್ ಸೇವೆಗಳಲ್ಲಿ…
ಪ್ರಜಾತಂತ್ರ ವ್ಯವಸ್ಥೆಯ ಭಾರತದಲ್ಲಿ ಪ್ರತಿ ಐದು ವರ್ಷಗಳಿಗೊಮ್ಮೆ ಸಂಸತ್ತು ಮತ್ತು ವಿಧಾನಸಭೆಗಳಿಗೆ ಮುಕ್ತ ಮತ್ತು ನಿಷ್ಪಕ್ಷಪಾತ ಚುನಾವಣೆಯನ್ನು ನಡೆಸುವ ಮೂಲಕ…