ಮಂಡ್ಯ: ಕೆಆರ್‌ಎಸ್ ಅಣೆಕಟ್ಟಿನ ಹಿನ್ನೀರಿನ ಪ್ರದೇಶದಲ್ಲಿ ಒತ್ತುವರಿಯನ್ನು ತೆರವುಗೊಳಿಸಲು ಕೂಡಲೇ ಸರ್ವೆ ಕಾರ್ಯ ಪ್ರಾರಂಭಿಸುವ ಬಗ್ಗೆ ಜಿಲ್ಲಾಧಿಕಾರಿ ಡಾ.ಕುಮಾರ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಯಿತು.
ಕೆಆರ್‌ಎಸ್ ಅಣೆಕಟ್ಟು ರಾಜ್ಯದ ಪ್ರಮುಖ ಜಲಸಂಪನ್ಮೂಲವಾಗಿದ್ದು, ಮೈಸೂರು, ಮಂಡ್ಯ ಸೇರಿದಂತೆ ಹಲವು ಜಿಲ್ಲೆಗಳ ಕುಡಿಯುವ ನೀರು, ಕೃಷಿ ಮತ್ತು ವಿದ್ಯುತ್ ಉತ್ಪಾದನೆಗೆ ಅವಶ್ಯಕವಾಗಿದೆ. ಈ ಹಿನ್ನೆಲೆಯಲ್ಲಿ ಉಪವಿಭಾಗಾಧಿಕಾರಿ, ಪಾಂಡವಪುರ ಉಪವಿಭಾಗ ಅವರ ಅಧ್ಯಕ್ಷತೆಯಲ್ಲಿ ಸಮಿತಿ ರಚನೆ ಮಾಡಲಾಗಿದೆ.
ಈ ಬಗ್ಗೆ ಮಾತನಾಡಿದ ಜಿಲ್ಲಾಧಿಕಾರಿ ಡಾ.ಕುಮಾರ ಅವರು, ಕೆಆರ್‌ಎಸ್ ಅಣೆಕಟ್ಟಿನ ಹಿನ್ನೀರಿನ ಪ್ರದೇಶವನ್ನು ಸಂರಕ್ಷಿಸುವ ಉದ್ದೇಶದಿಂದ ಸಾರ್ವಜನಿಕ ಹಿತಾಸಕ್ತಿಯನ್ನು ಗಮನದಲ್ಲಿಟ್ಟುಕೊಂಡು ಕಾರ್ಯೋನ್ಮುಖರಾಗುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.





