Mysore
31
few clouds

Social Media

ಗುರುವಾರ, 15 ಜನವರಿ 2026
Light
Dark

ಮಂಡ್ಯ: ಕಾಶಿ ಚಂದ್ರಮೌಳೇಶ್ವರ ಗರ್ಭಗುಡಿಯ ಶಿವಲಿಂಗ ಮೇಲೆ ಸೂರ್ಯರಶ್ಮಿ ಸ್ಪರ್ಶ

ಮಂಡ್ಯ: ನಾಡಿನೆಲ್ಲೆಡೆ ವರ್ಷದ ಮೊದಲ ಹಬ್ಬ ಸಂಕ್ರಾಂತಿಯ ಹಬ್ಬದ ಸಡಗರ ಮನೆಮಾಡಿದ್ದು, ಇಂದು ಸೂರ್ಯ ತನ್ನ ಪಥವನ್ನು ಉತ್ತರಾಯಣಕ್ಕೆ ಬದಲಿಸಿದ ಹಿನ್ನೆಲೆಯಲ್ಲಿ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದ ಚಂದ್ರವನ ಆಶ್ರಮದ ಕಾಶಿ ಚಂದ್ರಮೌಳೇಶ್ವರ ಸ್ವಾಮಿಯ ಗರ್ಭ ಗುಡಿಯ ಶಿವಲಿಂಗದ ಮೇಲೆ ಸೂರ್ಯರಶ್ಮಿ ಸ್ಪರ್ಶಿಸಿದೆ.

ಪ್ರತಿ ವರ್ಷ ಸಂಕ್ರಾಂತಿ ದಿನದಂದು ಸೂರ್ಯ ರಶ್ಮಿ ಇಲ್ಲಿನ ಶಿವಲಿಂಗದ ಮೇಲೆ ಬೀಳುವ ಪ್ರತೀತಿ ಇದೆ. ಅದೇ ರೀತಿ ಇಂದು ಬೆಳಿಗ್ಗೆ 7.50ರ ವೇಳೆಯಲ್ಲಿ ಸೂರ್ಯರಶ್ಮಿ ಶಿವಲಿಂಗದ ಮೇಲೆ ಬಿದ್ದಿದೆ.

ಸೂರ್ಯ ರಶ್ಮಿ ಶಿವಲಿಂಗದ ಮೇಲೆ ಬೀಳುತ್ತಿದ್ದಂತೆ ಕಾಶಿ ಚಂದ್ರಮೌಳೇಶ್ವರಸ್ವಾಮಿಗೆ ವಿವಿಧ ಅಭಿಷೇಕ ಮಾಡಿ ವಿಶೇಷ ಪೂಜೆಯನ್ನು ಚಂದ್ರನ ಆಶ್ರಮದ ಪೀಠಾಧ್ಯಕ್ಷ ಮಹಾಂತ ಶಿವಯೋಗಿ ಸ್ವಾಮೀಜಿ ನೆರವೇರಿಸಿದರು. ಈ ವಿಶೇಷ ಕ್ಷಣವನ್ನು ಭಕ್ತರು ಕಣ್ತುಂಬಿಕೊಂಡು ಪುನೀತರಾದರು.

 

Tags:
error: Content is protected !!