ಮಂಡ್ಯ: ಅಪ್ರಾಪ್ತೆಯನ್ನು ಪ್ರೀತಿಸುತ್ತಿದ್ದ ಯುವಕ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಮಂಡ್ಯ ಜಿಲ್ಲೆ ಮಳವಳ್ಳಿ ತಾಲ್ಲೂಕಿನ ರಾಮಂದೂರು ಕೆರೆ ಬಳಿ ನಡೆದಿದೆ.
ರಾಮನಾಥ ಮೋಳೆ ಗ್ರಾಮದ 21 ವರ್ಷದ ಯುವಕ ಮಂಜುನಾಥ್ ಎಂಬಾತನೇ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ದುರ್ದೈವಿಯಾಗಿದ್ದಾನೆ.
ಮಂಜುನಾಥ್ ತಲೆಯ ಭಾಗದಲ್ಲಿ ಕಲ್ಲಿನಿಂದ ಹೊಡೆದಿರುವ ಗುರುತುಗಳು ಆತನ ಸಾವಿನ ಬಗ್ಗೆ ಅನುಮಾನ ಹುಟ್ಟುಹಾಕಿವೆ. ಮಗ ಅಪಘಾತದಲ್ಲಿ ಸಾವನ್ನಪ್ಪಿಲ್ಲ ಎಂದು ಪೋಷಕರು ಗಂಭೀರ ಆರೋಪ ಮಾಡಿದ್ದಾರೆ.
ಮಳವಳ್ಳಿ ತಾಲ್ಲೂಕಿನ ಗ್ರಾಮವೊಂದರ ಅಪ್ರಾಪ್ತೆಯನ್ನು ಪ್ರೀತಿಸುತ್ತಿದ್ದ ಮಂಜುನಾಥ್, ಕಳೆದ ಆರು ತಿಂಗಳ ಹಿಂದೆ ಹೆಣ್ಣು ಕೇಳಲು ಹೋದಾಗ ಯುವತಿಯ ಮನೆಯವರು ನಿರಾಕರಿಸಿದ್ದರು.
ಈ ವೇಳೆ ಪೋಷಕರನ್ನು ಬಿಟ್ಟು ಬಂದ ಅಪ್ರಾಪ್ತೆಯನ್ನು ಮಂಜುನಾಥ್ ತನ್ನ ಅಜ್ಜಿ ಮನೆಯಲ್ಲಿರಿಸಿದ್ದ. ಆಕೆಗೆ 18 ವರ್ಷ ತುಂಬಲು ಇನ್ನು 2 ತಿಂಗಳು ಬಾಕಿಯಿದ್ದ ಹಿನ್ನೆಲೆಯಲ್ಲಿ 18 ವರ್ಷ ತುಂಬಿದ ಬಳಿಕ ಮದುವೆ ಆಗಲು ನಿರ್ಧರಿಸಿದ್ದ ಎನ್ನಲಾಗಿದೆ.
ಆದರೆ ಇದ್ದಕ್ಕಿದ್ದಂತೆ ಮಂಜುನಾಥ್ ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದು, ಸಾವಿನ ಸುತ್ತ ಅನುಮಾನದ ಹುತ್ತ ಬೆಳೆದಿದೆ.
ನಂಜನಗೂಡು: 5 ಸಾವಿರ ರೂ ಸಾಲ ಪಾವತಿಗಾಗಿ ಮಾನಸಿಕವಾಗಿ ಕಿರುಕುಳ ನೀಡಿದ ವ್ಯಕ್ತಿ ಮನೆ ಮುಂದೆ ಸೆಲ್ಫಿ ವಿಡಿಯೋ ಮಾಡಿ…
ಮಂಡ್ಯ: ಡಿವೈಡರ್‌ಗೆ ಡಿಕ್ಕಿ ಹೊಡೆದ ಕಾರು ಪಲ್ಟಿಯಾಗಿ ಬಿದ್ದ ಪರಿಣಾಮ ಸ್ಥಳದಲ್ಲೇ ಮೂವರು ಸಾವನ್ನಪ್ಪಿರುವ ಧಾರುಣ ಘಟನೆ ಮಂಡ್ಯದಲ್ಲಿ ನಡೆದಿದೆ.…
ಬೆಂಗಳೂರು: ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಮುಂದಿನ ಮೂರು ದಿನಗಳ ಕಾಲ ಬೆಳಗಿನ ಜಾವ ದಟ್ಟವಾದ ಮಂಜು ಕವಿದ ವಾತಾವರಣ ಇರಲಿದೆ.…
ಕೊಳ್ಳೇಗಾಲ: ಮೇಯಲು ಬಿಟ್ಟಿದ್ದ ಮೇಕೆಗಳು ಯೂರಿಯಾ ಗೊಬ್ಬರ ತಿಂದು ಸಾವನ್ನಪ್ಪಿರುವ ಘಟನೆ ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲ ತಾಲ್ಲೂಕಿನ ಜಾಗೇರಿ ಹಳೆ…
ಚಾಮರಾಜನಗರ: ಪಾದಾಚಾರಿಗಳ ಮೇಲೆ ಏಕಾಏಕಿ ಹುಚ್ಚುನಾಯಿ ದಾಳಿ ನಡೆಸಿದ ಪರಿಣಾಮ 7 ಮಂದಿ ಗಾಯಗೊಂಡಿರುವ ಘಟನೆ ಯಳಂದೂರು ಪಟ್ಟಣದಲ್ಲಿ ನಡೆದಿದೆ.…
ಮಡಿಕೇರಿ: ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ತಮ್ಮ ವಸ್ತುಗಳು ಏನೇ ಇದ್ದರೂ ಅಫಿಡವಿಟ್‌ನಲ್ಲಿ ತೋರಿಸಿದ್ದರೆ ಯಾವುದೇ ಸಮಸ್ಯೆ ಆಗಲ್ಲ. ಈ ಹಿಂದೆ…