ಮಂಡ್ಯ

ಸ್ಕ್ಯಾನಿಂಗ್ ಸೆಂಟರ್‌ಗೆ ತಹಸಿಲ್ದಾರ್ ಅನಿರೀಕ್ಷಿತ ಭೇಟಿ : ದಾಖಲೆ ಪರಿಶೀಲನೆ

ಮದ್ದೂರು : ಪಟ್ಟಣದಲ್ಲಿನ ಡಿ೨ ಡಯಾಗ್ನೋಸ್ಟಿಕ್ ಸೆಂಟರ್‌ಗೆ ತಹಸಿಲ್ದಾರ್ ಪರಶುರಾಮ ಸತ್ತಿಗೇರಿ ಮತ್ತು ತಾಲ್ಲೂಕು ಆರೋಗ್ಯ ಅಧಿಕಾರಿಗಳು ಅನಿರೀಕ್ಷಿತ ಭೇಟಿನೀಡಿ ಸ್ಕ್ಯಾನಿಂಗ್ ಸೆಂಟರ್‌ನ ದಾಖಲೆಗಳನ್ನು ಪರಿಶೀಲನೆ ನಡೆಸಿದರು.

ಸ್ಕ್ಯಾನಿಂಗ್ ಮಾಡಿಸಿರುವ ಗರ್ಭಿಣಿ ಮಹಿಳೆಯರ ದಾಖಲೆಗಳು ಮತ್ತು ಫಾರಂಗಳನ್ನು ಪರಿಶೀಲನೆ ನಡೆಸಿದರು. ಗರ್ಭಪೂರ್ವ ಮತ್ತು ಪ್ರಸವಪೂರ್ವ ಭ್ರೂಣ ಲಿಂಗ ಪತ್ತೆ ನಿಷೇಧ ಕಾಯ್ದೆ ಸಮರ್ಪಕವಾಗಿ ಜಾರಿ ಮತ್ತು ಅನುಷ್ಠಾನಗೊಳಿಸಬೇಕು, ಗರ್ಭಿಣಿ ಮಹಿಳೆ ಹಾಗೂ ಬರುವ ಪೋಷಕರಿಗೆ ಜಾಗೃತಿ ಮೂಡಿಸಲು ಹಾಗೂ ಎಚ್ಚರಿಕೆ ನೀಡಿಲು ಶಿಕ್ಷೆ, ದಂಡ ಹಾಗು ಹೆಣ್ಣು ಮಕ್ಕಳ ಮಹತ್ವ, ಲಿಂಗಪತ್ತೆ ಕಾನೂನು ಬಾಹಿರ ಎಂದು ಸಾರುವ ಸೂಚನಾ ಫಲಕಗಳನ್ನು ಸ್ಥಳೀಯ ಬಾಷೆಯಲ್ಲಿ ದೊಡ್ಡ ಗಾತ್ರದಲ್ಲಿ ಪ್ರದರ್ಶನ ಮಾಡಲು ಸೂಚಿಸಿದರು.

ದಾಖಲೆಗಳನ್ನು ಕಡ್ಡಾಯವಾಗಿ ಎರಡು ವರ್ಷಗಳವರೆಗೆ ಇಟ್ಟಿರಬೇಕು, ಬಾಲ ಗರ್ಭಿಣಿ ಬಂದಂತಹ ಸಂದರ್ಭದಲ್ಲಿ ತಾಲ್ಲೂಕು ಆಡಳಿತಕ್ಕೆ ಮತ್ತು ತಾಲ್ಲೂಕು ಆರೋಗ್ಯ ಅಧಿಕಾರಿಗಳ ಮುಂದಿನ ಕ್ರಮಕ್ಕಾಗಿ ಕಡ್ಡಾಯವಾಗಿ ತಿಳಿಸುವಂತೆ ಸೂಚಿಸಿದರು. ಪ್ರತಿ ಮೂರು ತಿಂಗಳಿಗೊಮ್ಮೆ ಸ್ಕ್ಯಾನಿಂಗ್ ಸೆಂಟರ್‌ಗಳಿಗೆ ಕಡ್ಡಾಯವಾಗಿ ಭೇಟಿ ನೀಡಿ ದಾಖಲೆಗಳನ್ನು ಪರಿಶೀಲಿಸಲಾಗುವುದು. ಕಾನುನು ಉಲ್ಲಂಘನೆ ಮಾಡಿದರೆ ಸ್ಕ್ಯಾನಿಂಗ್ ಸೆಂಟರ್‌ಗಳ ಮೇಲೆ ಕ್ರಮ ಕೈಗೊಳುತ್ತೇವೆ ಎಂದು ಎಚ್ಚರಿಸಿದರು.

ತಪಾಸಣೆ ವೇಳೆ ತಹಸಿಲ್ದಾರ್ ಪರಶುರಾಮ್ ಸತ್ತಿಗೇರಿ, ಪ್ರಭಾರ ತಾಲ್ಲೂಕು ಆರೋಗ್ಯಾಧಿಕಾರಿ ಡಾ.ರವಿಶಂಕರ್, ಡಿ೨ ಸ್ಕ್ಯಾನಿಂಗ್ ಸೆಂಟರ್ ಮಾಲೀಕರಾದ ಡಾ.ದೀಪಕ್ ಗೌತಮ್ ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

ಆಂದೋಲನ ಡೆಸ್ಕ್

Recent Posts

ಮಹದೇಶ್ವರ ಬೆಟ್ಟದ ರಸ್ತೆಯಲ್ಲಿ ಮತ್ತೆ ಚಿರತೆ ಪ್ರತ್ಯಕ್ಷ: ಭಕ್ತರಲ್ಲಿ ಆತಂಕ ಸೃಷ್ಟಿ

ಚಾಮರಾಜನಗರ: ಜಿಲ್ಲೆಯ ಹನೂರು ತಾಲ್ಲೂಕಿನ ಧಾರ್ಮಿಕ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದ ರಸ್ತೆಯಲ್ಲಿ ಮತ್ತೆ ಚಿರತೆಯೊಂದು ಪ್ರತ್ಯಕ್ಷವಾಗಿದ್ದು, ಸ್ಥಳೀಯರಲ್ಲಿ ಆತಂಕ…

11 mins ago

ಗುಂಡಾಲ್‌ ಜಲಾಶಯದಲ್ಲಿ ಹುಲಿ ಮೃತದೇಹ ಪತ್ತೆ ಪ್ರಕರಣ: ವ್ಯಕ್ತಿಯ ಬಂಧನ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಗುಂಡಾಲ್ ಜಲಾಶಯದಲ್ಲಿ ಹುಲಿ ಮೃತದೇಹ ಪತ್ತೆ…

22 mins ago

ಓದುಗರ ಪತ್ರ: ಕಾಡುವುದು ಅನುಮಾನ!

ಕಾಡುವುದು ಅನುಮಾನ! ಈಗ ಎಲ್ಲೆಲ್ಲೂ ಕೃತಕ ಬುದ್ಧಿಮತ್ತೆಯದೆ ಸುದ್ದಿ! ಕೃತಕ ಬುದ್ಧಿಮತ್ತೆಗೆ ನೈಜ ಬುದ್ಧಿಮತ್ತೆ ಮೂಲವಾದರೂ ಕಾಡುವುದು ಅನುಮಾನ ಕೃತಕ…

3 hours ago

ಓದುಗರ ಪತ್ರ: ಎಐ ಸಾಕ್ಷರತೆ ಕಡ್ಡಾಯವಾಗಲಿ

ಇಂದಿನ ತಾಂತ್ರಿಕ ಯುಗದಲ್ಲಿ ಸರ್ಕಾರಗಳು ಕೇವಲ ನಿಯಂತ್ರಕರಾಗಿ ಉಳಿಯದೆ, ಮಾರ್ಗದರ್ಶಕ ಶಕ್ತಿಯಾಗಿಯೂ ಕಾರ್ಯನಿರ್ವಹಿಸಬೇಕಿದೆ. ಮೊದಲನೆಯದಾಗಿ ಶಿಕ್ಷಣ ವ್ಯವಸ್ಥೆಯಲ್ಲಿ ಮೂಲಭೂತ ಬದಲಾವಣೆ…

3 hours ago

ಓದುಗರ ಪತ್ರ: ಉಚಿತ ಕೊಡುಗೆಗಳ ಬಗ್ಗೆ ಪರಾಮರ್ಶೆ ಅಗತ್ಯ

ಉಚಿತ ಕೊಡುಗೆ ಪ್ರಕಟಿಸುವ ರಾಜಕೀಯ ಪಕ್ಷಗಳ ನಡೆಗೆ ಕಳೆದ ಗುರುವಾರ ಸುಪ್ರೀಂ ಕೋರ್ಟ್ ಅಸಮಾಧಾನ ವ್ಯಕ್ತಪಡಿಸಿರುವುದು ಸ್ವಾಗತಾರ್ಹವಾಗಿದೆ. ಚುನಾವಣೆ ವೇಳೆ…

3 hours ago

ಸಫಾರಿಗೆ ಸ್ಥಳೀಯರ ಸ್ವಾಗತ… ರೈತ ಮುಖಂಡರ ವಿರೋಧ

ಪ್ರಶಾಂತ್ ಎನ್.ಮಲ್ಲಿಕ್ ಇಂದಿನಿಂದ ಬಂಡೀಪುರ-ನಾಗರಹೊಳೆ ರಾಷ್ಟ್ರೀಯ ಉದ್ಯಾನವನಗಳಲ್ಲಿ ವನ್ಯಜೀವಿ ಸಫಾರಿ ಪುನರಾರಂಭ  ಮೈಸೂರು: ಬಂಡೀಪುರ ಹಾಗೂ ನಾಗರಹೊಳೆ ರಾಷ್ಟ್ರೀಯ ಉದ್ಯಾನವನಗಳಲ್ಲಿ…

3 hours ago