ಮಂಡ್ಯ: 2026ರ ಸಾಲಿನ ಮೇಲುಕೋಟೆ ಶ್ರೀ ಚೆಲುವನಾರಾಯಣಸ್ವಾಮಿ ವೈರಮುಡಿ ಬ್ರಹ್ಮೋತ್ಸವವು ಮಾರ್ಚ್ 23ರಿಂದ ಏಪ್ರಿಲ್.4ರವರೆಗೆ ನಡೆಯಲಿದೆ. ಈ ಉತ್ಸವದ ಪ್ರಮುಖ ಆಕರ್ಷಣೆಯಾದ ವೈರಮುಡಿ ಕಿರೀಟ ಧಾರಣೆಯು ಮಾರ್ಚ್.28ರಂದು ಜರುಗಲ್ಲಿದ್ದು ವೈರಮುಡಿ ಉತ್ಸವದಲ್ಲಿ ಭಕ್ತಾದಿಗಳಿಗೆ ಯಾವುದೇ ತೊಂದರೆ ಆಗದಂತೆ ಅಗತ್ಯ ಕ್ರಮವಹಿಸಿ ಎಂದು ಅಧಿಕಾರಿಗಳಿಗೆ ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಸೂಚಿಸಿದರು.
ಮಂಡ್ಯ ಜಿಲ್ಲೆಯ ಮೇಲುಕೋಟೆಯಲ್ಲಿ ನಡೆಯಲಿರುವ ವಿಶ್ವಪ್ರಸಿದ್ಧ ವೈರಮುಡಿ ಬ್ರಹ್ಮೋತ್ಸವದ ಪೂರ್ವ ಸಿದ್ಧತಾ ಸಭೆಯನ್ನು ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ನೇತೃತ್ವದಲ್ಲಿ ನಡೆಸಲಾಯಿತು.
ಉತ್ಸವದಲ್ಲಿ ಯಾವುದೇ ಲೋಪದೋಷಗಳಾಗದಂತೆ, ಭಕ್ತರಿಗೆ ಅಗತ್ಯ ಮೂಲಸೌಕರ್ಯಗಳನ್ನು ಕಲ್ಪಿಸಲು ಮತ್ತು ಬಿಗಿ ಭದ್ರತೆ ಒದಗಿಸಲು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಪೊಲೀಸ್ ಇಲಾಖೆಯವರು ವೈರಮುಡಿ ಬ್ರಹ್ಮೋತ್ಸವದಲ್ಲಿ ಕಿರೀಟಧಾರಣಾ ಮೆರವಣಿಗೆಯ ಸಂದರ್ಭದಲ್ಲಿ ಶಾಂತಿಯುತವಾಗಿ ಹಾಗೂ ಸಮಾಧಾನವಾಗಿ ಜನರು ದೇವರು ನೋಡವಂತೆ ಅಗತ್ಯ ವ್ಯವಸ್ಥೆ ಮಾಡಬೇಕು. ಈ ಸಂಬಂಧ ದೇವಸ್ಥಾನದ ಅರ್ಚಕರೊಂದಿಗೆ ಸಭೆ ನಡೆಸಿ ಶಾಂತಿಯುತವಾಗಿ ನಡೆಯಯಲು ಅಗತ್ಯ ಸಿದ್ಥತೆ ಮಾಡಿಕೊಳ್ಳಿ ಎಂದು ಸಚಿವರು ತಿಳಿಸಿದರು.
ಮೇಲುಕೋಟೆ ಶಾಸಕರಾದ ದರ್ಶನ್ ಪುಟ್ಟಣಯ್ಯ ಮಾತನಾಡಿ, ಕುಡಿಯುವ ನೀರಿನ ಭಕ್ತರಿಗೆ ಕುಡಿಯುವ ನೀರಿನ ಸಮಸ್ಯೆಯಾಗದಂತೆ ನೋಡಿಕೊಳ್ಳಿ. ವೈರಮುಡಿ ಉತ್ಸವದಲ್ಲಿ ಜನಸಂದಣಿಯಾಗದಂತೆ ಬ್ಯಾರಿಕೇಡಿಂಗ್ ಆಗಬೇಕು ಎಂದು ತಿಳಿಸಿದರು.
ಮಂಡ್ಯ ಜಿಲ್ಲಾಧಿಕಾರಿ ಡಾ. ಕುಮಾರ್ ಅವರು ಅಧಿಕಾರಿಗಳೊಂದಿಗೆ ಸಭೆ ನಡೆಸಿ, ಭಕ್ತಾದಿಗಳಿಗೆ ಅಗತ್ಯವಿರುವ ಕುಡಿಯುವ ನೀರು, ಶೌಚಾಲಯ, ಪಾರ್ಕಿಂಗ್ ಮತ್ತು ಸಂಚಾರ ವ್ಯವಸ್ಥೆಯನ್ನು ಅಚ್ಚುಕಟ್ಟಾಗಿ ಮಾಡುವಂತೆ ಸೂಚಿಸಲಾಗಿದೆ ಎಂದು ಅವರು ತಿಳಿಸಿದರು.
ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೆ.ಆರ್.ನಂದಿನಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ ವಿ.ಜೆ. ಶೋಭಾರಾಣಿ, ಅಪರ ಜಿಲ್ಲಾಧಿಕಾರಿ ಬಿ.ಸಿ.ಶಿವಾನಂದಮೂರ್ತಿ, ಪಾಂಡವಪುರ ಉಪವಿಭಾಗಾಕಾರಿ ಶ್ರೀನಿವಾಸ್ ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.
ಬೆಂಗಳೂರು: ರಾಜ್ಯದ ತಾಲೂಕು ಮತ್ತು ಜಿಲ್ಲಾ ಪಂಚಾಯತಿ ಚುನಾವಣೆಗಳಿಗೆ ಸಂಬಂಧಿಸಿದಂತೆ ಕ್ಷೇತ್ರಗಳ ಮೀಸಲಾತಿಯ ಅಂತಿಮ ಅಧಿಸೂಚನೆ ಪ್ರಕಟವಾಗಿದೆ ಎಂದು ಸಚಿವ…
ಕೆ.ಆರ್.ನಗರ : ಚೀರನಹಳ್ಳಿ ಗ್ರಾಮದ ಅಭಿವೃದ್ಧಿಗೆ ಬದಲು ಇಲ್ಲಿನ ಕಾಂಗ್ರೆಸ್ ಮುಖಂಡರ ಮನೆ ಅಭಿವೃದ್ಧಿ ಆಗಿದೆ ಗ್ರಾಮದಲ್ಲಿ ಚರಂಡಿ ಕೂಡ…
ಬೆಂಗಳೂರು: ಕಾಡಿನಂಚಿನ ಗ್ರಾಮಗಳಲ್ಲಿ ಹೆಚ್ಚುತ್ತಿರುವ ಆನೆ–ಮಾನವ ಸಂಘರ್ಷಕ್ಕೆ ಆನೆಧಾಮ ಸ್ಥಾಪನೆಯಿಂದ ಪರಿಹಾರ ಕಂಡುಕೊಳ್ಳಬಹುದು ಎಂದು ಸಚಿವ ಈಶ್ವರ್ ಖಂಡ್ರೆ ಅಭಿಪ್ರಾಯಪಟ್ಟಿದ್ದಾರೆ.…
ಬೆಂಗಳೂರು: ಕೆಆರ್‌ಎಸ್ ಜಲಾಶಯದ ಒಳಹರಿವು ಕ್ಷೀಣಿಸಿರುವ ನಡುವೆಯೇ ಹೊರಹರಿವು ಹೆಚ್ಚಳವಾಗಿದ್ದು, ರೈತರಲ್ಲಿ ಆತಂಕ ಮೂಡಿಸಿದೆ. ತಮಿಳುನಾಡಿಗೆ ನೀರು ಬಿಡುಗಡೆ ಹಿನ್ನೆಲೆಯಲ್ಲಿ…
ಶ್ರೀರಂಗಪಟ್ಟಣ: ನಂಜನಗೂಡಿನ ದೇವಸ್ಥಾನಕ್ಕೆ ಹೊರಟಿದ್ದ ಎರಡು ಕುಟುಂಬಗಳ ಪ್ರಯಾಣ ದುರಂತದಲ್ಲಿ ಅಂತ್ಯಗೊಂಡಿದೆ. ಮೈಸೂರು–ಬೆಂಗಳೂರು ದಶಪಥ ಹೆದ್ದಾರಿಯಲ್ಲಿ ಮುಂದೆ ಸಾಗುತ್ತಿದ್ದ ಸರಕು…
ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ ಪವಿತ್ರಾ ಗೌಡ ಮತ್ತೆ ಜಾಮೀನು ಕೋರಿ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಸುಪ್ರೀಂ ಕೋರ್ಟ್ ಈ…