Ravi Ganiga
ಮಂಡ್ಯ : ಮೈಶುಗರ್ ಸಕ್ಕರೆ ಕಾರ್ಖಾನೆಯಲ್ಲಿ ಈ ಬಾರಿ 4.5 ಲಕ್ಷ ಮೆಟ್ರಿಕ್ ಟನ್ ಕಬ್ಬು ನುರಿಸುವ ಗುರಿ ಹೊಂದಲಾಗಿದೆ ಎಂದು ಶಾಸಕ ಗಣಿಗ ರವಿಕುಮಾರ್ ತಿಳಿಸಿದರು.
ಅವರು ಇಂದು ಮೈಶುಗರ್ ಸಕ್ಕರೆ ಕಾರ್ಖಾನೆಯಲ್ಲಿ ಪೂಜೆ ಸಲ್ಲಿಸಿ ಬಾಯ್ಲರ್‌ಗೆ ಅಗ್ನಿ ಸ್ಪರ್ಶ ಮಾಡಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು.
ಮೈಶುಗರ್ ಸಕ್ಕರೆ ಕಾರ್ಖಾನೆಗೆ ಮೂಲ ಬಂಡವಾಳಕ್ಕೆ 28 ಕೋಟಿ ಬಿಡುಗಡೆ ಮಾಡುವಂತೆ ಸರ್ಕಾರಕ್ಕೆ ಪ್ರಸ್ತಾವನೆಯನ್ನು ಮೈಶುಗರ್ ಸಕ್ಕರೆ ಕಾರ್ಖಾನೆಯ ಅಧ್ಯಕ್ಷರು ಸಲ್ಲಿಸಿದ್ದಾರೆ. ಸರ್ಕಾರ ಸಕಾರತ್ಪಕವಾಗಿ ಸ್ಪಂದಿಸಲಿದೆ ಎಂದರು.
ಮೈಶುಗರ್ ಸಕ್ಕರೆ ಕಾರ್ಖಾನೆ ರೈತರ ಏಳಿಗೆಗಾಗಿ ನಡೆಸುತ್ತಿರುವ ಕಾರ್ಖಾನೆಯಾಗಿದ್ದು, ಕಾರ್ಖಾನೆಯನ್ನು ಲಾಭ-ನಷ್ಠ ಲೆಕ್ಕ ಮಾಡಿಕೊಂಡು ನಡೆಸಲು ಸಾಧ್ಯವಿಲ್ಲ. ನಿಧನಗತಿಯಲ್ಲಿ ಮೈಶುಗರ್ ಸಕ್ಕರೆ ಕಾರ್ಖಾನೆ ಸಹ ಲಾಭ ಗಳಿಸಲಿದೆ. ಸಮಯಾವಕಾಶ ಬೇಕಿದೆ ಎಂದರು.
ಇದೇ ಸಂದರ್ಭದಲ್ಲಿ ಮೈಶುಗರ್ ಸಕ್ಕರೆ ಕಾರ್ಖಾನೆ ಅಧ್ಯಕ್ಷ ಸಿ.ಡಿ.ಗಂಗಾಧರ್, ಜಿಲ್ಲಾಧಿಕಾರಿ ಡಾ: ಕುಮಾರ ಸೇರಿದಂತೆ ಇನ್ನಿತರೆ ಅಧಿಕಾರಿಗಳು ಉಪಸ್ಥಿತರಿದ್ದರು.
ಇದನ್ನು ಓದಿದ್ರಾ..?:- ಅರ್ಜುನ ಆನೆ ಸ್ಮಾರಕ ಉದ್ಘಾಟನೆ ಕಾರ್ಯಕ್ರಮ ದಿಢೀರ್ ಮುಂದೂಡಿಕೆ
ಚಾಮರಾಜನಗರ : ಆರು ತಿಂಗಳ ಹೆಣ್ಣು ಮಗುವನ್ನು ಮಾರಾಟ ಮಾಡಿರುವ ಪ್ರಕರಣ ನಗರದಲ್ಲಿ ನಡೆದಿದ್ದು, ಈ ಸಂಬಂಧ ಪೋಷಕರು ಸೇರಿದಂತೆ…
ಹನೂರು : ಜಮೀನಿನಲ್ಲಿ ಹುರುಳಿ ಫಸಲನ್ನು ಹಸು ಮೇಯ್ದಿದ್ದದನ್ನು ಪ್ರಶ್ನೆಸಿದ್ದಕ್ಕೆ ವೃದ್ಧೆಯನ್ನು ಮರಕ್ಕೆ ಕಟ್ಟಿಹಾಕಿ ಹಲ್ಲೆ ನಡೆಸಿರುವ ಅಮಾನವೀಯ ಘಟನೆ…
ಹಾಸನ : ಮುಂದಿನ ಸ್ಥಳೀಯ ಸಂಸ್ಥೆಗಳ ಚುನಾವಣೆಗಳಿಗೆ ಸಿದ್ಧತೆ ನಡೆಸುವ ಸಂದೇಶವನ್ನು ರಾಜ್ಯದ ಜನರಿಗೆ ತಲುಪಿಸುವ ಗುರಿಯೊಂದಿಗೆ ನಗರದಲ್ಲಿ ಆಯೋಜಿಸಿದ್ದ…
ಮಳವಳ್ಳಿ : ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಹತ್ತುಕ್ಕೂ ಹೆಚ್ಚು ಮಂದಿ ತೀವ್ರವಾಗಿ ಗಾಯಗೊಂಡಿರುವ ಘಟನೆ ಹೊಸಹಳ್ಳಿ…
ನಂಜನಗೂಡು : ಶ್ರೀಕಂಠೇಶ್ವರ ದೇವಾಲಯದ ಆವರಣದಲ್ಲಿನ ಅನಧಿಕೃತ ಅಂಗಡಿಗಳನ್ನು ಇಂದು(ಜ.24) ಮತ್ತೋಮ್ಮೆ ತೆರವು ಗೊಳಿಸಲಾಯಿತು. ದೇವಾಲಯದ ನೂತನ ಕಾರ್ಯನಿರ್ವಾಹಕ ಅಧಿಕಾರ…
ಮುಂಬೈ : ಸೌದಿ ಅರೇಬಿಯಾದಿಂದ ಅಂತರರಾಷ್ಟ್ರೀಯ ಕೊರಿಯರ್ ಟರ್ಮಿನಲ್‌ನಲ್ಲಿ ಸಾಗಿಸುತ್ತಿದ್ದ ಗ್ರೈಂಡರ್‌ನಲ್ಲಿ ಬಚ್ಚಿಟ್ಟಿದ್ದ 2.89 ಕೋಟಿ ರೂ.ಮೌಲ್ಯದ ಚಿನ್ನವನ್ನು ಕಂದಾಯ…