ಮಂಡ್ಯ : ಜಿಲ್ಲೆಯಲ್ಲಿ ಏಕಬಳಕೆ ಪ್ಲಾಸ್ಟಿಕ್ ಬಳಕೆ ನಿಯಂತ್ರಿಸಲು ನಗರ ಸ್ಥಳೀಯ ಸಂಸ್ಥೆಗಳ ಮುಖ್ಯಸ್ಥರು ಹಾಗೂ ಸಂಬಂಧಪಟ್ಟ ಇಲಾಖೆ ಸಿಬ್ಬಂದಿಗಳನ್ನೊಳಗೊಂಡ ಕಾರ್ಯಪಡೆ ರಚಿಸುವಂತೆ ಜಿಲ್ಲಾಧಿಕಾರಿ ಡಾ.ಎಚ್.ಎನ್ ಗೋಪಾಲ ಕೃಷ್ಣ ಅವರು ತಿಳಿಸಿದರು.
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ನಗರ ಸ್ಥಳೀಯ ಸಂಸ್ಥೆಗಳ ವಿವಿಧ ಯೋಜನೆಗಳು ಹಾಗೂ ಘನ ತ್ಯಾಜ್ಯ ವಸ್ತು ನಿರ್ವಹಣೆಯ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಏಕ ಬಳಕೆ ಪ್ಲಾಸ್ಟಿಕ್ ಪರಿಸರಕ್ಕೆ ಹಾನಿಕರಕವಾಗಿದ್ದು, ಅವುಗಳ ಬಳಕೆಯನ್ನು ಸಂಪೂರ್ಣವಾಗಿ ನಿಷೇಧಿಸಬೇಕು.ಕಾರ್ಯಪಡೆ ನಿಗಧಿತವಾಗಿ ದಾಳಿ ನಡೆಸಿ ಏಕಬಳಕೆ ಪ್ಲಾಸ್ಟಿಕ್ ಮಾರಾಟ ಹಾಗೂ ಬಳಕೆಯನ್ನು ನಿಯಂತ್ರಿಸಬೇಕು. ನಗರ ಸ್ಥಳೀಯ ಸಂಸ್ಥೆಗಳು 14 ನೇ ಹಾಗೂ 15 ನೇ ಹಣಕಾಸು ಯೋಜನೆಯಡಿ ಕೈಗೊಂಡಿರುವ ಕಾಮಗಾರಿಗಳಿಗೆ ಟೆಂಡರ್ ಆಹ್ವಾನದ ಹಂತಲ್ಲಿದ್ದಾರೆ ಟೆಂಡರ್ ಆಹ್ವಾನ ಮಾಡಬೇಕು ಹಾಗೂ ಕಾಮಗಾರಿ ಪ್ರಾರಂಭ ಮಾಡಿರುವ ಕೆಲಸಗಳನ್ನು ಪೂರ್ಣಗೊಳಿಸಬೇಕು ಎಂದರು.
ಎಸ್.ಸಿ.ಪಿ ಹಾಗೂ ಟಿ.ಎಸ್.ಪಿ ಯೋಜನೆಯಡಿ ಕೈಗೊಂಡಿರುವ ಹಿಂದಿನ ಸಾಲಿನ ಕಾಮಗಾರಿಗಳನ್ನು ಶೇ 100 ರಷ್ಟು ಹಾಗೂ ಪ್ರಸಕ್ತ ಸಾಲಿನ ಕಾಮಗಾರಿಗಳನ್ನು ಶೇ 50 ರಷ್ಟು ಈ ಮಾಹೆಯ ಅಂತ್ಯದೊಳಗೆ ಪ್ರಗತಿ ಸಾಧಿಸಿ ಮುಂದಿನ ಸಭೆಗೆ ವರದಿ ಸಲ್ಲಿಸಬೇಕು ಎಂದು ಎಲ್ಲಾ ನಗರ ಸ್ಥಳೀಯ ಸಂಸ್ಥೆಗಳ ಮುಖ್ಯಸ್ಥರಿಗೆ ತಿಳಿಸಿದರು.
ಘನ ತ್ಯಾಜ್ಯ ವಸ್ತುಗಳ ನಿರ್ವಹಣೆ ಕುರಿತಂತೆ ಮನೆಗಳಿಂದ ಕಸ ಸಂಗ್ರಹಿಸುವ ಸಂದರ್ಭದಲ್ಲೇ ಹಸಿ ಹಾಗೂ ಒಣ ತ್ಯಾಜ್ಯವನ್ನು ಬೇರ್ಪಡಿಸಿ ಸಂಗ್ರಹಿಸಲು ಯೋಜನೆ ರೂಪಿಸಿಕೊಳ್ಳಬೇಕು. ಸಾರ್ವಜನಿಕರಲ್ಲಿ ತ್ಯಾಜ್ಯ ಪ್ರತ್ಯೇಕ ಸಂಗ್ರಹಣೆಯ ಬಗ್ಗೆ ಅರಿವು ಮೂಡಿಸಬೇಕು. ಡಿಸೆಂಬರ್ 15 ರೊಳಗಾಗಿ ಯೋಜನೆ ಅನುಷ್ಠಾನವಾಗಿ ಹಸಿ ಮತ್ತು ಒಣ ಕಸವನ್ನು ಬೇರೆ ಬೇರೆ ಸಂಗ್ರಹಿಸುವ ಕೆಲಸವಾಗಬೇಕು ಎಂದರು.
ಸಭೆಯಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನಳಿನ ಕುಮಾರಿ, ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕಿ ತುಷರಾ ಮಣಿ, ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ಸರಸ್ವತಿ, ನಗರಾಭಿವೃದ್ಧಿ ಕೋಶದ ಕಾರ್ಯಪಾಲಕ ಅಭಿಯಂತರ ನಾಗರಾಜು, ಸಹಾಯಕ ಕಾರ್ಯಪಾಲಕ ಅಭಿಯಂತರರಾದ ಪಾರ್ವತಿ ದೇವಿ, ನಗರಸಭೆ ಆಯುಕ್ತ ಮಂಜುನಾಥ ಸೇರಿದಂತೆ ಇನ್ನಿತರು ಇದ್ದರು.
ಬೆಂಗಳೂರು: ರಾಜ್ಯದಲ್ಲಿ ದ್ವೇಷ ಭಾಷಣ ಮಾಡಿದರೆ 3 ವರ್ಷ ಜೈಲು ಶಿಕ್ಷೆ ಫಿಕ್ಸ್ ಆಗಿದೆ. ವಿಧಾನಸಭೆಯಲ್ಲಿ ಇಂದು ಮಸೂದೆ ಮಂಡನೆ…
ಮಂಗಳೂರು: ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂತಿರುವುದಾಗಿ ಚಿನ್ನಯ್ಯ ಆರೋಪಿಸಿದ್ದ ಹಿನ್ನೆಲೆಯಲ್ಲಿ ಎಸ್‌ಐಟಿ ತನಿಖೆ ವೇಳೆ ಸ್ಪೋಟಕ ಮಾಹಿತಿ ಬಯಲಾಗಿದೆ. ಹಣದ…
ಬೆಳಗಾವಿ: ಗ್ಯಾರಂಟಿಗಳ ಬಗ್ಗೆ ಸಿಎಲ್‌ಪಿಯಲ್ಲಿ ಚರ್ಚೆಯೇ ಆಗಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದರು. ಗ್ಯಾರಂಟಿ ಯೋಜನೆಗಳ ಪರಿಷ್ಕರಣೆಗೆ ಶಾಸಕರು…
ಬೆಳಗಾವಿ: ನಿಜಲಿಂಗಪ್ಪನವರು ಒಬ್ಬ ದಕ್ಷ, ಪ್ರಾಮಾಣಿಕ ವ್ಯಕ್ತಿ. ಕರ್ನಾಟಕ ಕಂಡ ಅಪರೂಪದ ರಾಜಕಾರಣಿಯಾಗಿದ್ದು ಕೊನೆಯವರೆಗೂ ಪ್ರಾಮಾಣಿಕವಾಗಿ ಇದ್ದವರು ಎಂದು ಮುಖ್ಯಮಂತ್ರಿ…
ಬೆಳಗಾವಿ: ಶಾಸಕಾಂಗ ಪಕ್ಷದ ಸಭೆಯಲ್ಲಿ ಯಾರೂ ಕೂಡ ಗ್ಯಾರಂಟಿ ಯೋಜನೆಗಳನ್ನು ವಿರೋಧ ಮಾಡಿಲ್ಲ ಎಂದು ಕೃಷಿ ಸಚಿವ ಚಲುವರಾಯಸ್ವಾಮಿ ತಿಳಿಸಿದ್ದಾರೆ.…
ಕೊಡಗು: ಆಸ್ತಿ ವಿಚಾರಕ್ಕೆ ಅಣ್ಣನ ಮಗನ ಮೇಲೆ ಗುಂಡಿನ ದಾಳಿ ನಡೆಸಿರುವ ಘಟನೆ ಜಿಲ್ಲೆಯ ವಿರಾಜಪೇಟೆ ತಾಲ್ಲೂಕಿನ ಕಾವಾಡಿಯಲ್ಲಿ ನಡೆದಿದೆ.…