fertilize black market
ಮದ್ದೂರು : ರಸಗೊಬ್ಬರ ದಾಸ್ತಾನು ಮಾಡಿರುವ ತಾಲ್ಲೂಕಿನ ವಿವಿಧ ಅಂಗಡಿ ಮಳಿಗೆಗಳಿಗೆ ತಹಸಿಲ್ದಾರ್ ದಿಢೀರ್ ಭೇಟಿ ನೀಡಿ ದರಪಟ್ಟಿ ಹಾಗೂ ರಸೀದಿ ಮತ್ತು ಇರುವ ಗೊಬ್ಬರಗಳನ್ನು ನೇರವಾಗಿ ರೈತರಿಗೆ ಮಾರಾಟ ಮಾಡಬೇಕು. ತಪ್ಪಿದಲ್ಲಿ ಪರವಾನಗಿ ರದ್ದು ಮಾಡಲಾಗುತ್ತದೆ ಎಂದು ಟ್ರೇಡರ್ಸ್ ಮಾಲೀಕರಿಗೆ ತಹಸಿಲ್ದಾರ್ ಪರಶುರಾಮ್ ಸತ್ತಿಗೇರಿ ಎಚ್ಚರಿಕೆ ನೀಡಿದರು.
ಪಟ್ಟಣದ ಟಿಎಪಿಸಿಎಂಎಸ್ ದಾಸ್ತಾನು ಗೋಡೌನ್‌ಗೆ ಭೇಟಿ ನೀಡಿ ರಸಗೊಬ್ಬರಗಳ ಮಾಹಿತಿ ಪಡೆದು, ಸರಿಯಾದ ಚಿಲ್ಲರೆ ಹಾಗೂ ಸಗಟು ಮಾರಾಟದ ಮಾಹಿತಿ ಫಲಕವನ್ನು ಹಾಕದೇ ಇರುವುದಕ್ಕೆ ಕಾರ್ಯ ನಿರ್ವಹಣಾಧಿಕಾರಿಗೆ ನೋಟಿಸ್ ನೀಡುವಂತೆ ಆದೇಶಿಸಿದರು.
ನೇರವಾಗಿ ಟ್ರೇಡರ್ಸ್ ಹಾಗೂ ಸೊಸೈಟಿ ಮೂಲಕ ರೈತರಿಗೆ ತಲುಪಿಸುವ ವ್ಯವಸ್ಥೆ ಮಾಡಬೇಕು, ಕಾಳ ಸಂತೆಯಲ್ಲಿ ಮಾರಾಟ ಆಗದ ಹಾಗೆ ಎಚ್ಚರವಹಿಸಬೇಕು, ರೈತರಿಗೆ ಯೂರಿಯ ಸಮಸ್ಯೆ ಎದುರಾಗಬಾರದು ಎಂದರು.ಪಟ್ಟಣದ ಕೋಡಿಲಿಂಗೇಶ್ವರ ಟ್ರೇಡರ್ಸ್ ಮಾರಾಟ ಮಳಿಗೆಗೆ ಭೇಟಿ ನೀಡಿ ಅಳತೆ ಸರಿ ಇಲ್ಲವೆಂಬುದನ್ನು ಪರಿಶೀಲಿಸಿದ ತಹಸಿಲ್ದಾರ್ ಅವರು, ಅಲ್ಲೇ ಇದ್ದಂತಹ ಸಹಾಯಕ ಕೃಷಿ ನಿರ್ದೇಶಕಿ ಪ್ರತಿಭಾ ಅವರಿಗೆ ಇವರ ಪರವಾನಗಿಯನ್ನು ರದ್ದು ಮಾಡಬೇಕು ಎಂದು ಸೂಚಿಸಿದರು.
ಸಹಾಯಕ ಕೃಷಿ ನಿರ್ದೇಶಕಿ ಎಚ್.ಬಿ.ಪ್ರತಿಭಾ, ರಾಜಸ್ವ ನಿರೀಕ್ಷಕ ಮೋಹನ್, ಗ್ರಾಮಾಡಳಿತಾಧಿಕಾರಿ ಹರೀಶ್, ಷಣ್ಮುಖ ಉಪಸ್ಥಿತರಿದ್ದರು.
ಬೆಂಗಳೂರು : ಬೆಂಗಳೂರಿನಲ್ಲಿ ಕನಿಷ್ಠ 15 ಡಿಗ್ರಿ ಸೆಲ್ಸಿಯಸ್ ಮತ್ತು ಗರಿಷ್ಟ ತಾಪಮಾನ 26 ಡಿಗ್ರಿ ಸೆಲ್ಸಿಯಸ್ ವರೆಗೆ ಇರುತ್ತದೆ…
ಬೆಳಗಾವಿ : ಸರ್ಕಾರದಿಂದ ಪಡೆದ ಸಿಎ ನಿವೇಶನಗಳಲ್ಲಿ ಕಟ್ಟಡ ನಿರ್ಮಾಣ ಮಾಡಲು ಈಗಿರುವ ಮೂರು ವರ್ಷಗಳ ಮಿತಿಯನ್ನು ಐದು ವರ್ಷಗಳಿಗೆ…
ಮೈಸೂರು : ಭಾರತೀಯ ದೂರ ಸಂಪರ್ಕ ನಿಯಂತ್ರಣ ಪ್ರಾಧಿಕಾರ(ಟ್ರಾಯ್) ಹಾಗೂ ಮುಂಬೈನ ಬಾಂಧ್ರಾ ಪೊಲೀಸ್ ಅಧಿಕಾರಿ ಸೋಗಿನಲ್ಲಿ ನಗರದ ವೈದ್ಯರೊಬ್ಬರಿಗೆ…
ಮೈಸೂರು : ಜಾತಿ ನಿಂದನೆ, ಅಸ್ಪೃಶ್ಯತೆ ಆಚರಣೆ ಪ್ರಕರಣಗಳಿಗೆ ಸಂಬಂಧಿಸಿದಂತೆ ದೂರು ದಾಖಲು ಹಾಗೂ ತನಿಖೆ ನಡೆಸುವ ಉದ್ದೇಶದಿಂದ ಆರಂಭಗೊಂಡಿರುವ…
ಮೈಸೂರು : ಕರ್ನಾಟಕ ಪೊಲೀಸ್ ಅಕಾಡೆಮಿ ಮತ್ತು ಸಾವಿತ್ರಿಬಾಯಿ ಫುಲೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಂಸ್ಥೆಯ ನಡುವೆ ಒಡಂಬಡಿಕೆಗೆ…
ಬೆಳಗಾವಿ (ಸುವರ್ಣಸೌಧ) : ಇತ್ತೀಚೆಗೆ ನಿಧನರಾದ ಸಾಹಿತಿ ಎಸ್.ಎಲ್.ಭೈರಪ್ಪ ಅವರ ಸ್ಮಾರಕವನ್ನು ಮೈಸೂರಿನಲ್ಲಿ ನಿರ್ಮಿಸಲು ತೀರ್ಮಾನಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ…