ಮಂಡ್ಯ

ದೇವಾಲಯ ವಾಸ್ತುಶಿಲ್ಪ ಪದವಿ ಕಾಲೇಜು ಅಗತ್ಯ: ಶಿಲ್ಪಿ ಅರುಣ್‌ ಯೋಗಿರಾಜ್‌

ಮಂಡ್ಯ: ರಾಜ್ಯದಲ್ಲಿ ದೇವಾಲಯ ಶಿಲ್ಪಕಲೆ ಪದವಿ ಕಾಲೇಜಿನ ಅಗತ್ಯವಿದೆ ಎಂದು ಶಿಲ್ಪಿ ಅರುಣ್‌  ಯೋಗಿರಾಜ್‌ ಹೇಳಿದರು.

ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ನಗರಸಭೆಗೆ ಹಾಗೂ ವಿಶ್ವಕರ್ಮ ಸಮಾಜದ ಸಹಯೋಗದೊಂದಿಗೆ ಆಯೋಜಿಸಲಾಗಿದ್ದ ವಿಶ್ವಕರ್ಮ ಅಮರಶಿಲ್ಪಿ ಜಕಣಾಚಾರಿ ಸಂಸ್ಮರಣಾ ದಿನಾಚರಣೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಸರ್ಕಾರದ ವತಿಯಿಂದ ನಿರ್ಮಾಣವಾಗುವ ದೇವಸ್ಥಾನ  ಅಥವಾ ಪುನರ್ ಸ್ಥಾಪನೆ ಕೆಲಸ ಮಾಡಬೇಕೆಂದರೆ ದೇವಾಲಯ ವಾಸ್ತು ಶಿಲ್ಪ ಕಲೆಯ ಪದವಿ ಪ್ರಮಾಣ ಪತ್ರವನ್ನು ನೀಡಬೇಕು ಎಂಬ ನಿಯಮವಿದೆ.  ಈ ನಿಟ್ಟಿನಲ್ಲಿ  ರಾಜ್ಯದಲ್ಲಿ  ದೇವಾಲಯ ಶಿಲ್ಪಕಲೆ ಪದವಿ ಕಾಲೇಜಿನ ಅಗತ್ಯವಿದೆ. ಕೆಲಸದಲ್ಲಿ ಏಷ್ಟೇ ಪರಿಣಿತರಾದರು ಪದವಿ ಪ್ರಮಾಣ ಪತ್ರವಿಲ್ಲದಿದ್ದರೆ ಕೆಲಸ ಮಾಡಲು ಅರ್ಹತೆ ಇರುವುದಿಲ್ಲ ಎಂದರು.

ಶಿಲ್ಪಕಲೆಯ ನಾಡಾದ  ನಮ್ಮ ರಾಜ್ಯದಲ್ಲಿ ದೇವಾಲಯ ವಾಸ್ತುಶಿಲ್ಪಕಲೆ ಕಾಲೇಜು ತೆರೆದು ಪದವಿ ನೀಡಿದರೆ ಅನೇಕ ಕೆಲಸಗಳು ನಮ್ಮ ಕರ್ನಾಟಕ ಜನಕ್ಕೆ ದೊರೆಯುತ್ತದೆ ಎಂದರು.

ಶಿಲ್ಪಿಗಳು ಶತಮಾನಗಳಿಂದ ದೇಶಕ್ಕೆ ಸಮಾಜಕ್ಕೆ ಕೊಡುಗೆ ನೀಡುತ್ತಾ ಬಂದಿದ್ದೇವೆ. ಅದರಲ್ಲಿ ಅಗ್ರಗಣ್ಯರು ಅಮರಶಿಲ್ಪಿ ಜಕಣಾಚಾರ್ಯರು. ಅವರು ನಿರ್ಮಿಸಿರುವ ದೇವಾಲಯಗಳು ಇವತ್ತಿಗೂ ತನ್ನ ಕಲೆ ಮಾಸಿ ಹೋಗದಂತೆ ತನ್ನ ಅಸ್ತಿತ್ವ ಕಾಪಾಡಿಕೊಂಡಿವೆ. ಶಿಲ್ಪಿಗಳು ನಿರ್ಮಿಸುವ ವಿಗ್ರಹ ಅವರು ಸತ್ತ ನಂತರವೂ ಪೂಜೆಗೊಳಪಡುತ್ತದೆ, ನನಗೆ ಬೆಲೆ ಕೊಡುತ್ತಿರುವುದು ನಾನೊಬ್ಬ ಶಿಲ್ಪಿ ಎಂದೆಲ್ಲಾ ನಾನು ಮಾಡಿದ ಕೆಲಸಕ್ಕೆ ಅದರ ಹಿಂದೆ ಇರುವ ಕಲೆ ಶ್ರಮಕ್ಕೆ ಮತ್ತು ಅದರ ಇತಿಹಾಸಕ್ಕೆ ಎಂದರು.

ಅಪರ ಜಿಲ್ಲಾಧಿಕಾರಿ ಬಿ.ಸಿ ಶಿವಾನಂದಮೂರ್ತಿ ಮಾತನಾಡಿ, ಅರುಣ್ ಯೋಗಿರಾಜ ತುಂಬಾ ಪರಿಶ್ರಮ ಪಟ್ಟು ಅಯೋಧ್ಯೆಯಲ್ಲಿ ಸುಂದರವಾದ ರಾಮ ಮೂರ್ತಿಯನ್ನು ಕೆತ್ತಿ ಇಡೀ ವಿಶ್ವದಲ್ಲೇ ಹೆಸರು ಮಾಡಿದ್ದಾರೆ ಎಂದು ಸಂತೋಷ ವ್ಯಕ್ತಪಡಿಸಿದರು.

ರೈತರ ಕುಡುಗೋಲು ತಟ್ಟಿಸುವುದರಿಂದ ಹಿಡಿದು ಸಾಮಾನ್ಯ ವ್ಯಕ್ತಿಗಳು ಮನೆ ನಿರ್ಮಾಣ ಮಾಡುವುದಕ್ಕೂ ನಿಮ್ಮ ಕಸುಬುಗಳ ಅಗತ್ಯವಿದೆ ಇಂತಹ ಉತ್ತಮ ಸೇವೆಯನ್ನು ಸಾಮಾಜಕ್ಕೆ ಸಲ್ಲಿಸುತ್ತಿರುವ ವಿಶ್ವಕರ್ಮ ಜನಾಂಗದ ಬಗ್ಗೆ ಗೌರವ ಇದೆ ಎಂದರು.

ಕಾರ್ಯಕ್ರಮದಲ್ಲಿ ನಗರರಸಭೆ ಅಧ್ಯಕ್ಷ ಎಂ ಪಿ ಪ್ರಕಾಶ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಡಾ. ಬಿ ವಿ ನಂದೀಶ್, ಸಾಹಿತಿ ಕೆ.ಪಿ ಸ್ವಾಮಿ ಮತ್ತು ಇನ್ನಿತರ ಗಣ್ಯರು ಉಪಸ್ಥಿತರಿದ್ದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಓದುಗರ ಪತ್ರ: ಜನರ ಹಿತ ಕಾಯಲಿ!

ಜನರ ಹಿತ ಕಾಯಲಿ! ನಕಲಿ ವೈದ್ಯರು, ಕಲಬೆರಿಕೆ ಔಷಧದ ಹಾವಳಿಯಿಂದ ಜನ ಬೇಸ್ತುಬಿದ್ದಿರುವಾಗ ನೈಜ ದರಕ್ಕಿಂತ ಅತ್ಯಧಿಕ ದರಕ್ಕೆ ಔಷಧಿ ಮಾರಾಟ…

35 mins ago

ಓದುಗರ ಪತ್ರ: ಜಾಗೃತಿ, ನಿಯಂತ್ರಣ ಇರಬೇಕು

ಆಹಾರದಲ್ಲಿ ಬಳಸುವ ಉಪ್ಪು, ಸಕ್ಕರೆ ಬಳಕೆ ಪ್ರಮಾಣಕ್ಕೆ ಕಡಿವಾಣ ಹಾಕಲು ಅರೋಗ್ಯ ಇಲಾಖೆ ಚಿಂತನೆ ನಡೆಸಿದೆ ಎಂದು ವರದಿಯಾಗಿದೆ. ಹಾಗೆಯೇ…

38 mins ago

ಓದುಗರ ಪತ್ರ: ಚಾ.ನಗರ ಜಿಲ್ಲೆಗೆ ವಿಶೇಷ ಅನುದಾನ ನೀಡಲು ಮುಖ್ಯಮಂತ್ರಿಗಳು ಕ್ರಮ ಕೈಗೊಳ್ಳಲಿ

ಚಾಮರಾಜನಗರ ಜಿಯ ಕೊಳ್ಳೇಗಾಲ ಮತ್ತು ಹನೂರು ವಿಧಾನಸಭಾ ಕ್ಷೇತ್ರಗಳಲ್ಲಿ ಸುಮಾರು ರೂ.೫೦೦ ಕೋಟಿಗೂ ಅಧಿಕ ಮೊತ್ತದ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ…

40 mins ago

ಆಯಾ ಕೆಲಸ ಮಾಡಿ ಮಕ್ಕಳನ್ನು ಮಾಸ್ಟರ್ಸ್‌ ಮಾಡಿದ ಸತ್ಯಮ್ಮ

ಪಂಜುಗಂಗೊಳ್ಳಿ ಅವರ ವಾರದ ಅಂಕಣ  ಮಕ್ಕಳು ದೊಡ್ಡ ಹುದ್ದೆಗಳಿಗೆ ಹೋದರೂ ತನ್ನ ಕಾಯಕ ಮುಂದುವರಿಸಿರುವ ‘ಮಹಾತಾಯಿ’ ತೆಲಂಗಾಣದ ಸಂಗಾರೆಡ್ಡಿಯ ರಾಕೇಶ್…

44 mins ago

ಮಂಜಿನ ನಗರಿಯಲ್ಲಿ ರಸ್ತೆಗಳ ದುಸ್ಥಿತಿ

ಪುನೀತ್ ಮಡಿಕೇರಿ ಮಡಿಕೇರಿ ದಸರಾ ಸಮೀಪಿಸುತ್ತಿದ್ದರೂ ಗುಂಡಿಗಳಿಗೆ ಸಿಗದ ಮುಕ್ತಿ ಮಡಿಕೇರಿ ದಸರಾ ಜನೋತ್ಸವಕ್ಕೆ ದಿನಗಣನೆ ಆರಂಭವಾಗಿದೆ. ಆದರೆ, ದಸರಾ…

52 mins ago

ಅ.೧, ೨ರಂದು ಶ್ರೀ ಗುರುಮಲ್ಲೇಶ್ವರ ದಾಸೋಹ ಭವನ ಉದ್ಘಾಟನೆ

ಮಹೇಂದ್ರ ಹಸಗೂಲಿ ದೇಪಾಪುರದಲ್ಲಿ ಗುಡಿಸಲಿನಲ್ಲಿ ಆರಂಭವಾದ ಅನ್ನ ದಾಸೋಹಕ್ಕೆ ಈಗ ದಾಸೋಹ ಭವನದ ರೂಪ ಗುಂಡ್ಲುಪೇಟೆ: ಸಣ್ಣ ಗುಡಿಸಲಿನಲ್ಲಿ ಆರಂಭಗೊಂಡ…

57 mins ago