ಮಂಡ್ಯ

ನಿಂತಿದ್ದ ಲಾರಿಗೆ ಟೆಂಪೋ ಡಿಕ್ಕಿ: ಮೂವರ ಸಾವು

 ತಿರುಪತಿಯಿಂದ ವಾಪಸ್ಸಾಗುತ್ತಿದ್ದ ಚಿಕ್ಕಾಡೆಯ ನತದೃಷ್ಟರು

ಪಾಂಡವಪುರ: ತಿರುಪತಿಗೆ ಹೋಗಿ ವಾಪಸ್ ಬರುವಾಗ ಚನ್ನಪಟ್ಟಣದ ಬಳಿ ರಸ್ತೆಬದಿಯಲ್ಲಿ ನಿಲ್ಲಿಸಿದ್ದ ಲಾರಿಗೆ ಟೆಂಪೋ ಡಿಕ್ಕಿ ಹೊಡೆದ ಪರಿಣಾಮ ಪಾಂಡವಪುರ ತಾಲ್ಲೂಕಿನ ಚಿಕ್ಕಾಡೆ ಗ್ರಾಮದ ಮೂವರು ಸ್ಥಳದಲ್ಲಿಯೇ ಮೃತಪಟ್ಟಿದ್ದು, ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಚಿಕ್ಕಾಡೆ ಗ್ರಾಮದ ಕೃಷ್ಣೇಗೌಡ (48), ಪುತ್ರ ಶ್ರೀನಿವಾಸ್(14), ಮಹೇಶ್(48) ಎಂಬುವರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಕೃಷ್ಣೇಗೌಡರ ಎರಡನೇ ಪುತ್ರ ಪುರುಷೋತ್ತಮ್ ಗಂಭೀರವಾಗಿ ಗಾಯಗೊಂಡಿದ್ದು, ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಪಡೆಯುತ್ತಿದ್ದಾರೆ. ಶಕುಂತಲ, ಕೃಷ್ಣೇಗೌಡರ ಪತ್ನಿ ಶೈಲಜಾ ಅವರು ಗಾಯಗೊಂಡಿದ್ದಾರೆ.

ಚಿಕ್ಕಾಡೆ ಗ್ರಾಮದಿಂದ ತಿರುಪತಿ ದೇವಸ್ಥಾನಕ್ಕೆ ಹೋಗಿ ದರ್ಶನ ಪಡೆದು ವಾಪಸ್ಸಾಗುವ ಸಂದರ್ಭದಲ್ಲಿ ರಾಮನಗರ ಜಿಲ್ಲೆಯ ಚನ್ನಪಟ್ಟಣದ ಬಳಿಯ ಮುದುಗೆರೆ ಗೇಟ್ ಬಳಿ ಶನಿವಾರ ಮುಂಜಾನೆ 5 ಗಂಟೆಯ ಸುಮಾರಿನಲ್ಲಿ ರಸ್ತೆ ಬದಿ ನಿಲ್ಲಿಸಿದ್ದ ಲಾರಿಗೆ ಟೆಂಪೋ ಡಿಕ್ಕಿ ಹೊಡೆದಿದೆ. ಡಿಕ್ಕಿ ಹೊಡೆದ ರಭಸಕ್ಕೆ ಕೃಷ್ಣೇಗೌಡ, ಅವರ ಪುತ್ರ ಶ್ರೀನಿವಾಸ್ ಹಾಗೂ ಮಹೇಶ್ ಅವರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.

       ಕೃಷ್ಣೇಗೌಡರ ಎರಡನೇ ಪುತ್ರ ಪುರುಷೋತ್ತಮ್ ಗಂಭೀರವಾಗಿ ಗಾಯಗೊಂಡಿದ್ದು, ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಶಕುಂತಲ, ಮೃತ ಕೃಷ್ಣೇಗೌಡ ಪತ್ನಿ ಶೈಲಜಾ ಅವರಿಗೆ ಗಾಯವಾಗಿದೆ.
ವಿಷಯ ತಿಳಿದ ಶಾಸಕ ಸಿ.ಎಸ್.ಪುಟ್ಟರಾಜು ಅವರು ಶನಿವಾರ ಬೆಳಿಗ್ಗೆ ಚಿಕ್ಕಾಡೆ ಗ್ರಾಮಕ್ಕೆ ತೆರಳಿ ಮೃತರ ಕುಟುಂಬಕ್ಕೆ ಸಾಂತ್ವಾನ ಹೇಳಿದರು.

   ಬಳಿಕ ಪಂಚರತ್ನ ರಥಯಾತ್ರೆ ಕಾರ್ಯಕ್ರಮಕ್ಕೆ ಆಗಮಿಸಿದ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ, ಪುತ್ರ ನಿಖಿಲ್‌ಕುಮಾರ್‌ಸ್ವಾಮಿ ಅವರನ್ನು ಶಾಸಕ ಸಿ.ಎಸ್.ಪುಟ್ಟರಾಜು ಅವರು ಮೃತರ ಮನೆಗೆ ಕರೆದುಕೊಂಡು ಹೋಗಿ ಸಾಂತ್ವಾನ ಹೇಳಿ ಧೈರ್ಯತುಂಬಿದರು. ಮಾಜಿ ಸಿಎಂ ಎಚ್‌ಡಿಕೆ ಆಗಮಿಸುತ್ತಿದ್ದಂತೆಯೇ ಮೃತರ ಕುಟುಂಬಸ್ಥರು ಎಚ್‌ಡಿಕೆ ಮುಂದೆ ಅಳಲು ತೋಡಿಕೊಂಡರು.

ಮೃತರ ಕುಟುಂಬಸ್ಥರನ್ನು ಕಂಡು ಮಾಜಿ ಸಿಎಂ ಎಚ್‌ಡಿಕೆ ಸಂತೈಸಿದರು. ಶಾಸಕ ಸಿ.ಎಸ್.ಪುಟ್ಟರಾಜು ಪಂಚರತ್ನ ಯಾತ್ರೆ ಮುಗಿದ ಬಳಿಕ ಕುಟುಂಬಕ್ಕೆ ನೆರವು ನೀಡಲಾಗುವುದು ಎಂದು ಭರವಸೆ ನೀಡಿದರು. ಶಾಸಕ ಸಿ.ಎಸ್.ಪುಟ್ಟರಾಜು ಅವರ ಪುತ್ರ ಸಿ.ಪಿ.ಶಿವರಾಜು ಅವರು ಅಪಘಾತದಲ್ಲಿ ಗಾಯಗೊಂಡ ಮೃತ ಕೃಷ್ಣೇಗೌಡರ ಪುತ್ರ ಪುರುಷೋತ್ತಮ್ ಚಿಕಿತ್ಸೆಗೆ ನೆರವು ನೀಡಲಾಗುವುದು ಎಂದು ಭರವಸೆ ನೀಡಿದರು. ಆ ಬಳಿಕ ಅನಾರೋಗ್ಯದಿಂದ ಮೃತಪಟ್ಟ ಲೀಲಾವತಿ ಅವರ ಮನೆಗೂ ಭೇಟಿ ನೀಡಿದ ಎಚ್‌ಡಿಕೆ, ನಿಖಿಲ್, ಸಿ.ಎಸ್.ಪುಟ್ಟರಾಜು ಅವರು ಸಾಂತ್ವಾನ ಹೇಳಿದರು.

 

andolana

Recent Posts

ನೇಪಾಳದಲ್ಲಿ ಮತ್ತೆ ಪ್ರವಾಹ, ಭೂಕುಸಿತ

ಕಠ್ಮಂಡು: ನೇಪಾಳದಲ್ಲಿ ಮತ್ತೆ ಪ್ರವಾಹ, ಭೂಕುಸಿತದ ಆರ್ಭಟ ಮುಂದುವರಿದಿದ್ದು, ಕೇವಲ 8 ಸೆಕೆಂಡ್‌ಗಳಲ್ಲಿ ಪರ್ವತವೇ ಕುಸಿದು ಬಿದ್ದಿದೆ! ವಿವಿಧೆಡೆ ಸಂಭವಿಸಿದ…

8 hours ago

ಕಾಡುಹಂದಿ ದಾಳಿ: ರೈತನಿಗೆ ಗಂಭೀರ ಗಾಯ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಪಳನಿಮೇಡ್ ಗ್ರಾಮದಲ್ಲಿ ರೈತನ ಮೇಲೆ ಕಾಡುಹಂದಿ ದಾಳಿ ಮಾಡಿದ್ದು,…

8 hours ago

ಶೀಘ್ರದಲ್ಲೇ ಅಕ್ರಮ ಸೈಟ್‌ಗಳ ಪಟ್ಟಿ ಬಿಡುಗಡೆ: ಸಚಿವ ಯತೀಂದ್ರ ಸಿದ್ದರಾಮಯ್ಯ

ಮೈಸೂರು: ಮುಡಾ 50:50 ಸೈಟ್‌ ವಿಚಾರದಲ್ಲಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಮಹತ್ವದ ಮಾಹಿತಿ ನೀಡಿದ್ದಾರೆ. ಶೀಘ್ರದಲ್ಲೇ ಅಕ್ರಮ ಸೈಟ್‌ಗಳ…

10 hours ago

ಮೈಸೂರು ದಸರಾ ಉದ್ಘಾಟನೆ ಆಹ್ವಾನ ತಿರಸ್ಕರಿಸಿಲ್ಲ: ಗವಿಸಿದ್ಧೇಶ್ವರ ಶ್ರೀಗಳಿಂದ ಸ್ಪಷ್ಟನೆ

ಕೊಪ್ಪಳ: ಮೈಸೂರು ದಸರಾ ಉದ್ಘಾಟನೆ ಕುರಿತು ಹರಿದಾಡುತ್ತಿದ್ದ ವದಂತಿಗಳಿಗೆ ಗವಿಮಠದ ಗವಿಸಿದ್ದೇಶ್ವರ ಸ್ವಾಮೀಜಿ ತೆರೆ ಎಳೆದಿದ್ದಾರೆ. ಮೈಸೂರು ದಸರಾ ಉದ್ಘಾಟನೆಗೆ…

11 hours ago

ಬ್ಯಾಂಕ್‌ ಗ್ರಾಹಕರಿಗೆ ಗುಡ್‌ನ್ಯೂಸ್‌: ಇಂದಿನಿಂದ 3 ದಿನ ಕರೆ ನೀಡಿದ್ದ ಬ್ಯಾಂಕ್‌ ಮುಷ್ಕರ ಮುಂದೂಡಿಕೆ

ನವದೆಹಲಿ: ಬ್ಯಾಂಕ್‌ ಗ್ರಾಹಕರಿಗೆ ಯಾವುದೇ ಆತಂಕ ಬೇಡ. ಇಂದಿನಿಂದ ನಡೆಯಬೇಕಿದ್ದ 3 ದಿನಗಳ ಬ್ಯಾಂಕ್‌ ಮುಷ್ಕರ ಮುಂದೂಡಿಕೆಯಾಗಿದೆ. ಬ್ಯಾಂಕ್‌ ಸೇವೆಗಳಲ್ಲಿ…

11 hours ago

ಎಸ್‌ಐಆರ್: ಜನಾಗ್ರಹಕ್ಕೆ ದೊರೆಯಲಿ ಮನ್ನಣೆ

ಪ್ರಜಾತಂತ್ರ ವ್ಯವಸ್ಥೆಯ ಭಾರತದಲ್ಲಿ ಪ್ರತಿ ಐದು ವರ್ಷಗಳಿಗೊಮ್ಮೆ ಸಂಸತ್ತು ಮತ್ತು ವಿಧಾನಸಭೆಗಳಿಗೆ ಮುಕ್ತ ಮತ್ತು ನಿಷ್ಪಕ್ಷಪಾತ ಚುನಾವಣೆಯನ್ನು ನಡೆಸುವ ಮೂಲಕ…

15 hours ago