ಮಂಡ್ಯ

ಬೇಬಿ ಬೆಟ್ಟದಲ್ಲಿ ಟ್ರಯಲ್ ಬ್ಲಾಸ್ಟ್ ಗೆ ತಾತ್ಕಾಲಿಕ ತಡೆ : ಸಚಿವ ಚಲುವರಾಯಸ್ವಾಮಿ

ಮಂಡ್ಯ :  ಜಿಲ್ಲೆಯ ಪಾಂಡವಪುರದ ಬೇಬಿ ಬೆಟ್ಟದಲ್ಲಿ ಟ್ರಯಲ್‌ ಬ್ಲಾಸ್ಟ್‌ ನಡೆಸಲು ಸರ್ಕಾರ ಮುಂದಾಗಿದ್ದು, ರೈತರು ಸಾಕಷ್ಟು ವಿರೋಧ ವ್ಯಕ್ತಪಡಿಸಿ ಪ್ರತಿಭಟನೆ ನಡೆಸಿದ್ದರು. ಹೀಗಾಗಿ ಇಂದು ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಉಸ್ತುವಾರಿ ಸಚಿವ ಚಲುವರಾಯಸ್ವಾಮಿ ನೇತೃತ್ವದಲ್ಲಿ ಸಭೆ ನಡೆಸಲಾಗಿದೆ.

ಇನ್ನು ಸಭೆಯಲ್ಲಿ ಸಚಿವ ಚೆಲುವರಾಯಸ್ವಾಮಿ ಮಾತನಾಡಿ, ಬೇಬಿ ಬೆಟ್ಟದ ಟ್ರಯಲ್‌ ಬ್ಲಾಸ್ಟ್‌ ಗೆ ತಾತ್ಕಾಲಿಕ ತಡೆ ನೀಡಲಾಗಿದೆ. ಇದು ೨೦೧೮ ರಿಂದ ಇದೆ. ಸಾಕಷ್ಟು ರೈತರು ಟ್ರಯಲ್‌ ಬ್ಲಾಸ್ಟ್‌ ಬೇಡ ಎಂದು ಹೇಳಿದ್ದಾರೆ. ಸರ್ಕಾರ ಮತ್ತು ನಮಗೆ ಬೇರೆ ಯಾವ ವಿಶೇಷ ಕಾಳಜಿ ಇಲ್ಲ ನಮಗೆ ಜಲಾಶಯದ ಸುರಕ್ಷತೆ ಮುಖ್ಯ. ಈಗಾಗಲೇ ರೂತರು ನಮ್ಮನ್ನ ಭೇಟಿ ಮಾಡಿ ಮನವಿ ಸಲ್ಲಿಸಿದ್ದಾರೆ  ಎಂದು ಹೇಳಿದರು.

ಅಲ್ಲದೆ ಟ್ರಯಲ್‌ ಬ್ಲಾಸ್ಟ್‌ ನಡೆಸಿ ವರದಿ ಕೋಡಿ ಎಂದು ಕೋರ್ಟ್‌ ಸೂಚನೆ ನೀಡಿದೆ. ನಾವು ಕೂಡ ಸಂಪೂರ್ಣ ಮಾಹಿತಿ ಪಡೆಯಲು ಮುಂದಾಗಿದ್ದೇವೆ. ನಾವು ಎಲ್ಲರ ಜೊತೆ ಚರ್ಚೆ ಮಾಡುತ್ತಿದ್ದೇವೆ. ಅಡ್ವೋಕೇಟ್‌ ಜನರಲ್‌ ಜೊತೆ ಚರ್ಚೆ ಮಾಡಿ ಜುಲೈ ೧೫ ರ ಒಳಗೆ ಕೋರ್ಟ್‌ ಗೆ ಮನವಿ ಸಲ್ಲಿಸುತ್ತೇವೆ.  ಸರ್ಕಾರ ಕೂಡ ಏನು ಮನವಿ ಮಾಡಬೇಕು ಎಂದು ತಿಳಿಸುತ್ತದೆ.  ಟ್ರಯಲ್‌ ಬ್ಲಾಸ್ಟ್‌ ಅಂತಿಮ ದಿನಾಂಕ ನಿಗದಿ ಮಾಡಿಲ್ಲ. ಸಿಎಂ ಜೊತೆ ಚರ್ಚೆ ಮಾಡಿ ಸಭೆ ಮಾಡಿ ತೀರ್ಮಾನ ಮಾಡುತ್ತೇವೆ. ವೈಯಕ್ತಿಯ ಗಣಿಗಾರಿಕೆ ನಮಗೆ ಮುಖ್ಯವಲ್ಲ. ಮತ್ತೊಂದು ಡ್ಯಾಂ ಕಟ್ಟಲು ಸಾಧ್ಯವಿಲ್ಲ ಎಂದು ಎಲ್ಲರಿಗೂ ಗೊತ್ತಿದೆ. ಜಲಾಶಯಕ್ಕೆ ಒಂದು ಸಣ್ಣ ಹಾನಿಯಾಗದಂತೆ ನೋಡಿಕೊಳ್ಳುತ್ತೇವೆ ಎಂದು ಸಚಿವರು ತಿಳಿಸಿದರು.

ಸಭೆಯಲ್ಲಿ ಅಧಿಕಾರಿಗಳು, ರೈತರು ಹಾಗೂ ಶಾಸಕರಾದ ಗಣಿಗ ರವಿಕುಮಾರ್‌ , ರಮೇಶ್‌ ಬಂಡಿಸಿದ್ದೇಗೌಡ , ಡಿಸಿ ಡಾ ಕುಮಾರ್‌ , ಜಿಪಂ ಸಿಇಒ, ಎಎಸ್ಪಿ , ಗಣಿ ಮತ್ತು ಭೂ ವಿಜ್ಞಾನ ಅಧಿಕಾರಿಗಳು, ನೀರಾವರಿ ಇಲಾಖೆಯ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.

ಸವಿತಾ ಆಕಾಂಕ್ಷ್‌

ಮೂಲತಃ ಮೈಸೂರು ಜಿಲ್ಲೆಯ ಗೆಜ್ಜಗಳ್ಳಿ ಗ್ರಾಮದ ನಿವಾಸಿಯಾಗಿರುವ ನಾನು ಮೈಸೂರಿನ ಜೆಎಸ್‌ ಎಸ್‌ ಕಾಲೇಜಿನಲ್ಲಿ ಪದವಿ ಪಡೆದುಕೊಂಡಿದ್ದೇನೆ. ಬಳಿಕ ಮೈಸೂರಿನ ಸ್ಥಳೀಯ ಮಟ್ಟದ ಖಾಸಗಿ ಸುದ್ದಿ ವಾಹಿನಿಗಳಲ್ಲಿ ಹಾಗೂ ಪ್ರಾದೇಶಿಕ ದಿನಪತ್ರಿಕೆಯಲ್ಲಿ ಕೆಲಸ ಮಾಡಿದ್ದು, ಆರೂವರೆ ವರ್ಷಗಳ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಕಾಡುಪ್ರಾಣಿಗಳ ರಕ್ಷಣೆ ಮತ್ತು ಅರಣ್ಯ ಸಂರಕ್ಷಣೆ ಹಾಗೂ ವನ್ಯಜೀವಿಗಳ ಅಧ್ಯಯನ ಮಾಡುತ್ತಾ ಹೊಸ ಹೊಸ ವಿಷಯ ತಿಳಿದುಕೊಳ್ಳುವುದರಲ್ಲಿ ನನಗೆ ಆಸಕ್ತಿ ಹೆಚ್ಚಿದೆ. ಸಿಗುವ ಒಂದಷ್ಟು ಸಮಯ ಕುಟುಂಬಸ್ಥರೊಟ್ಟಿಗೆ ಕಾಲ ಕಳೆಯುತ್ತೇನೆ. ಜೊತೆಗೆ ವನ್ಯಜೀವಿಗಳ ಕುರಿತ ಪುಸ್ತಕ ಓದುವುದು ನನ್ನ ಮತ್ತೊಂದು ಹವ್ಯಾಸವಾಗಿದೆ.

Recent Posts

ಹುಣಸೆ, ಹಲಸು ಮತ್ತು ನೇರಳೆಗಾಗಿ ರಾಷ್ಟ್ರೀಯ ಮಂಡಳಿ ರಚಿಸಲು ಕೇಂದ್ರಕ್ಕೆ ಹೆಚ್.ಡಿ.ದೇವೇಗೌಡರ ಮನವಿ

ಹೊಸದಿಲ್ಲಿ: ಮಾಜಿ ಪ್ರಧಾನಿಗಳು ಹಾಗೂ ರಾಜ್ಯಸಭಾ ಸದಸ್ಯರಾದ ಹೆಚ್.ಡಿ. ದೇವೇಗೌಡರು ಶುಕ್ರವಾರ ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ಖಾತೆ…

8 hours ago

ಪೌರಕಾರ್ಮಿಕರು ಸೇರಿ ಎಲ್ಲಾ ಕಾರ್ಮಿಕರಿಗೆ ಪಾಲಿಕೆಯಿಂದಲೇ ನೇರ ವೇತನ ಪಾವತಿಗೆ ಕ್ರಮ : ಬೈರತಿ ಸುರೇಶ್

ವಿಧಾನಸಭೆ : ರಾಜ್ಯದಲ್ಲಿರುವ ಮಹಾನಗರಪಾಲಿಕೆಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಪೌರ ಕಾರ್ಮಿಕರು, ಚಾಲಕರು, ಲೋಡರ್ ಗಳು, ತ್ಯಾಜ್ಯ ಸಂಗ್ರಹಕಾರರು ಸೇರಿದಂತೆ ಇನ್ನಿತರೆ…

9 hours ago

ಮೈಸೂರು | ನಾಳೆ ಗಿಚ್ಚಿ ಗಿಲಿಗಿಲಿ ಜೂನಿಯರ‍್ಸ್ ರಿಯಾಲಿಟಿ ಶೋʼನ ಆಡಿಷನ್‌

ಮೈಸೂರು : ಕಲರ್ಸ್ ಕನ್ನಡ ವಾಹಿನಿಯ ‘ಗಿಚ್ಚಿ ಗಿಲಿಗಿಲಿ ಜೂನಿಯರ‍್ಸ್’ ರಿಯಾಲಿಟಿ ಷೋಗಾಗಿ ಡಿ.20 ರಂದು ಬೆಳಿಗ್ಗೆ 11 ಗಂಟೆಗೆ…

10 hours ago

ಆರೋಗ್ಯ ಸೇತು-ಸಂಚಾರಿ ಆರೋಗ್ಯ ಘಟಕಕ್ಕೆ ಸಿಎಂ ಚಾಲನೆ

ಬೆಳಗಾವಿ : ಆರೋಗ್ಯ ಸೇವೆಯಿಂದ ವಂಚಿತರಾಗಿರುವ ಜನರಿಗೆ ಆರೋಗ್ಯ ಸೇತು-ಸಂಚಾರಿ ಆರೋಗ್ಯ ಘಟಕ ಯೋಜನೆ ನೆರವಾಗಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ…

10 hours ago

ಸಿನಿಮಾ ಜವಾಬ್ದಾರಿಯುಳ್ಳ ಶಿಕ್ಷಣದ ಮಾಧ್ಯಮವಾಗಬೇಕು : ನಿರ್ದೇಶಕ ಸುರೇಶ್‌ ಆಶಯ

ಮೈಸೂರು : ಸಿನಿಮಾಗಳು ಮನರಂಜನೆಗಷ್ಟೇ ಸೀಮಿತವಾಗದೆ ಸಾಮಾಜಿಕ ಜವಾಬ್ದಾರಿಯುಳ್ಳ ಶಿಕ್ಷಣದ ಮಾಧ್ಯಮವಾಗಬೇಕು ಎಂದು ಖ್ಯಾತ ನಿರ್ದೇಶಕ ಬಿ.ಸುರೇಶ್ ಆಶಿಸಿದರು. ನಗರದ…

10 hours ago

ಬಾಲ್ಯ ವಿವಾಹ, ಬಾಲ ಕಾರ್ಮಿಕ ಪದ್ಧತಿಗಳ ಕುರಿತು ಅರಿವು ಮೂಡಿಸಿ : ಜಿಲ್ಲಾಧಿಕಾರಿ ಸೂಚನೆ

ಮೈಸೂರು : ಅಲ್ಪಸಂಖ್ಯಾತರ ಸಮುದಾಯ ವಾಸಿಸುವ ಸ್ಥಳಗಳಲ್ಲಿ ಬಾಲ್ಯ ವಿವಾಹ ಹಾಗೂ ಬಾಲಕಾರ್ಮಿಕ ಪದ್ಧತಿಗಳ ದುಷ್ಪರಿಣಾಮಗಳ ಕುರಿತು ಅರಿವು ಕಾರ್ಯಕ್ರಮಗಳನ್ನು…

10 hours ago