Categories: ಮಂಡ್ಯ

KRS ಜಲಾಶಯದಿಂದ ೧೦ ಸಾವಿರ ಕ್ಯೂಸೆಕ್ ಗೂ ಅಧಿಕ ನೀರು ಬಿಡುಗಡೆ

ಮಂಡ್ಯ  : ಶ್ರೀರಂಗಪಟ್ಟಣ ತಾಲೂಕಿನ ಕೆಆರ್‌ ಎಸ್‌ ಜಲಾಶಯ ಭರ್ತಿಯ ಅಂಚಿನಲ್ಲಿರುವ ಹಿನ್ನೆಲೆ ಡ್ಯಾಂನಿಂದ ಕಾವೇರಿ ನದಿಗೆ ೧೦ ಸಾವಿರ ಕ್ಯೂಸೆಕ್‌ ಗೂ ಅಧಿಕ ನೀರು ರಿಲೀಸ್‌ ಮಾಡಲಾಗಿದೆ.

ಜಲಾಶಯದ ೧೦ ಗೇಟ್‌ ಗಳ ಮೂಲಕ ೧೦ ಸಾವಿರ ಕ್ಯೂಸೆಕ್‌ ಅಧಿಕ ನೀರು ಹೊರಕ್ಕೆ ಬಿಡಲಾಗುತ್ತಿದೆ. ಡ್ಯಾಂನಿಂದ ನೀರು ಹಾಲ್ನೊರೆಯಂತೆ ರಭವಸವಾಗಿ ಬಂಡೆಗಳಿಗೆ ಅಪ್ಪಳಿಸಿಕೊಂಡು ಬರುತ್ತಿದ್ದು, ಕಾವೇರಿ ನದಿಗೆ ಜೀವಕಳೆ ಬಂದಿದೆ. ಪ್ರವಾಹ ಭೀತಿ ಹಿನ್ನೆಲೆ ನದಿ ಪಾತ್ರದ ಜನರಿಗೆ ಎಚ್ಚರಿಕೆಯಿಂದಿರಲು ಸೂಚನೆ ನೀಡಲಾಗಿದೆ. ಕಾವೇರಿ ಜಲಾನಯನ ಪ್ರದೇಶದಲ್ಲಿ ಉತ್ತಮ ಮಳೆ ಮುಂದುವರೆದಿರುವ ಕಾರಣ ಒಳ ಹರಿವಿನ ಪ್ರಮಾಣ ಮತ್ತಷ್ಟು ಏರಿಕೆಯಾಗುತ್ತಿದೆ. ಇನ್ನು ಸಂಜೆ ವೇಳೆಗೆ ಜಲಾಶಯದಿಂದ ಹೊರ ಹರಿವಿನ ಪ್ರಮಾಣ ಮತ್ತಷ್ಟು ಏರಿಕೆಯಾಗುವ ಸಾಧ್ಯತೆ ಇದೆ.

ಸವಿತಾ ಆಕಾಂಕ್ಷ್‌

ಮೂಲತಃ ಮೈಸೂರು ಜಿಲ್ಲೆಯ ಗೆಜ್ಜಗಳ್ಳಿ ಗ್ರಾಮದ ನಿವಾಸಿಯಾಗಿರುವ ನಾನು ಮೈಸೂರಿನ ಜೆಎಸ್‌ ಎಸ್‌ ಕಾಲೇಜಿನಲ್ಲಿ ಪದವಿ ಪಡೆದುಕೊಂಡಿದ್ದೇನೆ. ಬಳಿಕ ಮೈಸೂರಿನ ಸ್ಥಳೀಯ ಮಟ್ಟದ ಖಾಸಗಿ ಸುದ್ದಿ ವಾಹಿನಿಗಳಲ್ಲಿ ಹಾಗೂ ಪ್ರಾದೇಶಿಕ ದಿನಪತ್ರಿಕೆಯಲ್ಲಿ ಕೆಲಸ ಮಾಡಿದ್ದು, ಆರೂವರೆ ವರ್ಷಗಳ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಕಾಡುಪ್ರಾಣಿಗಳ ರಕ್ಷಣೆ ಮತ್ತು ಅರಣ್ಯ ಸಂರಕ್ಷಣೆ ಹಾಗೂ ವನ್ಯಜೀವಿಗಳ ಅಧ್ಯಯನ ಮಾಡುತ್ತಾ ಹೊಸ ಹೊಸ ವಿಷಯ ತಿಳಿದುಕೊಳ್ಳುವುದರಲ್ಲಿ ನನಗೆ ಆಸಕ್ತಿ ಹೆಚ್ಚಿದೆ. ಸಿಗುವ ಒಂದಷ್ಟು ಸಮಯ ಕುಟುಂಬಸ್ಥರೊಟ್ಟಿಗೆ ಕಾಲ ಕಳೆಯುತ್ತೇನೆ. ಜೊತೆಗೆ ವನ್ಯಜೀವಿಗಳ ಕುರಿತ ಪುಸ್ತಕ ಓದುವುದು ನನ್ನ ಮತ್ತೊಂದು ಹವ್ಯಾಸವಾಗಿದೆ.

Recent Posts

ತಾಪಮಾನ ಇಳಿಕೆ : ಬೆಂಗಳೂರಲ್ಲಿ ಚಳಿ ಹೆಚ್ಚಳ

ಬೆಂಗಳೂರು : ಬೆಂಗಳೂರಿನಲ್ಲಿ ಕನಿಷ್ಠ 15 ಡಿಗ್ರಿ ಸೆಲ್ಸಿಯಸ್ ಮತ್ತು ಗರಿಷ್ಟ ತಾಪಮಾನ 26 ಡಿಗ್ರಿ ಸೆಲ್ಸಿಯಸ್ ವರೆಗೆ ಇರುತ್ತದೆ…

10 hours ago

ಸಿಎ ಸೈಟ್‌ ಕಟ್ಟಡ ನಿರ್ಮಾಣ ಕಾಲಮಿತಿ ; 3 ವರ್ಷದಿಂದ 5 ವರ್ಷ ಹೆಚ್ಚಳದ ಭರವಸೆ

ಬೆಳಗಾವಿ : ಸರ್ಕಾರದಿಂದ ಪಡೆದ ಸಿಎ ನಿವೇಶನಗಳಲ್ಲಿ ಕಟ್ಟಡ ನಿರ್ಮಾಣ ಮಾಡಲು ಈಗಿರುವ ಮೂರು ವರ್ಷಗಳ ಮಿತಿಯನ್ನು ಐದು ವರ್ಷಗಳಿಗೆ…

10 hours ago

ಮೈಸೂರು : ಆನ್‌ಲೈನ್‌ನಲ್ಲಿ ವೈದ್ಯರೊಬ್ಬರಿಗೆ 82 ಲಕ್ಷ ರೂ. ವಂಚನೆ

ಮೈಸೂರು : ಭಾರತೀಯ ದೂರ ಸಂಪರ್ಕ ನಿಯಂತ್ರಣ ಪ್ರಾಧಿಕಾರ(ಟ್ರಾಯ್) ಹಾಗೂ ಮುಂಬೈನ ಬಾಂಧ್ರಾ ಪೊಲೀಸ್ ಅಧಿಕಾರಿ ಸೋಗಿನಲ್ಲಿ ನಗರದ ವೈದ್ಯರೊಬ್ಬರಿಗೆ…

10 hours ago

SC/ST ದೌರ್ಜನ್ಯ ತಡೆ : ನಾಗರಿಕ ಹಕ್ಕು ಜಾರಿ ನೂತನ ಠಾಣೆ ಮೈಸೂರಲ್ಲಿ ಕಾರ್ಯರಂಭ

ಮೈಸೂರು : ಜಾತಿ ನಿಂದನೆ, ಅಸ್ಪೃಶ್ಯತೆ ಆಚರಣೆ ಪ್ರಕರಣಗಳಿಗೆ ಸಂಬಂಧಿಸಿದಂತೆ ದೂರು ದಾಖಲು ಹಾಗೂ ತನಿಖೆ ನಡೆಸುವ ಉದ್ದೇಶದಿಂದ ಆರಂಭಗೊಂಡಿರುವ…

10 hours ago

ಕೆಪಿಎ-ಮಹಿಳಾ-ಮಕ್ಕಳ ಅಭಿವೃದ್ಧಿ ಸಂಸ್ಥೆ ನಡುವೆ ಒಡಂಬಡಿಕೆ

ಮೈಸೂರು : ಕರ್ನಾಟಕ ಪೊಲೀಸ್ ಅಕಾಡೆಮಿ ಮತ್ತು ಸಾವಿತ್ರಿಬಾಯಿ ಫುಲೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಂಸ್ಥೆಯ ನಡುವೆ ಒಡಂಬಡಿಕೆಗೆ…

10 hours ago

ಮೈಸೂರಲ್ಲಿ ಎಸ್.ಎಲ್.ಬೈರಪ್ಪ ಸ್ಮಾರಕ ನಿರ್ಮಾಣ : ಸಿಎಂ ಘೋಷಣೆ

ಬೆಳಗಾವಿ (ಸುವರ್ಣಸೌಧ) : ಇತ್ತೀಚೆಗೆ ನಿಧನರಾದ ಸಾಹಿತಿ ಎಸ್.ಎಲ್.ಭೈರಪ್ಪ ಅವರ ಸ್ಮಾರಕವನ್ನು ಮೈಸೂರಿನಲ್ಲಿ ನಿರ್ಮಿಸಲು ತೀರ್ಮಾನಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ…

11 hours ago