ಮಂಡ್ಯ

ಕುಡಿಯುವ ನೀರಿನ ಪರೀಕ್ಷೆ ಕಡ್ಡಾಯ: ಜಿಲ್ಲಾಧಿಕಾರಿ ಡಾ. ಕುಮಾರ

ಮಂಡ್ಯ:  ಜಿಲ್ಲೆಯ ಸಾರ್ವಜನಿಕರಿಗೆ ಕುಡಿಯುವ ನೀರನ್ನು ಸರಬರಾಜು ಮಾಡುವ ಮುನ್ನ ನಿಯಮಿತವಾಗಿ ನೀರಿನ ಪರೀಕ್ಷೆ ನಡೆಸಿ ಎಂದು ಜಿಲ್ಲಾಧಿಕಾರಿ ಡಾ. ಕುಮಾರ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.

ಅವರು ಇಂದು ಜಿಲ್ಲಾಧಿಕಾರಿ ಕಛೇರಿಯ ಸಭಾಂಗಣದಲ್ಲಿ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಸಾರ್ವಜನಿಕರಿಗೆ ಸರಬರಾಜು ಮಾಡುತ್ತಿರುವ ಕುಡಿಯುವ ನೀರಿನ ಗುಣಮಟ್ಟ ಪರಿಶೀಲನೆ ಮತ್ತು ಕುಡಿಯುವ ನೀರಿನ ವ್ಯವಸ್ಥೆ ಕುರಿತು ಸಭೆ ನಡೆಸಿ ಮಾತನಾಡಿದರು.

ಕಲುಷಿತ ನೀರು ಸೇವನೆಯಿಂದ ಸಾರ್ವಜನಿಕರ ಆರೋಗ್ಯದ ಮೇಲೆ ದುಷ್ಪರಿಣಾಮ ಉಂಟಾಗುತ್ತದೆ. ಕುಡಿಯುವ ನೀರಿಗೆ ಯಾವುದೇ ಕಲುಷಿತ ನೀರು ಸೇರ್ಪಡೆಯಾಗದಂತೆ ಎಚ್ಚರವಹಿಸಿ ಎಂದರು.

ಜಾಕ್ವೆಲ್ ಪಾಯಿಂಟ್ ಗೆ ನೀರು ಸೇರ್ಪಡೆಯಾಗುವ ನದಿಗಳು ಯಾವುದು ಎಂಬುದನ್ನು ತಿಳಿದು, ನೀರನ್ನು ಪ್ರಯೋಗಾಲಯದಲ್ಲಿ ಪರೀಕ್ಷೆಗೆ ಒಳಪಡಿಸಬೇಕು.ಪರೀಕ್ಷೆ ನಡೆಸದೆ ಕುಡಿಯುವ ನೀರು ಸರಬರಾಜು ಮಾಡಿ ಸಾರ್ವಜನಿಕರ ಆರೋಗ್ಯಕ್ಕೆ ಯಾವುದೇ ತೊಂದರೆ ಉಂಟಾದಲ್ಲಿ ಸಂಬಂಧಪಟ್ಟ ನಗರ ಸ್ಥಳೀಯ ಸಂಸ್ಥೆಯ ಮುಖ್ಯಸ್ಥರನ್ನು ಹೊಣೆಗಾರರನ್ನಾಗಿ ಮಾಡಲಾಗುವುದು ಎಂದು ಎಚ್ಚರಿಕೆ ನೀಡಿದರು.

ನಗರ ಪ್ರದೇಶಗಳಲ್ಲಿ ನೀರಿನ ವ್ಯವಸ್ಥೆಯಡಿ ಬರುವ ಎಲ್ಲಾ ಪೈಪ್‌ ಲೈನ್ ಗಳನ್ನು ಪ್ರತಿದಿನವೂ ಕಣ್ಣಗಾವಲು ನಡೆಸಿ. ಪೈಪ್ ಲೈನ್ ಹಾನಿಯಾಗಿದ್ದರೆ ಕಲುಷಿತ ನೀರು ಕುಡಿಯುವ ನೀರಿಗೆ ಸೇರ್ಪಡೆಯಾಗುವ ಸಾಧ್ಯತೆಯಿದೆ. ಗಮನವಹಿಸಿ ದುರಸ್ಥಿ ಕಾರ್ಯ ನಡೆಯಬೇಕು ಎಂದರು.

ಒಂದು ವೇಳೆ ನಗರ ಪ್ರದೇಶಗಳಲ್ಲಿ ವಾಂತಿ, ಭೇದಿ ಪ್ರಕರಣ ಕಂಡು ಬಂದರೆ ತಕ್ಷಣ ಕುಡಿಯುವ ನೀರಿನ ಸರಬರಾಜು ವ್ಯವಸ್ಥೆಯನ್ನು ಸ್ಥಗಿತಗೊಳಿಸಿ, ಗುಣಮಟ್ಟವನ್ನು ಖಚಿತಪಡಿಸಿಕೊಳ್ಳಲು ಹೆಚ್ಚಿನ ಪರೀಕ್ಷೆಗಾಗಿ ಹತ್ತಿರದ ಇಲಾಖಾ ಪ್ರಯೋಗಾಲಯಗಳಿಗೆ ನೀರಿನ ಮಾದರಿಗಳನ್ನು ಸಲ್ಲಿಸಬೇಕು. ನೀರು ಕಲುಷಿತವೆಂದು ಕಂಡುಬಂದರೆ, ಕೂಡಲೇ ಸರಬರಾಜು ವ್ಯವಸ್ಥೆಯನ್ನು ಸಂಪೂರ್ಣವಾಗಿ ನಿಲ್ಲಿಸಿ, ಪರ್ಯಾಯ ಮೂಲಗಳಿಂದ ನೀರನ್ನು ಸರಬರಾಜು ಮಾಡಲು ಕ್ರಮಕೈಗೊಳ್ಳಿ ಎಂದು ಹೇಳಿದರು.

ನೀರಿನ ಸರಬರಾಜು ವ್ಯವಸ್ಥೆಯಲ್ಲಿರುವ ಎಲ್ಲಾ ನೀರು ಶೇಖರಣಾ ಘಟಕಗಳನ್ನು ಸ್ವಚ್ಛಗೊಳಿಸಿ ಪ್ರತಿ ಹಂತದಲ್ಲಿಯೂ ಕ್ಲೋರಿನೇಷನ್ ಮಾಡಲು ಕ್ರಮವಹಿಸಿ ಎಂದರು.

ನೀರಿನ ಮೂಲಗಳಾದ ಕೊಳವೆ ಬಾವಿಗಳ ಸುತ್ತಮುತ್ತಲೂ ಯಾವುದೇ ಕಲುಷಿತ ಅಥವಾ ಚರಂಡಿ ನೀರು ನಿಲ್ಲದಂತೆ ನೀರು ಸರಾಗವಾಗಿ ಹರಿಯಲು ಸೂಕ್ತ ಚರಂಡಿ ವ್ಯವಸ್ಥೆ ಕೈಗೊಂಡು ನೀರಿನ ಮೂಲದ ಸುತ್ತ ಕಾಂಕ್ರೀಟ್ ಕಟ್ಟೆ ಕಟ್ಟುವುದು ಸೂಕ್ತ ಎಂದು ಸಲಹೆ ನೀಡಿದರು.

ಕೆಲವು ನಗರ ಜನ ವಸತಿ ಪ್ರದೇಶಗಳಲ್ಲಿರುವ ಕೊಳವೆ ಬಾವಿಗಳ ಕೇಸಿಂಗ್ ಪೈಪ್ ಹಾನಿಯಾಗಿರುವುದು ಕಂಡು ಬಂದಿದ್ದು, ಭೂಮಿಯ ಮಟ್ಟಕ್ಕೆ ಅಥವಾ ಅದಕ್ಕಿಂತ ಕೆಳಗಿರುವ ಕೊಳವೆ ಬಾವಿಗಳ ಕೇಸಿಂಗ್ ಪೈಪ್‌ನ್ನು ಭೂಮಿಯ ಮಟ್ಟದಿಂದ ಎರಡು ಅಡಿ ಎತ್ತರಿಸಿ ಕಲುಷಿತ ನೀರು ಸೇರದಂತೆ ಸೂಕ್ತ ಮುನ್ನೆಚ್ಚರಿಕೆ ಕ್ರಮಗಳನ್ನು ವಹಿಸಿ ಎಂದರು.

ಕುಡಿಯುವ ನೀರು ಸರಬರಾಜಿನ ಕೊಳವೆ ಮಾರ್ಗಗಳು ಒಡೆದು ಹೋದಲ್ಲಿ ತಕ್ಷಣ ದುರಸ್ಥಿಪಡಿಸಲು ಕ್ರಮವಹಿಸಬೇಕು. ನೀರು ಸರಬರಾಜು ಕೊಳವೆ ಮಾರ್ಗದಲ್ಲಿ ಪೈಪ್ ಒಡೆದು ಹೋಗಿದ್ದಲ್ಲಿ, ಹೊರಗಿನ ಇತರೆ ವಸ್ತುಗಳು/ಕೊಳಚೆ ನೀರು/ಕುಡಿಯುವ ನೀರಿನ ಸರಬರಾಜಿನ ಪೈಪ್‌ಲೈನ್ ಒಳಗೆ ಹರಿಯದಂತೆ ಕ್ರಮಕೈಗೊಳ್ಳಬೇಕು ಎಂದು ತಿಳಿಸಿದರು.

ಸರ್ಕಾರದ ವಿವಿಧ ಯೋಜನೆಯಡಿ ಕುಡಿಯುವ ನೀರನ್ನು ಸರಬರಾಜು ಮಾಡಲು ನಿರ್ಮಿಸಿರುವ ಓವರ್‌ ಹೆಡ್ ಟ್ಯಾಂಕ್‌ಗಳ ನೀರಿನ ಗುಣಮಟ್ಟದ ಪರೀಕ್ಷೆಗಳನ್ನು (Both inlet & Outlet points) ಕನಿಷ್ಠ ತಿಂಗಳಿಗೊಮ್ಮೆ ಕೈಗೊಂಡು ಪರೀಕ್ಷಾ ವರದಿಗಳನ್ನು ಜಿಲ್ಲೆಯ ಕಾರ್ಯಪಾಲಕ ಅಭಿಯಂತರರುಗಳಿಗೆ ಸಲ್ಲಿಸಬೇಕು ಎಂದರು.

ಸಭೆಯಲ್ಲಿ ನಗರಾಭಿವೃದ್ಧಿಕೋಶದ ಯೋಜನಾ ನಿರ್ದೇಶಕಿ ತುಷಾರಮಣಿ, ನಗರಸಭೆ ಪೌರಾಯುಕ್ತ ಆರ್ ಮಂಜುನಾಥ್ ಸೇರಿದಂತೆ ವಿವಿಧ ತಾಲ್ಲೂಕಿನ ಮುಖ್ಯ ಅಧಿಕಾರಿಗಳು ಉಪಸ್ಥಿತರಿದ್ದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಮಂಡ್ಯ | ಕಬ್ಬಿನ ಗದ್ದೆಯಲ್ಲಿ ಮೂರು ಚಿರತೆ ಮರಿಗಳು ಪತ್ತೆ

ಮಂಡ್ಯ : ತಾಲೂಕಿನ ಸೂನಗಹಳ್ಳಿ-ಬೂತನಹೊಸೂರು ನಡುವಿನ ಹೆಬ್ಬಾಳ ಕಟ್ಟೆ ಬಳಿ ಕಬ್ಬಿನ ಗದ್ದೆಯಲ್ಲಿ ಬುಧವಾರ ಮೂರು ಚಿರತೆ ಮರಿಗಳು ಪತ್ತೆಯಾಗಿವೆ.…

2 hours ago

ಹಾರ್ಮುಜ್ ಜಲಸಂಧಿ ಬಳಿ ಅಮೆರಿಕ ದಾಳಿ : ಇರಾನಿನ ಕ್ಷಿಪಣಿ ತಾಣ ನಾಶ

ಟೆಹ್ರಾನ್ : ಇರಾನ್ ಹಿಡಿತದಲ್ಲಿದ್ದ ಜಗತ್ತಿನ ಪ್ರಮುಖ ಹಾರ್ಮುಜ್ ಜಲಸಂಧಿ ಬಳಿ ಅಮೆರಿಕ ತೀವ್ರ ದಾಳಿ ನಡೆಸಿದೆ. ಜಲಮಾರ್ಗದ ಬಳಿಕ…

3 hours ago

ಮರ್ಯಾದಾ ಹತ್ಯೆ ನಿಷೇಧ ಮಸೂದೆ ಮಂಡನೆ

ಬೆಂಗಳೂರು : ರಾಜ್ಯದಲ್ಲಿ ಮರ್ಯಾದೆಯ ಹೆಸರಿನಲ್ಲಿ ಹತ್ಯೆ, ಹಲ್ಲೆ ಮತ್ತು ಬೆದರಿಕೆ ಹಾಕುವವರಿಗೆ ಜೈಲು ಶಿಕ್ಷೆ ಮತ್ತು ದಂಡ ವಿಧಿಸುವ…

4 hours ago

ಮೈಸೂರು ನಗರದಲ್ಲಿ ಮಳೆ ; ತಂಪಾದ ಇಳೆ

ಮೈಸೂರು : ಸಾಂಸ್ಕೃತಿಕ ನಗರಿ ಮೈಸೂರಿಲ್ಲಿ ಬುಧವಾರ ಸಂಜೆ ಏಕಾಏಕಿ ಮಳೆ ಸುರಿದು ಬಿರು ಬಿಸಿಲಿನಿಂದ ಬಳಲಿದ್ದ ನಗರವನ್ನು ಸ್ವಲ್ಪ…

5 hours ago

ಯುಗಾದಿ ಸಂಭ್ರಮ : ಮೈಸೂರಲ್ಲಿ ಖರೀದಿ ಜೋರು

ಮೈಸೂರು : ನಾಡಿನಾದ್ಯಂತ ಯುಗಾದಿ ಹಬ್ಬದ ಸಂಭ್ರಮ ಜೋರಾಗಿದ್ದು, ಸಾಂಸ್ಕೃತಿಕ ನಗರಿ ಮೈಸೂರಿನಲ್ಲೂ ಹಬ್ಬದ ಕಳೆಗಟ್ಟಿದೆ. ಅರಮನೆಯಲ್ಲಿ ವಿಶೇಷ ಸಾಂಸ್ಕೃತಿಕ…

6 hours ago

ನಾಳೆ ಧುರಂಧರ್-2 ಬಿಡುಗಡೆ : ಎಲ್ಲಾ ದಾಖಲೆ ಮುರಿಯುವ ನಿರೀಕ್ಷೆ

ಮುಂಬೈ : ಆದಿತ್ಯ ಧರ್‌ ನಿರ್ದೇಶನದ, ರಣವೀರ್‌ ನಟನೆಯ ಧುರಂಧರ್-2 ಚಿತ್ರದ ಎರಡನೇ ಭಾಗವು ನಾಳೆ(ಮಾರ್ಚ್.‌19) ಬಿಡುಗಡೆಯಾಗಲಿದೆ. ಕಳೆದ ವರ್ಷ…

7 hours ago